ಏಷ್ಯಾ ಕಪ್ ಟಿ20 ಟೂರ್ನಿಯಲ್ಲಿ ಸತತ ಎರಡನೇ ಗೆಲುವು ಸಾಧಿಸಿದ ಭಾರತ ಮಹಿಳಾ ತಂಡ!
ಏಷ್ಯಾ ಕಪ್ ಟಿ20 ಟೂರ್ನಿಯಲ್ಲಿ ಟೀಂ ಇಂಡಿಯಾ ಮಹಿಳಾ ತಂಡದ ನಾಯಕಿ ಹರ್ಮನ್ ಪ್ರೀತ್ ಕೌರ್ ಆಲ್ ರೌಂಡರ್ ಪ್ರದರ್ಶನದಿಂದಾಗಿ ತಂಡ ಥಾಯ್ಲೆಂಡ್ ವಿರುದ್ಧ 66 ರನ್ ಗಳಿಂದ ಗೆಲುವು ಸಾಧಿಸಿದೆ...

Published On :
ಕೌಲಲಾಂಪುರ: ಏಷ್ಯಾ ಕಪ್ ಟಿ20 ಟೂರ್ನಿಯಲ್ಲಿ ಟೀಂ ಇಂಡಿಯಾ ಮಹಿಳಾ ತಂಡದ ನಾಯಕಿ ಹರ್ಮನ್ ಪ್ರೀತ್ ಕೌರ್ ಆಲ್ ರೌಂಡರ್ ಪ್ರದರ್ಶನದಿಂದಾಗಿ ತಂಡ ಥಾಯ್ಲೆಂಡ್ ವಿರುದ್ಧ 66 ರನ್ ಗಳಿಂದ ಗೆಲುವು ಸಾಧಿಸಿದೆ.
ಪ್ರಥಮ ಪಂದ್ಯದಲ್ಲಿ ಮಲೇಶ್ಯಾ ತಂಡವನ್ನು 142 ರನ್ ಗಳಿಂದ ಮಣಿಸಿದ್ದ ಮಹಿಳೆ ತಂಡ ಇಂದು ನಡೆದ ಥಾಯ್ಲೆಂಡ್ ವಿರುದ್ಧದ ಪಂದ್ಯದಲ್ಲಿ 66 ರನ್ ಗಳಿಂದ ಗೆಲುವು ಸಾಧಿಸಿ ಟೂರ್ನಿಯಲ್ಲಿ ಸತತ ಎರಡನೇ ಗೆಲುವು ಸಾಧಿಸಿದೆ.
ಮೊದಲು ಬ್ಯಾಟ್ ಮಾಡಿದ ಭಾರತ ಮಹಿಳಾ ತಂಡ ನಿಗದಿತ ಓವರ್ ನಲ್ಲಿ 4 ವಿಕೆಟ್ ನಷ್ಟಕ್ಕೆ 132 ರನ್ ಗಳಿಸಿತ್ತು. 133 ರನ್ ಗಳ ಗುರಿ ಪಡೆದ ಥಾಯ್ಲೆಂಡ್ ನಿಗದಿತ ಓವರ್ ನಲ್ಲಿ 8 ವಿಕೆಟ್ ನಷ್ಟಕ್ಕೆ ಕೇವಲ 66 ರನ್ ಪೇರಿಸಲಷ್ಟೆ ಸಾಧ್ಯವಾಯಿತು. ಇದರೊಂದಿಗೆ ಭಾರತಕ್ಕೆ 66 ರನ್ ಗಳಿಂದ ಶರಣಾಯಿತು.
ಭಾರತ ಪರ ಮೇಶ್ರಂ 32, ಸ್ಮೃತಿ ಮಂದಾನ 29, ಹರ್ಮನ್ ಪ್ರೀತ್ ಕೌರ್ 27 ರನ್ ಸಿಡಿಸಿದ್ದಾರೆ.
ಥಾಯ್ಲೆಂಡ್ ಪರ ಚಾಯ್ ವಾಯ್ 14, ಬೂಚಾಥಮ್ 21 ಮತ್ತು ಸುತಿರುವಾಂಗ್ 12 ರನ್ ಬಾರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Thailandಥಾಯ್ಲೆಂಡ್ಭಾರತ ಮಹಿಳಾ ತಂಡAsia Cup T20Harmanpreet Kaurಹರ್ಮನ್ ಪ್ರೀತ್ ಕೌರ್ಏಷ್ಯಾ ಕಪ್ ಟಿ20Indian womens Team
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


