20 ಶಾಲೆಗಳ ಅಭಿವೃದ್ಧಿಗಾಗಿ ನಿಧಿ ಬಿಡುಗಡೆ ಮಾಡಿದ ಸಚಿನ್ ತೆಂಡೂಲ್ಕರ್
ಕ್ರಿಕೆಟ್ ದಿಗ್ಗಜ, ರಾಜ್ಯಸಭಾ ಸದಸ್ಯ ಸಚಿನ್ ತೆಂಡೂಲ್ಕರ್ ಅವರು 20 ಶಾಲೆಗಳ ಅಭಿವೃದ್ಧಿಗಾಗಿ ನಿಧಿ ಬಿಡುಗಡೆ ಮಾಡಿದ್ದಾರೆ...

Published On :
ಮುಂಬೈ: ಕ್ರಿಕೆಟ್ ದಿಗ್ಗಜ, ರಾಜ್ಯಸಭಾ ಸದಸ್ಯ ಸಚಿನ್ ತೆಂಡೂಲ್ಕರ್ ಅವರು 20 ಶಾಲೆಗಳ ಅಭಿವೃದ್ಧಿಗಾಗಿ ನಿಧಿ ಬಿಡುಗಡೆ ಮಾಡಿದ್ದಾರೆ.
ಮುಂಬೈನ ಸ್ವೆರ್ರಿಯಲ್ಲಿನ ಗುರು ಗೋವಿಂದ್ ಸಿಂಗ್ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ಜತೆ ಸಂವಾದ ನಡೆಸಿದರು. ಬಲಿಷ್ಠ ಭಾರತ ನಿರ್ಮಾಣ ಮಾಡುವ ಉದ್ದೇಶದಿಂದ ಸಚಿನ್ ತೆಂಡೂಲ್ಕರ್ ಅವರು ಸಂಸತ್ ಸದಸ್ಯರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ(ಎಂಪಿಎಲ್‌ಎಡಿ) ಅಡಿಯಲ್ಲಿ ಶಾಲೆಗಳ ಅಭಿವೃದ್ಧಿಗಾಗಿ 7.4 ಕೋಟಿ ರುಪಾಯಿಯನ್ನು ಬಿಡುಗಡೆ ಮಾಡಿದರು.
ಗುರು ಗೋವಿಂದ್ ಸಿಂಗ್ ಶಾಲೆ ಸಚಿನ್ ನಿಧಿಯನ್ನು ಮಂಜೂರು ಮಾಡಿದ ಮೊದಲ ಶಾಲೆಯಾಗಿದ್ದು ತರಗತಿ ಕೊಠಡಿ ನಿರ್ಮಾಣ ಹಾಗೂ ನವೀಕರಣಕ್ಕಾಗಿ ನಿಧಿ ಬಿಡುಗಡೆ ಮಾಡಲಾಗಿದೆ.
ದೇಶಾದ್ಯಂತ ಶಾಲಾ ಮಕ್ಕಳ ಸುಧಾರಣೆ ಮಾತ್ರವಲ್ಲದೆ ಸಾರ್ವಜನಿಕ ಸೇವೆಗಳ ಸುಧಾರಣೆಗೂ ಎಂಪಿಎಲ್ಎಡಿ ನಿಧಿಯನ್ನು ಬಳಸಿಕೊಳ್ಳುವವರಲ್ಲಿ ಸಚಿನ್ ತೆಂಡೂಲ್ಕರ್ ಅವರು ಮುಂಚೂಣಿಯಲ್ಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


