ಕ್ರಿಕೆಟ್

ಪುರುಷರಾಯ್ತು, ಈಗ ಮಹಿಳೆಯರ ಸರದಿ: ಟಿ20ಯಲ್ಲಿ ದಾಖಲೆ ರನ್ ಚಚ್ಚಿದ ಇಂಗ್ಲೆಂಡ್ ಮಹಿಳಾ ಕ್ರಿಕೆಟ್ ತಂಡ

ಲಂಡನ್ ನಲ್ಲಿ ಮಹಿಳಾ ಟಿ-20 ಕ್ರಿಕೆಟ್ ನಲ್ಲಿ 250 ಬಾರಿಸಿ ಇಂಗ್ಲೆಂಡ್ ಮಹಿಳಾ ಕ್ರಿಕೆಟ್ ತಂಡ ಕೂಡ ಹೊಸ ದಾಖಲೆ ನಿರ್ಮಾಣ ಮಾಡಿದೆ.

ಪುರುಷರಾಯ್ತು, ಈಗ ಮಹಿಳೆಯರ ಸರದಿ: ಟಿ20ಯಲ್ಲಿ ದಾಖಲೆ ರನ್ ಚಚ್ಚಿದ ಇಂಗ್ಲೆಂಡ್ ಮಹಿಳಾ ಕ್ರಿಕೆಟ್ ತಂಡ
ಆಫ್ರಿಕನ್ನರ ಮೇಲೆ ಆಂಗ್ಲರ ಸವಾರಿ
Published On :
ಲಂಡನ್: ಪುರುಷರ ಏಕದಿನ ಕ್ರಿಕೆಟ್ ನಲ್ಲಿ ಆಸ್ಟ್ರೇಲಿಯಾ ವಿರುದ್ಧ 481 ರನ್ ಗಳಿಸಿ ವಿಶ್ವದಾಖಲೆ ಬರೆದಿದ್ದ ಇಂಗ್ಲೆಂಡ್ ತಂಡದ ದಾಖಲೆ ಕುರಿತು ಇನ್ನೂ ಸುದ್ದಿಗಳು ಪ್ರಸಾರವಾಗುತ್ತಿರುವಂತೆಯೇ ಅತ್ತ ಲಂಡನ್ ನಲ್ಲಿ ಮಹಿಳಾ ಟಿ-20 ಕ್ರಿಕೆಟ್ ನಲ್ಲಿ 250 ಬಾರಿಸಿ ಇಂಗ್ಲೆಂಡ್ ಮಹಿಳಾ ಕ್ರಿಕೆಟ್ ತಂಡ ಕೂಡ ಹೊಸ ದಾಖಲೆ ನಿರ್ಮಾಣ ಮಾಡಿದೆ.
ಎರಡು ದಿನಗಳ ಹಿಂದಷ್ಟೇ ಇಂಗ್ಲೆಂಡ್ ಕ್ರಿಕೆಟ್ ನ ಪುರುಷರ ತಂಡ ಆಸಿಸ್ ವಿರುದ್ಧ ಆರು ವಿಕೆಟ್ ನಷ್ಟಕ್ಕೆ 481 ರನ್ ದಾಖಲಿಸಿ ವಿಶ್ವದಾಖಲೆ ನಿರ್ಮಿಸಿತ್ತು. ಇದೀಗ ಇಂಗ್ಲೆಂಡ್ ಮಹಿಳಾ ಕ್ರಿಕೆಟ್ ತಂಡ ಟಿ-20 ಯಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 3 ವಿಕೆಟ್ ನಷ್ಟಕ್ಕೆ 250 ರನ್ ಗಳಿಸಿ ಟಿ20 ಕ್ರಿಕೆಟ್ ಮಾದರಿಯಲ್ಲಿ ನೂತನ ದಾಖಲೆ ನಿರ್ಮಿಸಿದೆ.  ಆ ಮೂಲಕ ಮಹಿಳಾ ಕ್ರಿಕೆಟ್ ಇತಿಹಾಸದಲ್ಲಿ ಟಿ20 ಕ್ರಿಕೆಟ್ ನಲ್ಲಿ ಅತೀ ಹೆಚ್ಚು ರನ್ ಗಳಿಸಿದ ದಾಖಲೆ ನಿರ್ಮಿಸಿದೆ.
ಲಂಡನ್ ನಲ್ಲಿ ನಡೆದ ತ್ರಿಕೋನ ಟಿ20 ಸರಣಿಯ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ  ಇಂಗ್ಲೆಂಡ್ ಈ ದಾಖಲೆ ನಿರ್ಮಾಣ ಮಾಡಿದೆ. ಇಂಗ್ಲೆಂಡ್ ತಂಡದ ಈ ಬೃಹತ್ ಮೊತ್ತಕ್ಕೆ ಟಾಮಿ ಬಿಯೋಮಾಂಟ್ ನೆರವಾದರು. ಕೇವಲ 47 ಎಸೆತಗಳನ್ನು ಎದುರಿಸಿದ ಟಾಮಿ ಬಿಯೋಮಾಂಟ್ ಶತಕ ಸಿಡಿಸಿದರು. ಅವರ ಇನ್ನಿಂಗ್ಸ್ ನಲ್ಲಿ 18 ಬೌಂಡರಿ ಮತ್ತು 4 ಸಿಕ್ಸರ್ ಒಳಗೊಂಡಿತ್ತು. ಅವರಿಗೆ ಉತ್ತಮ ಸಾಥ್ ನೀಡಿದ ಕ್ಯಾಥೆರಿನ್ ಬ್ರಂಟ್ ಕೇವಲ 16 ಎಸೆತಗಳಲ್ಲಿ 3 ಬೌಂಡರಿ, ಒಂದು ಭರ್ಜರಿ ಸಿಕ್ಸರ್ ಸಹಿತ 42 ರನ್ ಬಾರಿಸಿದರು.
ಆಂಗ್ಲರ ಬೃಹತ್ ಸವಾಲಿಗೆ ಉತ್ತರಿಸಿದ ದಕ್ಷಿಣ ಆಫ್ರಿಕಾ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 129 ರನ್ ಗಳಿಸಲಷ್ಟೇ ಶಕ್ತವಾಯಿತು. ಅಂತೆಯೇ 121 ರನ್ ಗಳಿಂದ ಸೋಲೊಪ್ಪಿಕೊಂಡಿತು. ಆಫ್ರಿಕಾ ಪರ ನಾಯಕಿ ಡೇನ್ ವಾನ್ ನೈಕ್ರೆಕ್ 51 ಎಸೆತಗಳಲ್ಲಿ 8 ಬೌಂಡರಿ ಹಾಗೂ 3 ಸಿಕ್ಸರ್ ನೆರವಿನಿಂದ 72 ರನ್ ಗಳಿಸಿದರು.
ಇನ್ನು ಈ ಹಿಂದಷ್ಟೇ ನ್ಯೂಜಿಲೆಂಡ್ ತಂಡ ಮಹಿಳಾ ಕ್ರಿಕೆಟ್ ನಲ್ಲಿ ಗರಿಷ್ಟ ರನ್ ಪೇರಿಸಿತ್ತು. ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ನ್ಯೂಜಿಲೆಂಡ್ ಮಹಿಳಾ ತಂಡ 1 ವಿಕೆಟ್ ನಷ್ಟಕ್ಕೆ 216ರನ್ ಪೇರಿಸಿದ್ದು, ಈವರೆಗಿನ ಗರಿಷ್ಠ ರನ್ ದಾಖಲೆಯಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.