ಟಿ20ಯಲ್ಲಿ ರೋಹಿತ್ ಶರ್ಮಾ 7000 ರನ್ ಗಳ ಸಾಧನೆ
ಶ್ರೀಲಂಕಾದ ಕೊಲಂಬೊದಲ್ಲಿ ನಡೆಯುತ್ತಿರುವ ನಿಡಹಾಸ್ ತ್ರಿಕೋನ ಟಿ20 ಸರಣಿಯ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ....

Published On :
ಕೊಲಂಬೊ: ಶ್ರೀಲಂಕಾದ ಕೊಲಂಬೊದಲ್ಲಿ ನಡೆಯುತ್ತಿರುವ ನಿಡಹಾಸ್ ತ್ರಿಕೋನ ಟಿ20 ಸರಣಿಯ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ 7000 ರನ್ ಪೂರೈಸಿದ್ದು, ಈ ಸಾಧನೆ ಮಾಡಿದ ಮೂರನೇ ಭಾರತೀಯ ಹಾಗೂ ಒಟ್ಟಾರೆಯಾಗಿ 10ನೇ ಬ್ಯಾಟ್ಸ್‌ಮನ್ ಎಂಬ ಗೌರವಕ್ಕೆ ಪಾತ್ರವಾಗಿದ್ದಾರೆ.
ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಫೈನಲ್ ಪಂದ್ಯದಲ್ಲಿ ಹಿಟ್ ಮ್ಯಾನ್ ಇಂತಹದೊಂದು ಮೈಲುಗಲ್ಲು ತಲುಪಿದ್ದಾರೆ.
ಟೀಂ ಇಂಡಿಯಾ ಖಾಯಂ ನಾಯಕ ವಿರಾಟ್ ಕೊಹ್ಲಿ ಅವರಿಗೆ ವಿಶ್ರಾಂತಿ ಸೂಚಿಸಿದ್ದರಿಂದ ತ್ರಿಕೋನ ಸರಣಿಯಲ್ಲಿ ತಂಡವನ್ನು ಮುನ್ನಡೆಸುವ ಅವಕಾಶವನ್ನು ಉಪ ನಾಯಕರಾಗಿರುವ ರೋಹಿತ್ ಶರ್ಮಾ ಗಿಟ್ಟಿಸಿಕೊಂಡಿದ್ದಾರೆ.
ರೋಹಿತ್ ಪಡೆ ಮೊದಲ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಸೋಲು ಅನುಭವಿಸಿದ್ದರೂ ಬಳಿಕದ ಎಲ್ಲ ಮೂರು ಪಂದ್ಯಗಳನ್ನು ಗೆಲ್ಲುವ ಮೂಲಕ ಫೈನಲ್ ಜಾಗವನ್ನು ಖಾತ್ರಿಪಡಿಸಿಕೊಂಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


