ಮತ್ತೆ ಮುಗ್ಗರಿಸಿದ ರೋಹಿತ್ ಶರ್ಮಾ ಶೂನ್ಯಕ್ಕೆ ಔಟ್
ನಿಡಹಾಸ್ ತ್ರಿಕೋನ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ತಂಡದ ನಾಯಕ ರೋಹಿತ್ ಶರ್ಮಾ ಶೂನ್ಯಕ್ಕೆ ಔಟಾಗಿದ್ದಾರೆ...

Published On :
ಕೊಲಂಬೊ: ನಿಡಹಾಸ್ ತ್ರಿಕೋನ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ತಂಡದ ನಾಯಕ ರೋಹಿತ್ ಶರ್ಮಾ ಶೂನ್ಯಕ್ಕೆ ಔಟಾಗಿದ್ದಾರೆ.
ಕೊಲಂಬೊದ ಆರ್ ಪ್ರೇಮದಾಸ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ ಆರಂಭಿಕ ಆಟಗಾರ ರೋಹಿತ್ ಶರ್ಮಾ ಮತ್ತೆ ವೈಫಲ್ಯ ಅನುಭವಿಸಿದ್ದು ಶೂನ್ಯಕ್ಕೆ ಔಟಾಗಿದ್ದಾರೆ.
ಸದ್ಯ ಟೀಂ ಇಂಡಿಯಾ 8 ಓವರ್ ಮುಕ್ತಾಯಕ್ಕೆ ಪ್ರಮುಖ 2 ವಿಕೆಟ್ ಕಳೆದುಕೊಂಡು 57 ರನ್ ಪೇರಿಸಿದೆ. ರೋಹಿತ್ ಶರ್ಮಾ 0, ಸುರೇಶ್ ರೈನಾ 1 ರನ್ ಗೆ ಔಟಾಗಿದ್ದಾರೆ. 29 ರನ್ ಗಳಿಸಿ ಧವನ್ ಮತ್ತು 21 ರನ್ ಗಳಿಸಿ ಮನೀಶ್ ಪಾಂಡೆ ಆಟವಾಡುತ್ತಿದ್ದಾರೆ.
ಯಂಗ್ ಇಂಡಿಯಾ ತಂಡದ ನಾಯಕತ್ವ ವಹಿಸಿರುವ ರೋಹಿತ್ ಶರ್ಮಾ ಯುವ ಪಡೆಯೊಂದಿಗೆ ಲಂಕಾಗೆ ತೆರಳಿತ್ತು. ಬಾಂಗ್ಲಾದೇಶ, ಶ್ರೀಲಂಕಾ ಮತ್ತು ಭಾರತ ನಡುವೆ ತ್ರಿಕೋನ ಟಿ20 ಸರಣಿ ನಡೆಯುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಟೀಂ ಇಂಡಿಯಾTeam IndiaSri Lankaಶ್ರೀಲಂಕಾRohit Sharmaರೋಹಿತ್ ಶರ್ಮಾನಿಡಹಾಸ್ ತ್ರಿಕೋನ ಟಿ20 ಸರಣಿNidahas T20 Tri-Series
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


