ದೀಪಿಕಾ ಜತೆ ಜಾಹೀರಾತಿನಲ್ಲಿ ನಟಿಸಲ್ಲ ಎಂದ ಕೊಹ್ಲಿ: ಆರ್‌ಸಿಬಿಗೆ 11 ಕೋಟಿ ನಷ್ಟ?
ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್)ನ ಫ್ರಾಂಚೈಸಿ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ತಂಡದ ನಾಯಕ ವಿರಾಟ್ ಕೊಹ್ಲಿ...

Published On :
ಮುಂಬೈ: ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್)ನ ಫ್ರಾಂಚೈಸಿ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ತಂಡದ ನಾಯಕ ವಿರಾಟ್ ಕೊಹ್ಲಿ ಜಾಹೀರಾತುವೊಂದರಲ್ಲಿ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಜತೆ ನಟಿಸಲ್ಲ ಎಂದಿದ್ದು ಇದರಿಂದ ಆರ್ಸಿಬಿ ಬರೋಬ್ಬರಿ 11 ಕೋಟಿ ರುಪಾಯಿ ಡೀಲ್ ಕಳೆದುಕೊಂಡಿದೆ.
ಆರ್ಸಿಬಿ ಹಾಗೂ ಗೋ ಐಬಿಬೋ ಡಾಟ್ ಕಾಮ್ ನಡುವೆ 11 ಕೋಟಿ ರುಪಾಯಿ ಡೀಲ್ ನಡೆಯಬೇಕಿತ್ತು. ಈ ಟ್ರಾವೆಲ್ ಏಜೆನ್ಸಿ ಕಂಪನಿಯ ಜಾಹಿರಾತಿನಲ್ಲಿ ವಿರಾಟ್ ಕೊಹ್ಲಿ ಮತ್ತು ದೀಪಿಕಾ ಪಡುಕೋಣೆ ಜತೆಯಾಗಿ ಕಾಣಿಸಿಕೊಳ್ಳಬೇಕಿತ್ತು.
ಆದರೆ ವಿರಾಟ್ ಕೊಹ್ಲಿ ತನ್ನ ಪತ್ನಿ ಅನುಷ್ಕಾ ಶರ್ಮಾ ಜತೆ ಬಿಟ್ಟು ಬೇರೆ ಯಾವ ನಟಿಯ ಜತೆಗೂ ನಟಿಸಲ್ಲ ಎಂದು ಹೇಳಿದ್ದಾರೆ. ಇದೇ ಕಾರಣಕ್ಕೆ ಆರ್ಸಿಬಿ ಕೋಟ್ಯಾಂತರ ರುಪಾಯಿ ಡೀಲ್ ಕಳೆದುಕೊಂಡಿದೆ ಎಂದು ಹೇಳಲಾಗಿದೆ.
ಐಪಿಎಲ್ 11ನೇ ಆವೃತ್ತಿಯಲ್ಲೂ ಆರ್ಸಿಬಿ ತಂಡದ ಪರ ಆಡುತ್ತಿರುವ ವಿರಾಟ್ ಕೊಹ್ಲಿ ಫ್ರಾಂಚೈಸಿ ತಂಡ 17 ಕೋಟಿ ರುಪಾಯಿ ನೀಡುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್ಜಾಹೀರಾತುVirat Kohliವಿರಾಟ್ ಕೊಹ್ಲಿDeepika Padukoneದೀಪಿಕಾ ಪಡುಕೋಣೆadvertisementRCBಆರ್ಸಿಬಿIPL 2018ಐಪಿಎಲ್ 2018
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


