ಪತ್ನಿಗೆ ಕಿರುಕುಳ ಆರೋಪ: ಕ್ರಿಕೆಟಿಗೆ ಮೊಹಮದ್ ಶಮಿ ವಿರುದ್ಧ ಕೊಲೆ ಯತ್ನ, ಹಲ್ಲೆ ಪ್ರಕರಣ ದಾಖಲು
ಪತ್ನಿಗೆ ಕಿರುಕುಳ ನೀಡಿದ ಆರೋಪದ ಮೇರೆಗೆ ಭಾರತ ಕ್ರಿಕೆಟ್ ತಂಡದ ವೇಗಿ ಮೊಹಮದ್ ಶಮಿ ವಿರುದ್ಧ ಎಫ್ ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ.

Published On :
ಕೋಲ್ಕತಾ: ಪತ್ನಿಗೆ ಕಿರುಕುಳ ನೀಡಿದ ಆರೋಪದ ಮೇರೆಗೆ ಭಾರತ ಕ್ರಿಕೆಟ್ ತಂಡದ ವೇಗಿ ಮೊಹಮದ್ ಶಮಿ ವಿರುದ್ಧ ಎಫ್ ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ.
ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತಾದ ಜಾದವ್ ಪುರ್ ಪೊಲೀಸ್ ಠಾಣೆಯಲ್ಲಿ ಮಹಮದ್ ಶಮಿ ಪತ್ನಿ ಹಸೀನ್ ಜಹಾನ್ ನೀಡಿದ ದೂರನ್ನು ದಾಖಲಿಸಿಕೊಂಡ ಪೊಲೀಸರು ಇದೀಗ ಶಮಿ ವಿರುದ್ಧ ಐಪಿಸಿ ಸೆಕ್ಷನ್ 498ಎ (ಪತಿ ಮತ್ತು ಅವರ ಕುಟುಂಬಸ್ಥರಿಂದ ದೈಹಿಕ ಹಿಂಸೆ), 307 ಕೊಲೆ ಯತ್ನ, 323 ದೈಹಿಕ ಹಿಂಸೆ, 378 ಅತ್ಯಾಚಾರ, 506 ಕ್ರಿಮಿನಲ್ ಬೆದರಿಕೆ ಮತ್ತು ಸೆಕ್ಷನ್ 328 ಮತ್ತು ಸೆಕ್ಷನ್ 34ರ ಅಡಿಯಲ್ಲಿ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.
ಇಂದು ಬೆಳಗ್ಗೆಯಷ್ಟೇ ಶಮಿ ಪತ್ಮಿ ಕೋಲ್ಕತಾದ ಜಾದವ್ ಪುರ ಪೊಲೀಸ್ ಠಾಣೆಗೆ ತೆರಳಿ ದೈಹಿಕ ಹಿಂಸೆ ಮತ್ತಿತ್ಯಾದಿ ಆರೋಪಗಳ ಕುರಿತು ದೂರು ದಾಖಲಿಸಿದ್ದರು. ಬಳಿಕ ಮಾತನಾಡಿದ್ದ ಅವರು, ಅಧಿಕಾರಿಯನ್ನು ಭೇಟಿ ಮಾಡಿದ್ದೇನೆ. ಶಮಿ ನನಗೆ ನೀಡಿದ್ದ ಕಿರುಕುಳ ಕುರಿತಂತೆ ಎಲ್ಲಾ ವಿಚಾರವನ್ನು ಅಧಿಕಾರಿಗೆ ತಿಳಿಸಿದ್ದೇನೆ. ಅಲ್ಲದೆ. ನನ್ನನ್ನು ಮದುವೆಯಾಗಿದ್ದರೂ ಮತ್ತೊಬ್ಬ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿರುವ ವಿಚಾರವನ್ನೂ ತಿಳಿಸಿದ್ದೇನೆಂದು ಹೇಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್ಪಶ್ಚಿಮ ಬಂಗಾಳWest BengalKolkataMohammed Shamiಕೋಲ್ಕತಾಮೊಹಮ್ಮದ್ ಶಮಿpolice FIRಪೊಲೀಸ್ ಎಫ್ ಐಆರ್Hasin jahanಹಸಿನ್ ಜಹಾನ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


