ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ ವಿರುದ್ಧ ಪ್ರಕರಣ ದಾಖಲಿಸಿದ ಪತ್ನಿ
ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಅವರು ಅಕ್ರಮ ಸಂಬಂಧ ಹೊಂದಿದ್ದು, ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿದ್ದ ಅವರ ಪತ್ನಿ ಹಸೀನ್ ಜಹಾನ್ ಅವರು ಇದೀಗ ಶಮಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ...

Published On :
ನವದೆಹಲಿ: ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಅವರು ಅಕ್ರಮ ಸಂಬಂಧ ಹೊಂದಿದ್ದು, ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿದ್ದ ಅವರ ಪತ್ನಿ ಹಸೀನ್ ಜಹಾನ್ ಅವರು ಇದೀಗ ಶಮಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆಂದು ಶುಕ್ರವಾರ ತಿಳಿದುಬಂದಿದೆ.
ಮೊಹಮ್ಮದ್ ಶಮಿ ವಿರುದ್ದ ಬರವಣಿಗೆ ದೂರು ಬರೆದಿರುವ ಹಸೀನ್ ಜಹಾನ್ ಅವರು, ಕೋಲ್ಕತಾ ಜಂಟಿ ಪೊಲೀಸರ್ ಅಧಿಕಾರಿ ಸಿಪಿ ಪ್ರವೀಣ್ ತ್ರಿಪಾಠಿಯವರಿಗೆ ಸಲ್ಲಿಸಿದ್ದಾರೆ. ದೂರನ್ನು ಎಫ್ಐಆರ್ ನಂತೆ ನೋಡಲಾಗುತ್ತದೆ ಎಂತು ತ್ರಿಪಾಠಿಯವರು ಹೇಳಿದ್ದಾರೆ.
ಕ್ರಿಕೆಟಿಗ ಶಮಿ ಪತ್ನಿಯವರಿಂದ ದೂರನ್ನು ಪಡೆದುಕೊಂಡಿದ್ದೇವೆ. ದೂರಿನಲ್ಲಿ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡಿರುವುದಾಗಿ ಶಮಿ ಪತ್ನಿ ತಿಳಿಸಿದ್ದಾರೆ.
ಶಮಿ ವಿರುದ್ಧ ಯಾವ ಕಾಯ್ದೆ ಅನ್ವಯ ಕ್ರಮ ಕೈಗೊಳ್ಳಬೇಕೆಂಬುದನ್ನು ನಿರ್ಧರಿಸಬೇಕಿದೆ. ಶೀಘ್ರದಲ್ಲಿಯೇ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದಿದ್ದಾರೆ.
ಶಮಿ ಪತ್ರಿ ಹಸೀನ್ ಜಹಾನ್ ಅವರು ಮಾತನಾಡಿ, ಅಧಿಕಾರಿಯನ್ನು ಭೇಟಿ ಮಾಡಿದ್ದೇನೆ. ಶಮಿ ನನಗೆ ನೀಡಿದ್ದ ಕಿರುಕುಳ ಕುರಿತಂತೆ ಎಲ್ಲಾ ವಿಚಾರವನ್ನು ಅಧಿಕಾರಿಗೆ ತಿಳಿಸಿದ್ದೇನೆ. ಅಲ್ಲದೆ. ನನ್ನನ್ನು ಮದುವೆಯಾಗಿದ್ದರೂ ಮತ್ತೊಬ್ಬ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿರುವ ವಿಚಾರವನ್ನೂ ತಿಳಿಸಿದ್ದೇನೆಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


