ಕ್ರಿಕೆಟ್

ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ವಿಶ್ವ ದಾಖಲೆ 481 ರನ್ ಬಾರಿಸಿದ ಇಂಗ್ಲೆಂಡ್

ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯ ಮೂರನೇ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ವಿಶ್ವ ದಾಖಲೆಯ ರನ್ ಪೇರಿಸಿದೆ...

ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ವಿಶ್ವ ದಾಖಲೆ 481 ರನ್ ಬಾರಿಸಿದ ಇಂಗ್ಲೆಂಡ್
ಇಂಗ್ಲೆಂಡ್ ಆಟಗಾರರು
Published On :
ನಾಟಿಂಗ್ಹ್ಯಾಮ್: ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯ ಮೂರನೇ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ವಿಶ್ವ ದಾಖಲೆಯ ರನ್ ಪೇರಿಸಿದೆ. 
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ನಿಗದಿತ 50 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 481 ರನ್ ಬಾರಿಸಿದ್ದು ಇದು ತಂಡವೊಂದು ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್ ನಲ್ಲಿ ದಾಖಲಿಸಿದ ಅತ್ಯಧಿಕ ಮೊತ್ತವಾಗಿದೆ. 
ಇಂಗ್ಲೆಂಡ್ ಪರ ಜಾಸನ್ ರಾಯ್ 82, ಬೈರ್ಸ್ಟೋವ್ 139, ಹಾಲೇಸ್ 147, ಮೊರ್ಗನ್ 67 ರನ್ ಬಾರಿಸಿದ್ದಾರೆ. 
ಆಸ್ಟ್ರೇಲಿಯಾ ಪರ ಬೌಲಿಂಗ್ ನಲ್ಲಿ ರಿಚರ್ಡ್ಸನ್ 3 ಮತ್ತು ಅಗಾರ್ 1 ವಿಕೆಟ್ ಪಡೆದಿದ್ದಾರೆ. ಆಸ್ಟ್ರೇಲಿಯಾದ ಆಂಡ್ರ್ಯೂ ಟೈ 9 ಓವರ್ ಗಳಲ್ಲಿ 100 ಹೊಡೆಸಿಕೊಂಡು ದುಬಾರಿ ಬೌಲರ್ ಎನಿಸಿಕೊಂಡಿದ್ದಾರೆ. 
ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಏಕದಿನ ಸರಣಿಯಲ್ಲಿ ಇಂಗ್ಲೆಂಡ್ ಆದಾಗಲೇ ಮೊದಲೆರಡು ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ.
2016ರಲ್ಲಿ ಇದೇ ನಾಟಿಂಗ್ಹ್ಯಾಮ್ ಕ್ರೀಡಾಂಗಣದಲ್ಲಿ ಇಂಗ್ಲೆಂಡ್ ತಂಡ ಪಾಕಿಸ್ತಾನ ವಿರುದ್ಧದ ಏಕದಿನ ಪಂದ್ಯದಲ್ಲಿ 444 ರನ್ ಬಾರಿಸಿದ್ದು ಇದು ತಂಡವೊಂದರ ಗರಿಷ್ಠ ರನ್ ಆಗಿತ್ತು. ಇದೀಗ ಇಂಗ್ಲೆಂಡ್ ತನ್ನ ದಾಖಲೆಯನ್ನು ತಾನೇ ಮುರಿದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.