34 ವರ್ಷಗಳ ಬಳಿಕ ಅಂಕಪಟ್ಟಿಯಲ್ಲಿ ಪಾತಾಳಕ್ಕೆ ಕುಸಿದ ಆಸ್ಟ್ರೇಲಿಯಾ!
ಹಲವು ದಶಕಗಳಿಂದ ಉತ್ತುಂಗದಲ್ಲಿದ್ದ ಆಸ್ಟ್ರೇಲಿಯಾ ತಂಡ ಇದೇ ಮೊದಲ ಬಾರಿಗೆ ಅಂಕಪಟ್ಟಿಯಲ್ಲಿ ಪಾತಾಳಕ್ಕೆ ಕುಸಿದಿದೆ...

Published On :
ಮೆಲ್ಬೋರ್ನ್: ಹಲವು ದಶಕಗಳಿಂದ ಉತ್ತುಂಗದಲ್ಲಿದ್ದ ಆಸ್ಟ್ರೇಲಿಯಾ ತಂಡ ಇದೇ ಮೊದಲ ಬಾರಿಗೆ ಅಂಕಪಟ್ಟಿಯಲ್ಲಿ ಪಾತಾಳಕ್ಕೆ ಕುಸಿದಿದೆ.
ಬ್ಯಾಕ್ ಟು ಬ್ಯಾಕ್ ಸರಣಿಗಳಲ್ಲಿ ಸೋಲು ಕಾಣುತ್ತಿರುವ ಆಸ್ಟ್ರೇಲಿಯಾ ತಂಡ 34 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ 6ನೇ ಸ್ಥಾನಕ್ಕೆ ಕುಸಿದಿದೆ.
2017ರ ಚಾಂಪಿಯನ್ಸ್ ಟ್ರೋಫಿಗೂ ಮುನ್ನ ನಂಬರ್ ಸ್ಥಾನದಲ್ಲಿದ್ದ ಆಸ್ಟ್ರೇಲಿಯಾ ನಂತರ ಕ್ರಮವಾಗಿ ಅಂಕಪಟ್ಟಿಯಲ್ಲಿ ಕುಸಿಯುತ್ತಾ ಬಂದಿತ್ತು. ಇದೀಗ ಇಂಗ್ಲೆಂಡ್ ವಿರುದ್ಧ ಐದು ಪಂದ್ಯಗಳ ಏಕದಿನ ಸರಣಿಯಲ್ಲಿ ಮೊದಲೆರಡು ಪಂದ್ಯಗಳಲ್ಲಿ ಇಂಗ್ಲೆಂಡ್ ವಿರುದ್ಧ ಆಸ್ಟ್ರೇಲಿಯಾ ಸೋಲು ಕಂಡಿದೆ.
ಸದ್ಯ ಆಸ್ಟ್ರೇಲಿಯಾ 102 ಅಂಕಗಳೊಂದಿಗೆ ಏಕದಿನ ಅಂಕಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


