ಮಹಿಳಾ ವಿಶ್ವಕಪ್ ಟಿ20: ಉದ್ಘಾಟನಾ ಪಂದ್ಯದಲ್ಲಿ ನ್ಯೂಜಿಲೆಂಡ್ ಎದುರಿಸಲಿರುವ ಟೀಂ ಇಂಡಿಯಾ!
ಐಸಿಸಿ ಮಹಿಳಾ ವಿಶ್ವಕಪ್ ಟಿ20 ಪಂದ್ಯಾವಳಿಯಲ್ಲಿ ಟೀಂ ಇಂಡಿಯಾ ಮಹಿಳಾ ತಂಡ ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಎದುರಿಸಲಿದೆ. ಇನ್ನು ಇದೇ ಮೊದಲ ಬಾರಿಗೆ...

Published On :
ದುಬೈ: ಐಸಿಸಿ ಮಹಿಳಾ ವಿಶ್ವಕಪ್ ಟಿ20 ಪಂದ್ಯಾವಳಿಯಲ್ಲಿ ಟೀಂ ಇಂಡಿಯಾ ಮಹಿಳಾ ತಂಡ ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಎದುರಿಸಲಿದೆ. ಇನ್ನು ಇದೇ ಮೊದಲ ಬಾರಿಗೆ ಪಂದ್ಯಾವಳಿಯಲ್ಲಿ ಡಿಆರ್ಎಸ್ ಅನ್ನು ಬಳಸಲಾಗುತ್ತಿದೆ.
2018ರ ನವೆಂಬರ್ 9 ರಿಂದ 24ರವರೆಗೆ ವೆಸ್ಟ್ ಇಂಡೀಸ್ ನಲ್ಲಿ ಪಂದ್ಯಾವಳಿ ನಡೆಯಲಿದ್ದು ಪಂದ್ಯಾವಳಿಯ ಉದ್ಘಾಟನಾ ಪಂದ್ಯದಲ್ಲಿ ಟೀಂ ಇಂಡಿಯಾ ಮಹಿಳಾ ತಂಡ ನ್ಯೂಜಿಲೆಂಡ್ ತಂಡವನ್ನು ಎದುರಿಸಲಿದೆ.
ಕಳೆದ ಐದು ಬಾರಿಯೂ ಚಾಂಪಿಯನ್ ಪಟ್ಟ ಅಲಂಕರಿಸುವಲ್ಲಿ ಟೀಂ ಇಂಡಿಯಾ ಎಡವಿದೆ. ಇನ್ನು ತನ್ನ ಎರಡನೇ ಪಂದ್ಯದಲ್ಲಿ ನವೆಂಬರ್ 11ರಂದು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಎದುರಿಸಲಿದೆ.
ಪಂದ್ಯಾವಳಿಯ ಎ ಗುಂಪಿನಲ್ಲಿ ವೆಸ್ಟ್ ಇಂಡೀಸ್, ಇಂಗ್ಲೆಂಡ್, ದಕ್ಷಿಣ ಆಫ್ರಿಕಾ, ಶ್ರೀಲಂಕಾ ಮತ್ತು ಅರ್ಹತಾ ತಂಡ 1 ಇರಲಿದೆ. ಇನ್ನು ಬಿ ಗುಂಪಿನಲ್ಲಿ ಆಸ್ಟ್ರೇಲಿಯಾ, ಭಾರತ, ನ್ಯೂಜಿಲೆಂಡ್, ಪಾಕಿಸ್ತಾನ ಮತ್ತು ಅರ್ಹತಾ ತಂಡ 2 ಇರಲಿದೆ.
ಅರ್ಹತಾ ತಂಡಗಳ ಪೈಕಿ ಬಾಂಗ್ಲಾದೇಶ, ಐರ್ಲ್ಯಾಂಡ್, ನೆದರ್ಲ್ಯಾಂಡ್, ಪಪುವಾ ನ್ಯೂ ಗಿನಿಯಾ, ಸ್ಕಾಟ್ಲಾಂಡ್, ಥಾಯ್ಲಾಂಡ್ ಮತ್ತು ಯುನೈಟೆಡ್ ಅರಬ್ ಎಮಿರೈಟ್ಸ್ ತಂಡಗಳು ಸೆಣೆಸಲಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್ಟೀಂ ಇಂಡಿಯಾTeam IndiaNew Zealandಐಸಿಸಿನ್ಯೂಜಿಲೆಂಡ್ICCWomen\'s World T20ಮಹಿಳಾ ಟಿ20 ವಿಶ್ವಕಪ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


