ಮುಂದಿನ ನಾಲ್ಕು ಟಿ20 ಪಂದ್ಯಗಳಲ್ಲಿ ಇನ್ನಷ್ಟು ಪ್ರಯೋಗಗಳನ್ನು ನಿರೀಕ್ಷಿಸಿ: ವಿರಾಟ್ ಕೊಹ್ಲಿ
ಮುಂದಿನ ನಾಲ್ಕು ಟಿ20 ಪಂದ್ಯಗಳಲ್ಲಿ ತಂಡದಲ್ಲಿ ಬಹಳಷ್ಟು ಪ್ರಯೋಗಗಳನ್ನು ಮಾಡಲಾಗುತ್ತದೆ ಎಂದು ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ.

Published On :
ಡಬ್ಲಿನ್: ಮುಂದಿನ ನಾಲ್ಕು ಟಿ20 ಪಂದ್ಯಗಳಲ್ಲಿ ತಂಡದಲ್ಲಿ ಬಹಳಷ್ಟು ಪ್ರಯೋಗಗಳನ್ನು ಮಾಡಲಾಗುತ್ತದೆ ಎಂದು ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ.
ಐರ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 76 ರನ್ ಗಳಿಂದ ಜಯಗಳಿಸಿದೆ. ಇನ್ನು ಪಂದ್ಯದ ವೇಳೆ ತಂಡದ ಬ್ಯಾಟಿಂಗ್ ಕ್ರಮಾಂಕದಲ್ಲಿ ಹಲವು ಬದಲಾವಣೆಗಳನ್ನು ಮಾಡಲಾಗಿತ್ತು.
ಈ ಕುರಿತಂತೆ ಮಾತನಾಡಿರುವ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ, ಬ್ಯಾಟಿಂಗ್ ಕ್ರಮಾಂಕ ಬದಲಾವಣೆ ಮೂಲಕ ಎದುರಾಳಿ ತಂಡವನ್ನು ಗೊಂದಲಕ್ಕೆ ಸಿಲುಕಿಸಬಹುದು. ಇನ್ನು ಉಳಿದಿರುವ ನಾಲ್ಕು ಪಂದ್ಯಗಳಲ್ಲೂ ಹಲವು ಪ್ರಯೋಗಗಳನ್ನು ಮಾಡಲಾಗುವುದು ಎಂದು ಹೇಳಿದ್ದಾರೆ.
ಸ್ಫೋಟಕ ಬ್ಯಾಟ್ಸ್ ಮನ್ ವಿರಾಟ್ ಕೊಹ್ಲಿ ಮೊದಲ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುತ್ತಿದ್ದರು. ಆದರೆ ಐರ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಅವರು ಆರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿ ಅಚ್ಚರಿ ಮೂಡಿಸಿದ್ದರು. ಆದರೆ ಕೊನೆಯಲ್ಲಿ ಬಂದ ವಿರಾಟ್ ಕೊಹ್ಲಿ ಸ್ಫೋಟಕ ಬ್ಯಾಟಿಂಗ್ ಮಾಡುವ ಭರದಲ್ಲಿ ಎದುರಿಸಿದ ಎರಡನೇ ಎಸೆತವನ್ನು ಕ್ಯಾಚ್ ನೀಡಿ ಡಕ್ ಔಟ್ ಆಗಿ ಪೆವಿಲಿಯನ್ ಸೇರಿದ್ದರು.
ಆರಂಭಿಕರಾಗಿ ಕಣಕ್ಕಿಳಿದಿದ್ದ ರೋಹಿತ್ ಶರ್ಮಾ(97) ಹಾಗೂ ಶಿಖರ್ ಧವನ್(74) ರನ್ ಬಾರಿಸುವ ಮೂಲಕ ತಂಡ ಹೆಚ್ಚು ರನ್ ಪೇರಿಸಲು ಕಾರಣವಾಗಿದ್ದರು. ಈ ಜೋಡಿ 16 ಓವರ್ ಮುಕ್ತಾಯಕ್ಕೆ 160 ರನ್ ಸಿಡಿಸಿ ಅಬ್ಬರದ ಬ್ಯಾಟಿಂಗ್ ಮಾಡಿತ್ತು. ಅಂತಿಮವಾಗಿ ನಿಗದಿತ ಓವರ್ ನಲ್ಲಿ ಭಾರತ 208 ಪೇರಿಸಿದ್ದು 209 ರನ್ ಗುರಿ ಬೆನ್ನಟ್ಟಿದ ಐರ್ಲೆಂಡ್ ತಂಡ ನಿಗದಿತ ಓವರ್ ನಲ್ಲಿ 9 ವಿಕೆಟ್ ನಷ್ಟಕ್ಕೆ 132 ರನ್ ಮಾತ್ರ ಪೇರಿಸಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


