ಕ್ರಿಕೆಟ್

ಅಂಬೇಡ್ಕರ್ ಕುರಿತು ಟ್ವೀಟ್: ಹಾರ್ದಿಕ್ ಪಾಂಡ್ಯ ವಿರುದ್ಧ ಎಫ್ಐಆರ್ ದಾಖಲಿಸಲು ಕೋರ್ಟ್ ಆದೇಶ

ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಟೀಕ್ಸಿ ಟ್ವೀಟ್ ಮಾಡಿದ್ದ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ವಿರುದ್ಧ ಎಫ್ಐಆರ್ ದಾಖಲಿಸಲು ಪ.ಜಾತಿ/ಪ.ಪಂಗಡಗಳ ವಿಶೇಷ...........

ಅಂಬೇಡ್ಕರ್ ಕುರಿತು ಟ್ವೀಟ್: ಹಾರ್ದಿಕ್ ಪಾಂಡ್ಯ ವಿರುದ್ಧ ಎಫ್ಐಆರ್ ದಾಖಲಿಸಲು ಕೋರ್ಟ್ ಆದೇಶ
ಹಾರ್ದಿಕ್ ಪಾಂಡ್ಯ
Published On :
ಜೋಧ್ ಪುರ(ರಾಜಸ್ಥಾನ): ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಟೀಕಿಸಿ  ಟ್ವೀಟ್ ಮಾಡಿದ್ದ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ವಿರುದ್ಧ ಎಫ್ಐಆರ್ ದಾಖಲಿಸಲು ಪ.ಜಾತಿ/ಪ.ಪಂಗಡಗಳ ವಿಶೇಷ ನ್ಯಾಯಾಲಯ ಪೋಲೀಸರಿಗೆ ಆದೇಶ ನಿಡಿದೆ.
ಕ್ರಿಕೆಟಿಗ ಪಾಂಡ್ಯ ಡಿಸೆಂಬರ್ 26, 2017 ರಂದು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಅಂಬೇಡ್ಕರ್ ಅವರನ್ನು ಅವಮಾನಿಸುವಂತಹಾ ಕಮೆಂಟ್ ಒಂದನ್ನು ಹಾಕಿದ್ದರು. ಇದು ತಮ್ಮ ಸಮುದಾಯದ ಜನರ ಭಾವನೆಗಳನ್ನು ಘಾಸಿಗೊಳಿಸುತ್ತದೆ ಎಂದು ಅರ್ಜಿದಾರರಾದ ಡಿ.ಆರ್. ಮೇಘವಾಲ್ ದೂರಿನಲ್ಲಿ ಹೇಳಿದ್ದಾರೆ.
"ಯಾವ ಅಂಬೇಡ್ಕರ್??? ಅಡ್ಡ ಕಾನೂನುಗಳಿರುವ ಸಂವಿಧಾನವನ್ನು ರಚಿಸಿದವರೊ ಅಥವಾ ದೇಶದ ತುಂಬೆಲ್ಲಾ ಮೀಸಲಾತಿ ಎನ್ನುವ ರೋಗ ಹರಡಲು ಕಾರಣರಾದವರೆ?" ಎಂದು ಪಾಂಡ್ಯ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದರು. 
ರಾಜಸ್ಥಾನದ ಜಾಲೋರ್ ಜಿಲ್ಲೆಯಲ್ಲಿನ ರಾಷ್ಟ್ರೀಯ ಭೀಮ್ ಸೇನೆಯ ಸದಸ್ಯರಾಗಿರುವ ಮೇಘವಾಲ್ ಕ್ರಿಕೆಟ್ ಆಟಗಾರ ವಿರುದ್ಧ ವಿಶೇಷ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.