ನಿಡಹಾಸ್ ಟ್ರೋಫಿ: ಶ್ರೀಲಂಕಾ ಮಣಿಸಿದ ಬಾಂಗ್ಲಾದೇಶ ಫೈನಲ್ ಗೆ!
ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಪಂದ್ಯದಲ್ಲಿ ಅತಿಥೇಯ ಶ್ರೀಲಂಕಾ ವಿರುದ್ಧ ಪ್ರವಾಸಿ ಬಾಂಗ್ಲಾದೇಶ 2 ವಿಕೆಟ್ ಗಳ ರೋಚಕ ಜಯ ಸಾದಿಸಿದ್ದು, ನಿಡಹಾಸ್ ತ್ರಿಕೋನ ಟಿ20 ಸರಣಿಯ ಪೈನಲ್ ಪ್ರವೇಶ ಮಾಡಿದೆ.

Published On :
ಕೊಲಂಬೋ: ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಪಂದ್ಯದಲ್ಲಿ ಅತಿಥೇಯ ಶ್ರೀಲಂಕಾ ವಿರುದ್ಧ ಪ್ರವಾಸಿ ಬಾಂಗ್ಲಾದೇಶ 2 ವಿಕೆಟ್ ಗಳ ರೋಚಕ ಜಯ ಸಾದಿಸಿದ್ದು, ನಿಡಹಾಸ್ ತ್ರಿಕೋನ ಟಿ20 ಸರಣಿಯ ಪೈನಲ್ ಪ್ರವೇಶ ಮಾಡಿದೆ.
ಶ್ರೀಲಂಕಾ ನೀಡಿದ 160 ರನ್ ಗಳ ಗುರಿಯನ್ನು ಬೆನ್ನು ಹತ್ತಿದ ಬಾಂಗ್ಲಾದೇಶ ತಂಡ, 19.5 ಓವರ್ ನಲ್ಲಿ 8 ವಿಕೆಟ್ ಕಳೆದು ಕೊಂಡು ಗುರಿ ಮುಟ್ಟಿತ್ತು. ಬಾಂಗ್ಲಾದೇಶ ಪರ ಆರಂಭಿಕ ಆಟಗಾರ ತಮೀಮ್ ಇಕ್ಬಾಲ್ 50 ರನ್ ಹಾಗೂ ಮಹಮದುಲ್ಲಾ ಅಜೇಯ 43 ರನ್ ಗಳ ನೆರವಿನಿಂದ ಶ್ರೀಲಂಕಾ ವಿರುದ್ಧ ರೋಚಕ ಜಯ ಸಾಧಿಸಿತು. ಅಂತಿಮ ಓವರ್ ನಲ್ಲಿ ಶ್ರೀಲಂಕಾ ಪರ ವಾಲಿದ್ದ ಪಂದ್ಯವನ್ನು ಮಹಮದುಲ್ಲಾ ತಮ್ಮ ಚಾಕಚಕ್ಯತೆಯ ಆಟದಿಂದ ತಮ್ಮತ್ತ ತಿರುಗಿಸಿ ಬಾಂಗ್ಲಾದೇಶಕ್ಕೆ 2 ವಿಕೆಟ್ ರೋಚಕ ಜಯ ತಂದಿತ್ತರು.
ಇದಕ್ಕೂ ಮೊದಲು ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ಬಾಂಗ್ಲಾದೇಶ ಶ್ರೀಲಂಕಾವನ್ನು ಬ್ಯಾಟಿಂಗ್ ಗೆ ಆಹ್ವಾನಿಸಿತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ ತಂಡ ಕುಶಾಲ್ ಪೆರೇರಾ (61 ರನ್) ಮತ್ತು ತಿಸರಾ ಪೆರಾರಾ (58 ರನ್) ಅವರ ಅರ್ಧಶತಕಗಳ ನೆರವಿನಿಂದಾಗಿ ನಿಗದಿತ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 159 ರನ್ ಗಳನ್ನಷ್ಟೇ ಗಳಿಸಲು ಶಕ್ತವಾಯಿತು.
ಇನ್ನು ಸರಣಿಯಲ್ಲಿ ಈಗಾಗಲೇ ಎರಡು ಪಂದ್ಯಗಳನ್ನು ಗೆದ್ದು ಪೈನಲ್ ಪ್ರವೇಶಿಸಿರುವ ಭಾರತ ತಂಡವನ್ನು ಬಾಂಗ್ಲಾದೇಶ ಫೈನಲ್ ನಲ್ಲಿ ಎದುರಿಸಲಿದೆ. ಇದೇ ಮಾರ್ಚ್ 18ರಂದು ಪೈನಲ್ ಪಂದ್ಯ ನಡೆಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್indiaಭಾರತಶ್ರೀಲಂಕಾSrilankaಬಾಂಗ್ಲಾದೇಶಫೈನಲ್BangladeshColomboಕೊಲಂಬೋFinalNidahas Trophyನಿಡಹಾಸ್ ಟ್ರೋಫಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


