ನಮ್ಮ ಸಾಮರ್ಥ್ಯ ಓರೆಗೆ ಹಚ್ಚಲು ಕಠಿಣ ಟೆಸ್ಟ್ ಪಂದ್ಯಗಳ ಎದುರು ನೋಡುತ್ತಿದ್ದೇವೆ: ವಿರಾಟ್ ಕೊಹ್ಲಿ
ನಮ್ಮ ತಂಡಗದ ಸಾಮರ್ಥ್ಯವನ್ನು ಅರಿಯಲು ಕಠಿಣ ಇಂಗ್ಲೆಂಡ್ ಪ್ರವಾಸದಲ್ಲಿ ಕಠಿಣ ಟೆಸ್ಟ್ ಪಂದ್ಯಗಳನ್ನು ಎದುರು ನೋಡುತ್ತಿದ್ದೇವೆ ಎಂದು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ.

Published On :
ಲಂಡನ್: ನಮ್ಮ ತಂಡಗದ ಸಾಮರ್ಥ್ಯವನ್ನು ಅರಿಯಲು ಕಠಿಣ ಇಂಗ್ಲೆಂಡ್ ಪ್ರವಾಸದಲ್ಲಿ ಕಠಿಣ ಟೆಸ್ಟ್ ಪಂದ್ಯಗಳನ್ನು ಎದುರು ನೋಡುತ್ತಿದ್ದೇವೆ ಎಂದು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ.
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ ನಿಮಿತ್ತ ನಾಯಕ ವಿರಾಟ್ ಕೊಹ್ಲಿ ಸೇರಿದಂತೆ ಟೀಂ ಇಂಡಿಯಾ ಆಟಗಾರರ ತಂಡ ಇಂಗ್ಲೆಂಡ್ ಗೆ ತೆರಳಿದ್ದು, ಇಂಗ್ಲೆಂಡ್ ತಲುಪಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ನಾಯಕ ವಿರಾಟ್ ಕೊಹ್ಲಿ, ಬಲಿಷ್ಠ ತಂಡಗಳ ವಿರುದ್ಧ ಸೆಣಸುವುದು ನಮಗೆ ಇಷ್ಟ. ನಮ್ಮ ಸಾಮರ್ಥ್ಯವನ್ನು ಓರೆಗೆ ಹಚ್ಚಲು ಇಂಗ್ಲೆಂಡ್ ಪ್ರವಾಸದಲ್ಲಿ ಕಠಿಣ ಟೆಸ್ಟ್ ಪಂದ್ಯಗಳನ್ನು ಎದುರು ನೋಡುತ್ತಿದ್ದೇವೆ ಮತ್ತು ಇಂಗ್ಲೆಂಡ್ ವಿರುದ್ಧದ ಸರಣಿಗೆ ಸಜ್ಜಾಗಿದ್ದೇವೆ ಎಂದು ಹೇಳಿದರು.
ಅಂತೆಯೇ ಯಾವುದೇ ಸರಣಿಯಲ್ಲಿ ಆಡುವಾಗ ಎದುರಾಳಿ ತಂಡ ಯಾವುದು ಎಂಬುದರ ಬಗ್ಗೆ ಯೋಚನೆ ಮಾಡುವುದಿಲ್ಲ. ಭಾರತಕ್ಕೆ ಜಯ ಗಳಿಸಿಕೊಡಬೇಕೆಂಬುದು ಮಾತ್ರ ನನ್ನ ಮನಸ್ಸಿನಲ್ಲಿರುತ್ತದೆ ಎಂದು ಕೊಹ್ಲಿ ಹೇಳಿದರು.
ಟೀಂ ಇಂಡಿಯಾ ಐರ್ಲೆಂಡ್‌ನಲ್ಲಿ ಎರಡು ಪಂದ್ಯಗಳ ಟ್ವೆಂಟಿ–20 ಸರಣಿ ಮತ್ತು ಇಂಗ್ಲೆಂಡ್‌ನಲ್ಲಿ ತಲಾ ಮೂರು ಟ್ವೆಂಟಿ–20 ಮತ್ತು ಏಕದಿನ ಪಂದ್ಯಗಳು, ಐದು ಟೆಸ್ಟ್ ಪಂದ್ಯಗಳನ್ನು ಭಾರತ ಆಡಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್Londonಲಂಡನ್Virat Kohliವಿರಾಟ್ ಕೊಹ್ಲಿIndia vs Englandಭಾರತ ವರ್ಸಸ್ ಇಂಗ್ಲೆಂಡ್YoYo Testಯೋಯೋ ಟೆಸ್ಟ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


