ಟೆಸ್ಟ್‌ಗೆ ವಿರಾಟ್ ಕೊಹ್ಲಿಯಂತೆ ಚೇತೇಶ್ವರ ಪೂಜಾರ ಕೂಡ ಮುಖ್ಯ: ಗಂಗೂಲಿ
ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಕ್ರಿಕೆಟ್ ಮೂರು ಮಾದರಿಗಳಲ್ಲೂ ಅತ್ತುತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಅಂತೆ ಟೆಸ್ಟ್ ನಲ್ಲಿ ಕೊಹ್ಲಿಯಂತೆ ಚೇತೇಶ್ವರ ಪೂಜಾರ...

Published On :
ಕೋಲ್ಕತ್ತಾ: ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಕ್ರಿಕೆಟ್ ಮೂರು ಮಾದರಿಗಳಲ್ಲೂ ಅತ್ತುತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಅಂತೆ ಟೆಸ್ಟ್ ನಲ್ಲಿ ಕೊಹ್ಲಿಯಂತೆ ಚೇತೇಶ್ವರ ಪೂಜಾರ ಸಹ ಉತ್ತಮ ಆಟಗಾರ ಎಂದು ಟೀಂ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ ಹೇಳಿದ್ದಾರೆ.
ಟೆಸ್ಟ್ ಕ್ರಿಕೆಟ್ ನಲ್ಲಿ ಚೇತೇಶ್ವರ ಪೂಜಾರ ಅತ್ಯುತ್ತಮವಾಗಿ ಆಡಿದ್ದಾರೆ. ಅವರು ಆಡಿರುವ 57 ಟೆಸ್ಟ್ ಪಂದ್ಯಗಳ ಪೈಕಿ 14 ಶತಕಗಳನ್ನು ಸಿಡಿಸಿದ್ದಾರೆ. ಆದರೆ ಅವನ್ನು ಆಯ್ಕೆ ಪ್ರಕ್ರಿಯೆಯಲ್ಲಿ ಪರಿಗಣಿಸಲಾಗುತ್ತಿಲ್ಲ ಎಂದು ಹೇಳಿದ್ದಾರೆ.
ಕೋಲ್ಕತ್ತಾದಲ್ಲಿ ನಡೆದ ಎ ಸೆಂಚೂರಿ ಇಸ್ ನಾಟ್ ಎನಾಫ್ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಅವರು ಟೆಸ್ಟ್ ನಲ್ಲಿ ವಿರಾಟ್ ಕೊಹ್ಲಿ ಸಾಧನೆ ಇತರರಿಗಿಂತ ಉತ್ತಮವಾಗಿದೆ. ಆದರೆ ಚೇತೇಶ್ವರ ಪೂಜಾರ ಸಹ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದ್ದಾರೆ ಎಂದರು.
ಟೆಸ್ಟ್ ತಂಡದಲ್ಲಿ ಮೂರನೇ ಕ್ರಮಾಂಕ ಒಂದು ರೀತಿಯ ಭದ್ರಕೋಟೆ ಇದ್ದಂತೆ. ಅಲ್ಲಿ ಉತ್ತಮವಾಗಿ ಆಡಿದರೆ ತಂಡ ಉತ್ತಮ ರನ್ ಪೇರಿಸಬಹುದು. ಅದರಂತೆ ಟೀಂ ಇಂಡಿಯಾದ ಗೋಡೆ ಖ್ಯಾತಿಯ ರಾಹುಲ್ ದ್ರಾವಿಡ್ ಅವರು ಸಹ ಮೂರನೇ ಕ್ರಮಾಂಕದಲ್ಲಿ ಆಡುತ್ತಿದ್ದರು. ಅದೇ ರೀತಿ ಪೂಜಾರ ಸಹ ಮೂರನೇ ಕ್ರಮಾಂಕದಲ್ಲಿ ಆಡಿದ್ದು ತಂಡ ಉತ್ತಮ ರನ್ ದಾಖಲಿಸಲು ಆಸರೆಯಾಗಿದ್ದಾರೆ. ವಿರಾಟ್ ಕೊಹ್ಲಿಯಂತೆ ಟೆಸ್ಟ್ ತಂಡಕ್ಕೆ ಚೇತೇಶ್ವರ ಪೂಜಾರರ ಉಪಸ್ಥಿತಿ ಅಷ್ಟೇ ಮುಖ್ಯ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್ಟೀಂ ಇಂಡಿಯಾTeam IndiaVirat Kohliವಿರಾಟ್ ಕೊಹ್ಲಿTestಟೆಸ್ಟ್Sourav GangulyCheteshwar Pujaraಚೇತೇಶ್ವರ ಪೂಜಾರಸೌವರ್ ಗಂಗೂಲಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


