ಕ್ರಿಕೆಟ್

ಐಪಿಎಲ್ 2018: ದೆಹಲಿ ಡೇರ್ ಡೆವಿಲ್ಸ್ ನಾಯಕನಾಗಿ ಗಂಭೀರ್ ಆಯ್ಕೆ!

ಐಪಿಎಲ್ 2018ಕ್ಕೆ ದಿನಗಣನೆ ಆರಂಭವಾಗಿರುವಂತೆಯೇ ತಂಡಗಳು ಭರ್ಜರಿ ಸಿದ್ಧತೆ ನಡೆಸಿಕೊಂಡಿದ್ದು, ಇದೀಗ ದೆಹಲಿ ಡೇರ್ ಡೆವಿಲ್ಸ್ ತಂಡ ತನ್ನ ನೂತನ ನಾಯಕನಾಗಿ ಗೌತಮ್ ಗಂಭೀರ್ ಅವರನ್ನು ಆಯ್ಕೆ ಮಾಡಿಕೊಂಡಿದೆ.

ಐಪಿಎಲ್ 2018: ದೆಹಲಿ ಡೇರ್ ಡೆವಿಲ್ಸ್ ನಾಯಕನಾಗಿ ಗಂಭೀರ್ ಆಯ್ಕೆ!
ಸಂಗ್ರಹ ಚಿತ್ರ
Published On :
ನವದೆಹಲಿ: ಐಪಿಎಲ್ 2018ಕ್ಕೆ ದಿನಗಣನೆ ಆರಂಭವಾಗಿರುವಂತೆಯೇ ತಂಡಗಳು ಭರ್ಜರಿ ಸಿದ್ಧತೆ ನಡೆಸಿಕೊಂಡಿದ್ದು, ಇದೀಗ ದೆಹಲಿ ಡೇರ್ ಡೆವಿಲ್ಸ್ ತಂಡ ತನ್ನ ನೂತನ ನಾಯಕನಾಗಿ ಗೌತಮ್ ಗಂಭೀರ್ ಅವರನ್ನು ಆಯ್ಕೆ ಮಾಡಿಕೊಂಡಿದೆ.
ಈ ಹಿಂದೆ ಕೋಲ್ಕತಾ ನೈಟ್ ರೈಡರ್ಸ್ ತಂಡದ ಪರವಾಗಿ ನಾಯಕನಾಗಿ ಕಾರ್ಯ ನಿರ್ವಹಿಸಿದ್ದ ಗೌತಮ್ ಗಂಭೀರ್ ಅವರನ್ನು, ಪ್ರಸಕ್ತ ಸಾಲಿನ ಐಪಿಎಲ್ ಹರಾಜು ಪ್ರಕ್ರಿಯೆಲ್ಲಿ ಕೋಲ್ಕತಾ ತಂಡದಿಂದ ಕೈ ಬಿಡಲಾಗಿತ್ತು. ಬಳಿಕ ಗಂಭೀರ್ ಅವರನ್ನು ದೆಹಲಿ ಡೇರ್ ಡೆವಿಲ್ಸ್ ತಂಡ ಖರೀದಿ ಮಾಡಿತ್ತು. ಇದೀಗ ಅವರನ್ನೇ ತಮ್ಮ ತಂಡದ ನಾಯಕನಾಗಿ ಡೇರ್ ಡೆವಿಲ್ಸ್ ತಂಡದ ಆಡಳಿತ ಮಂಡಳಿ ಆಯ್ಕೆ ಮಾಡಿದೆ.
ಆ ಮೂಲಕ ಗೌತಿ ಸುಧೀರ್ಧ ಅವಧಿಯ ಬಳಿಕ ಮತ್ತೆ ತಮ್ಮ ತವರಿನ ತಂಡಕ್ಕೆ ಮರಳಿದ್ದು, ತವರಿನ ಅಭಿಮಾನಿಗಳನ್ನು ಮತ್ತಷ್ಟು ರಂಜಿಸಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.