ಕ್ರಿಕೆಟ್

ಐಸಿಸಿ ಟೆಸ್ಟ್ ರ‍್ಯಾಂಕಿಂಗ್: ವೃತ್ತಿಜೀವನದ ಶ್ರೇಷ್ಠ 24ನೇ ಸ್ಥಾನಕ್ಕೇರಿದ ಶಿಖರ್ ಧವನ್

ಭಾರತದ ಆರಂಭಿಕ ಆಟಗಾರ ಶಿಖರ್ ಧವನ್ ಟೆಸ್ಟ್ ಕ್ರಿಕೆಟ್‌ ರ‍್ಯಾಂಕಿಂಗ್ ನಲ್ಲಿ ತಮ್ಮ ವೃತ್ತಿಜೀವನದ ಅತ್ಯುತ್ತಮ ಸ್ಥಾನವನ್ನು ಗಳಿಸಿದ್ಡಾರೆ.

ಐಸಿಸಿ ಟೆಸ್ಟ್ ರ‍್ಯಾಂಕಿಂಗ್: ವೃತ್ತಿಜೀವನದ ಶ್ರೇಷ್ಠ 24ನೇ ಸ್ಥಾನಕ್ಕೇರಿದ ಶಿಖರ್ ಧವನ್
ಐಸಿಸಿ ಟೆಸ್ಟ್ ರ‍್ಯಾಂಕಿಂಗ್: ವೃತ್ತಿಜೀವನದ ಶ್ರೇಷ್ಠ 24 ನೇ ಸ್ಥಾನಕ್ಕೇರಿದ ಶಿಖರ್ ಧವನ್
Published On :
ದುಬೈ: ಭಾರತದ ಆರಂಭಿಕ ಆಟಗಾರ ಶಿಖರ್ ಧವನ್ ಟೆಸ್ಟ್ ಕ್ರಿಕೆಟ್‌ ರ‍್ಯಾಂಕಿಂಗ್ ನಲ್ಲಿ ತಮ್ಮ ವೃತ್ತಿಜೀವನದ ಅತ್ಯುತ್ತಮ ಸ್ಥಾನವನ್ನು ಗಳಿಸಿದ್ಡಾರೆ. ಶಿಖರ್ ಧವನ್ ಟೆಸ್ಟ್ ಕ್ರಿಕೆಟ್ ರ‍್ಯಾಂಕಿಂಗ್ ಪಟ್ಟಿಯಲ್ಲಿ ಹತ್ತು ಸ್ಥಾನ ಮೇಲೇರಿ 24ನೇ ಸ್ಥಾನ ಪಡೆದುಕೊಂಡಿದ್ದಾರೆ.
ಅಫ್ಘಾನಿಸ್ತಾನದ ವಿರುದ್ಧದ ಐತಿಹಾಸಿಕ ಟೆಸ್ಟ್ ಪಂದ್ಯದಲ್ಲಿ 107 ರನ್ ಗಳಿಸಿರುವ ಧವನ್ ಟೆಸ್ಟ್ ಪಂದ್ಯದ ಮೊದಲ ದಿನದಂದು ಭೋಜನ ವಿರಾಮಕ್ಕೆ ಮುನ್ನ ಶತಕ ಪೂರೈಸಿದ ಮೊದಲ ಭಾರತೀಯರಾಗಿದ್ದಾರೆ
ಇದೇ ವೇಳೆ ಭಾರತದ ಇನ್ನಿಬ್ಬರು ಆಟಗಾರರಾದ ಮುರಳಿ ವಿಜಯ್ ಹಾಗು ರವೀಂದ್ರ ಜಡೇಜಾ ಸಹ ರ‍್ಯಾಂಕಿಂಗ್ ಪಟ್ಟಿಯಲ್ಲಿ ಮೇಲೇರಿದ್ದಾರೆ.
ಅಫ್ಘಾನ್ ವಿರುದ್ಧದ ಪಂದ್ಯದಲ್ಲಿ 105 ರನ್ ಗಳಿಸಿದ್ದ ಮುರಳಿ ವಿಜಯ್ 23ನೇ ಸ್ಥಾನಕ್ಕೇರಿದ್ದರೆ ಟೆಸ್ಟ್ ಪಂದ್ಯದಲ್ಲಿ ಆರು ವಿಕೆಟ್ ಪಡೆದ ರವೀಂದ್ರ ಜಡೇಜಾ ಮೂರನೇ ಸ್ಥಾನಕ್ಕೆ ಭಡ್ತಿ ಹೊಂದಿದ್ದಾರೆ.
ಇಶಾಂತ್ ಶರ್ಮಾ (25),  ಉಮೇಶ್ ಯಾದವ್ (26),  ಸ್ಥಾನ ಪಡೆಯುವುದರೊಡನೆ ಶ್ರೇಯಾಂಕ ಪಟ್ಟಿಯಲ್ಲಿ ಮುನ್ನಡೆ ಹೊಂದಿದ್ದಾರೆ.
ಏತನ್ಮಧ್ಯೆ ಅಪ್ಘಾನಿಸ್ಥಾನ ಬ್ಯಾಟ್ಸ್ ಮನ್ ಗಳಾದ ಹಶ್ಮುತುಲ್ಲಾ ಶಾಹಿದ್ (111), ನಾಯಕ ಅಸ್ಗರ್ ಸ್ಟ್ಯಾನಿಕ್ಜಾಯ್ (136) ರಶೀದ್ ಖಾನ್ (119) ಸಹ ಆಟಗಾರರ ಶ್ರೇಯಾಂಕ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.
ಭಾರತ ತಂಡ ಶ್ರೇಯಾಂಕದಲ್ಲಿ ಅಗ್ರ ಸ್ಥಾನವನ್ನು ಕಾಯ್ದುಕೊಂಡಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.