ಕ್ರಿಕೆಟ್

ನಿಡಹಾಸ್ ಟಿ20 ಸರಣಿ: ಭಾರತದ ಫೈನಲ್ ಹಾದಿ ಸುಗಮ, ಬಾಂಗ್ಲಾ ವಿರುದ್ಧ ರೋಚಕ ಜಯ

ಶ್ರೀಲಂಕಾದ ಕೊಲಂಬೋದ ಪ್ರೇಮದಾಸ ಕ್ರೀಡಾಂಗಣದಲ್ಲಿ ಬಾಂಗ್ಲಾದೇಶ ವಿರುದ್ಧ ನಡೆದ ಪಂದ್ಯದಲ್ಲಿ ಭಾರತ ತಂಡ 17 ರನ್ ಗಳ ರೋಚಕ ಜಯ ಸಾಧಿಸಿದೆ.

ನಿಡಹಾಸ್ ಟಿ20 ಸರಣಿ: ಭಾರತದ ಫೈನಲ್ ಹಾದಿ ಸುಗಮ, ಬಾಂಗ್ಲಾ ವಿರುದ್ಧ ರೋಚಕ ಜಯ
ವಿಕೆಟ್ ಪಡೆದ ಸಂಭ್ರಮದಲ್ಲಿ ಟೀಂ ಇಂಡಿಯಾ
Published On :
ಕೊಲಂಬೋ: ಶ್ರೀಲಂಕಾದ ಕೊಲಂಬೋದ ಪ್ರೇಮದಾಸ ಕ್ರೀಡಾಂಗಣದಲ್ಲಿ ಬಾಂಗ್ಲಾದೇಶ ವಿರುದ್ಧ ನಡೆದ ಪಂದ್ಯದಲ್ಲಿ ಭಾರತ ತಂಡ 17 ರನ್ ಗಳ ರೋಚಕ ಜಯ ಸಾಧಿಸಿದೆ.
ಭಾರತ ನೀಡಿದ 177ರನ್ ಗಳ ಗುರಿಯನ್ನು ಬೆನ್ನಟ್ಟಿದ ಬಾಂಗ್ಲಾದೇಶಕ್ಕೆ ಭಾರತದ ವೇಗಿ ವಾಷಿಂಗ್ಟನ್ ಸುಂದರ್ ಆರಂಭದಲ್ಲೇ ಮಾರಕವಾಗಿ ಪರಿಣಮಿಸಿದರು. ತಂಡದ ಮೊತ್ತ ಕೇವಲ 40 ರನ್ ಗಳಾಗುವಷ್ಟರಲ್ಲಿಯೇ ತಂಡ ಪ್ರಮುಖ 3 ವಿಕೆಟ್ ಕಳೆದುಕೊಂಡಿತ್ತು. ಆರಂಭಿಕರಾದ ತಮೀಮ್ ಇಕ್ಬಾಲ್ 27 ರನ್ ಗಳಿಸಿ ಔಟ್ ಆದರೆ, ಲಿತನ್ ದಾಸ್ 7 ರನ್ ಗೆ ನಿರ್ಗಮಿಸಿದರು. ಬಳಿಕ ಬಂದ ಸೌಮ್ಯ ಸರ್ಕಾರ ಕೇವಲ 1 ರನ್ ಗಳಿಸಿ ಔಟ್ ಆದರೆ, ಮಹಮದುಲ್ಲಾ 11 ರನ್ ಗಳಿಸಿ ಔಟ್ ಆದರು. 
ಒಂದೆಡೆ ವಿಕೆಟ್ ಗಳು ಉರುಳುತ್ತಿದ್ದರೂ ಮತ್ತೊಂದು ಬದಿಯಲ್ಲಿ ಗಟ್ಟಿಯಾಗಿ ನೆಲೆಯೂರಿದ್ದ ಮುಷ್ಪಿಕರ್ ರಹೀಂ ಅರ್ಧಶತಕ ಸಿಡಿಸಿ ಸಂಭ್ರಮಿಸಿದರು. ಬಳಿಕ ಮುಷ್ಫಿಕರ್ ಜೊತೆಗೂಡಿದ ಶಬ್ಬೀರ್ ರೆಹಮಾನ್ 27 ರನ್ ಗಳಿಸಿ ಉತ್ತಮ ಸಾಥ್ ನೀಡಿದರು. ಆದರೆ 17ನೇ ಓವರ್ ನಲ್ಲಿ ಶಬ್ಬೀರ್ ಕೂಡ ಶಾರ್ದೂಲ್ ಠಾಕೂರ್ ಬೌಲಿಂಗ್ ನಲ್ಲಿ ಔಟ್ ಆದರು. ಅಂತಿಮ ಓವರ್ ನಲ್ಲಿ ಹಸ್ಸನ್ ಕೂಡ 7 ರನ್ ಗಳಿಸಿ ಸಿರಾಜ್ ಗೆ ವಿಕೆಟ್ ಒಪ್ಪಿಸಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.