ಇರಾನಿ ಕಪ್: ರೆಸ್ಟ್ ಆಫ್ ಇಂಡಿಯಾ ಪರ ರವೀಂದ್ರ ಜಡೇಜಾ ಬದಲಿಗೆ ಆರ್ ಅಶ್ವಿನ್ ಗೆ ಸ್ಥಾನ
ಇರಾನ್ ಕಪ್ ಟೂರ್ನಿಯಲ್ಲಿ ರೆಸ್ಟ್ ಆಫ್ ಇಂಡಿಯಾ ಪ್ರತಿನಿಧಿಸುತ್ತಿರುವ ರವೀಂದ್ರ ಜಡೇಜಾ ಗಾಯದ ಸಮಸ್ಯೆಗೆ ತುತ್ತಾಗಿರುವುದರಿಂದ ಆರ್ ಅಶ್ವಿನ್ ಅವರಿಗೆ ಸ್ಥಾನ ನೀಡಲಾಗಿದೆ.

Published On :
ಮುಂಬೈ: ಇರಾನ್ ಕಪ್ ಟೂರ್ನಿಯಲ್ಲಿ ರೆಸ್ಟ್ ಆಫ್ ಇಂಡಿಯಾ ಪ್ರತಿನಿಧಿಸುತ್ತಿರುವ ರವೀಂದ್ರ ಜಡೇಜಾ ಗಾಯದ ಸಮಸ್ಯೆಗೆ ತುತ್ತಾಗಿರುವುದರಿಂದ ಆರ್ ಅಶ್ವಿನ್ ಅವರಿಗೆ ಸ್ಥಾನ ನೀಡಲಾಗಿದೆ.
ಮೂಲಗಳ ಪ್ರಕಾರ ರವೀಂದ್ರ ಜಡೇಜಾ ಸೊಂಟದ ಸ್ನಾಯು ಸೆಳೆತದಿಂದ ಬಳಲುತ್ತಿದ್ದು, ಅವರನ್ನು ಪರೀಕ್ಷಿಸಿರುವ ವೈದ್ಯರು ಕೆಲ ದಿನಗಳ ಕಾಲ ವಿಶ್ರಾಂತಿ ಪಡೆಯುವಂತೆ ಸಲಹೆ ನೀಡಿದ್ದಾರೆ. ಹೀಗಾಗಿ ರವೀಂದ್ರ ಜಡೇಜಾ ಇರಾನ್ ಕಪ್ ಟೂರ್ನಿಯಿಂದ ಹೊರಗುಳಿಯುವ ಸಾಧ್ಯತೆ ಇದ್ದು, ಅವರ ಬದಲಿಗೆ ಮತ್ತೋರ್ವ ಸ್ಪಿನ್ನರ್ ಆರ್ ಅಶ್ವಿನ್ ಅವರಿಗೆ ಸ್ಥಾನ ನೀಡಲಾಗಿದೆ.
ಇತ್ತೀಚೆಗೆ ನಡೆದ ಡಿಯೋಧರ್ ಟ್ರೋಫಿ ಕ್ರಿಕೆಟ್ ಟೂರ್ನಿ ವೇಳೆ ರವೀಂದ್ರ ಜಡೇಜಾ ಸೊಂಟದ ಭಾಗದ ಸ್ನಾಯು ಸೆಳೆತಕ್ಕೆ ಗುರಿಯಾಗಿದ್ದರು. ಬಳಿಕ ವೈದ್ಯರಿಂದ ಪರೀಕ್ಷೆಗೊಳಪಟ್ಟ ರವೀಂದ್ರ ಜಡೇಜಾ ವಿಶ್ರಾಂತಿ ಅಗತ್ಯವೆಂದು ವೈದ್ಯರು ಸಲಹೆ ನೀಡಿದ್ದಾರೆ ಎಂದು ಬಿಸಿಸಿಐ ತಿಳಿಸಿತ್ತು.
ಆ ಮೂಲಕ ಐಪಿಎಲ್ ಗೂ ಮುನ್ನ ದೇಶೀಯ ಕ್ರಿಕೆಟ್ ನಲ್ಲಿ ಆರ್ ಅಶ್ವಿನ್ ಪಾಲ್ಗೊಳ್ಳುತ್ತಿದ್ದು, ಉತ್ತಮ ಅಭ್ಯಾಸ ನಡೆಸುವ ವಿಶ್ವಾಸ ಹೊಂದಿದ್ದಾರೆ. ಇನ್ನು ಇದೇ ಮಾರ್ಚ್ 14 ರಿಂದ 18ರವರೆಗೂ ನಡೆಯಲಿರುವ ಇರಾನಿ ಟ್ರೋಫಿಯಲ್ಲಿ ರೆಸ್ಟ್ ಆಫ್ ಇಂಡಿಯಾ ತಂಡ ರಣಜಿ ಟ್ರೋಫಿ ಚಾಂಪಿಯನ್ ವಿದರ್ಭ ವಿರುದ್ಧ ಸೆಣಸಲಿದೆ. ನಾಗಪುರದಲ್ಲಿ ಪಂದ್ಯ ನಡೆಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್MumbaiಮುಂಬೈRavindra Jadejaರವೀಂದ್ರ ಜಡೇಜಾಇರಾನಿ ಟ್ರೋಫಿRest of Indiaರೆಸ್ಟ್ ಆಫ್ ಇಂಡಿಯಾಆರ್ ಅಶ್ವಿನ್R AshwinIrani Trophy
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


