ಅಕ್ರಮ ಸಂಬಂಧ, ಕಿರುಕುಳ ಆರೋಪ: ಯಾವುದೇ ತನಿಖೆಗೂ ಸಿದ್ಧ ಎಂದ ಟೀಂ ಇಂಡಿಯಾ ವೇಗಿ ಶಮಿ
ಭಾರತ ಕ್ರಿಕೆಟ್ ತಂಡದ ವೇಗಿ ಮೊಹಮ್ಮದ್ ಶಮಿ ಪ್ರಕರಣ ದಿನದಿಂದ ದಿನಕ್ಕೆ ಕಗ್ಗಂಟಾಗುತ್ತಿದೆ. ಆರೋಪ ಕೇಳಿ ಬಂದ ನಂದರ ಯಾರ ಕೈಗೂ ಸಿಗದಂತೆ ಕಣ್ಮರೆಯಾಗಿದ್ದ ಶಮಿ ಅವರು ಶನಿವಾರ ರಾತ್ರಿ ಖಾಸಗಿ ಸುದ್ದಿ ವಾಹಿನಿಯೊಂದರಲ್ಲಿ ಕಾಣಿಸಿಕೊಂಡಿದ್ದಾರೆ...

Published On :
ನವದೆಹಲಿ: ಭಾರತ ಕ್ರಿಕೆಟ್ ತಂಡದ ವೇಗಿ ಮೊಹಮ್ಮದ್ ಶಮಿ ಪ್ರಕರಣ ದಿನದಿಂದ ದಿನಕ್ಕೆ ಕಗ್ಗಂಟಾಗುತ್ತಿದೆ. ಆರೋಪ ಕೇಳಿ ಬಂದ ನಂದರ ಯಾರ ಕೈಗೂ ಸಿಗದಂತೆ ಕಣ್ಮರೆಯಾಗಿದ್ದ ಶಮಿ ಅವರು ಶನಿವಾರ ರಾತ್ರಿ ಖಾಸಗಿ ಸುದ್ದಿ ವಾಹಿನಿಯೊಂದರಲ್ಲಿ ಕಾಣಿಸಿಕೊಂಡಿದ್ದಾರೆ.
ಈ ವೇಳೆ ಮಾತನಾಡಿರುವ ಅವರು, ಎರಡೂ ಕುಟುಂಬಗಳಿಗೆ ತೀವ್ರ ಮುಜುಗರ ಉಂಟಾಗಿದೆ. ಹೀಗಾಗಿ ವಕೀಲರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಶೀಘ್ರದಲ್ಲಿಯೇ ಪ್ರಕರಣ ಇತ್ಯರ್ಥಪಡಿಸುವ ಬಗ್ಗೆ ಚರ್ಚಿಸಿರುವುದಾಗಿ ಶಮಿ ಹೇಳಿಕೊಂಡಿದ್ದಾರೆ.
ಪತ್ನಿ ಜಾಹನ್ ಮಾಡಿಹುವ ಆರೋಪಗ ಬಗ್ಗೆ ತನಿಖೆ ನಡೆಯುತ್ತಿದೆ. ಈ ಬಗ್ಗೆ ಪ್ರಸ್ತುತ ನಾನೇನನ್ನೂ ಮಾತನಾಡುವುದಿಲ್ಲ. ನಾನು ಯಾವುದೇ ತಪ್ಪನ್ನೂ ಮಾಡಿಲ್ಲ. ಯಾವುದೇ ತನಿಖೆಗೂ ಸಿದ್ಧನಿದ್ದೇನೆಂದು ಹೇಳಿದ್ದಾರೆ.
ನನ್ನ ಮೇಲೆ ಜಹಾನ್ ಪ್ರತಿ ದಿನ ವಿಭಿನ್ನ ಆರೋಪ ಮಾಡಿದ್ದಾರೆ. ಇದೆಲ್ಲ ಸುಳ್ಳು. ಪ್ರಕರಣದಲ್ಲಿ ತಪ್ಪಿತಸ್ಥನಲ್ಲ ಎಂದುೂ ಸಾಬೀತಾದ ಬಳಿಕ ಬಿಸಿಸಿಐ ನನ್ನನ್ನು ಕೇಂದ್ರ ಗುತ್ತಿಗೆಗೆ ಪರಿಗಣಿಸಲಿ ಎಂದು ಶಣಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್indiaಇಂಡಿಯಾMohammed Shamiಮೊಹಮ್ಮದ್ ಶಮಿಮ್ಯಾಚ್ ಫಿಕ್ಸಿಂಗ್match-fixingHasin jahanಹಸೀನ್ ಜಹಾನ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


