ಕ್ರಿಕೆಟ್

ಬಾಂಗ್ಲಾ ವಿರುದ್ಧ ಟಿ20 ಸರಣಿ ಗೆದ್ದು ಐತಿಹಾಸಿಕ ದಾಖಲೆ ಬರೆದ ಆಫ್ಘಾನಿಸ್ತಾನ

ಬಾಂಗ್ಲಾದೇಶ ವಿರುದ್ಧದ ಮೂರು ಟಿ20 ಪಂದ್ಯಗಳ ಪೈಕಿ ಎರಡು ಪಂದ್ಯಗಳಲ್ಲಿ ಗೆಲುವು ಸಾಧಿಸುವ ಮೂಲಕ ಆಫ್ಘಾನಿಸ್ತಾನ ಟಿ20 ಸರಣಿ ಗೆದ್ದು ಐತಿಹಾಸಿಕ ದಾಖಲೆ ಬರೆದಿದೆ...

ಬಾಂಗ್ಲಾ ವಿರುದ್ಧ ಟಿ20 ಸರಣಿ ಗೆದ್ದು ಐತಿಹಾಸಿಕ ದಾಖಲೆ ಬರೆದ ಆಫ್ಘಾನಿಸ್ತಾನ
ರಶೀದ್ ಖಾನ್
Published On :
ಡೆಹ್ರಾಡೂನ್: ಬಾಂಗ್ಲಾದೇಶ ವಿರುದ್ಧದ ಮೂರು ಟಿ20 ಪಂದ್ಯಗಳ ಪೈಕಿ ಎರಡು ಪಂದ್ಯಗಳಲ್ಲಿ ಗೆಲುವು ಸಾಧಿಸುವ ಮೂಲಕ ಆಫ್ಘಾನಿಸ್ತಾನ ಟಿ20 ಸರಣಿ ಗೆದ್ದು ಐತಿಹಾಸಿಕ ದಾಖಲೆ ಬರೆದಿದೆ. 
ಡೆಹ್ರಾಡೂನ್ ನಲ್ಲಿ ನಡೆದ ಎರಡನೇ ಟಿ20 ಪಂದ್ಯದಲ್ಲಿ ಆಫ್ಘಾನ್ ತಂಡ ಆರು ವಿಕೆಟ್ ಗಳಿಂದ ಗೆದ್ದು ಸರಣಿ ಕೈವಶ ಮಾಡಿಕೊಂಡಿದೆ. 
ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ ನಿಗದಿತ ಓವರ್ ನಲ್ಲಿ 8 ವಿಕೆಟ್ ನಷ್ಟಕ್ಕೆ 134 ಪೇರಿಸಿತ್ತು. 135 ರನ್ ಗಳ ಸಾಧಾರಣ ಮೊತ್ತವನ್ನು ಬೆನ್ನಟ್ಟಿದ ಆಫ್ಘಾನಿಸ್ತಾನ ಇನ್ನು 7 ಎಸೆತ ಇರುವಂತೆ 135 ರನ್ ಬಾರಿಸಿ ಗೆಲುವಿನ ನಗೆ ಬೀರಿತು. 
ಬಾಂಗ್ಲಾ ಪರ ತಮಿಮ್ ಇಕ್ಬಾಲ್ 43, ಮುಷ್ಫಿಕರ್ ರಮೀಮ್ 22, ಅಬು ಹೈದರ್ ಅಜೇಯ 21 ರನ್ ಬಾರಿಸಿದ್ದಾರೆ. ಆಫ್ಘಾನ್ ಪರ ಬೌಲಿಂಗ್ ನಲ್ಲಿ ರಶೀದ್ ಖಾನ್ 4 ವಿಕೆಟ್ ಪಡೆದು ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. 
ಆಫ್ಘಾನ್ ಪರ ಬ್ಯಾಟಿಂಗ್ ನಲ್ಲಿ ಸಮಿಹುಲ್ಲಾ ಶೇನ್ವಾರಿ 49, ಮೊಹಮ್ಮದ್ ಶಹಜಾದ್ 24, ಮೊಹಮ್ಮದ್ ನಬಿ ಅಜೇಯ 31 ರನ್ ಸಿಡಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.