ಓರ್ವ ಬ್ಯಾಟ್ಸ್‌ಮನ್ ಆಗಿ ಸ್ಟೀವ್ ಸ್ಮಿತ್ ರನ್ನು ಈಗಲು ನಾನು ಗೌರವಿಸುತ್ತೇನೆ: ಅಜಿಂಕ್ಯ ರಹಾನೆ
ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಚೆಂಡು ವಿರೂಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಿಕೆಟ್ ಆಸ್ಟ್ರೇಲಿಯಾದಿಂದ ನಿಷೇಧಗೊಂಡಿರುವ ಸ್ಟೀವ್ ಸ್ಮಿತ್ ಅವರನ್ನು...

Published On :
ಜೈಪುರ: ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಚೆಂಡು ವಿರೂಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಿಕೆಟ್ ಆಸ್ಟ್ರೇಲಿಯಾದಿಂದ ನಿಷೇಧಗೊಂಡಿರುವ ಸ್ಟೀವ್ ಸ್ಮಿತ್ ಅವರನ್ನು ಓರ್ವ ಬ್ಯಾಟ್ಸ್ ಮನ್ ಆಗಿ ಈಗಲು ನಾನು ಗೌರವಿಸುತ್ತೇನೆ ಎಂದು ರಾಜಸ್ತಾನ ರಾಯಲ್ಸ್ ತಂಡದ ನಾಯಕ ಅಜಿಂಕ್ಯ ರಹಾನೆ ಹೇಳಿದ್ದಾರೆ.
ಚೆಂಡು ವಿರೂಪ ಪ್ರಕರಣದಿಂದ ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) ಫ್ರಾಂಚೈಸಿ ತಂಡ ರಾಜಸ್ತಾನ ರಾಯಲ್ಸ್ ತಂಡದಿಂದ ಹೊರ ಹೋಗಿದ್ದು ಈ ಹಿನ್ನೆಲೆಯಲ್ಲಿ ಅಜಿಂಕ್ಯ ರಹಾನೆ ತಂಡಕ್ಕೆ ನಾಯಕರಾಗಿ ಆಯ್ಕೆಯಾಗಿದ್ದಾರೆ.
ಸಂಭವಿಸಬೇಕಾದದ್ದು ಈಗಾಗಲೇ ಸಂಭವಿಸಿದೆ. ಕ್ರಿಕೆಟ್ ಆಸ್ಟ್ರೇಲಿಯಾ ಮತ್ತು ಐಸಿಸಿ ಸ್ಟೀವ್ ಸ್ಮಿತ್ ಮೇಲೆ ಹೇರಿರುವ ದಂಡದ ಕುರಿತು ನಾನು ಕಾಮೆಂಟ್ ಮಾಡಲು ಬಯಸುವುದಿಲ್ಲ. ಆದರೆ ಅವರ ಬ್ಯಾಟಿಂಗ್ ದಾಖಲೆಯನ್ನು ನಾವು ಗೌರವಿಸಬೇಕು. ಓರ್ವ ಬ್ಯಾಟ್ಸ್ ಮನ್ ಮತ್ತು ಆಟಗಾರನಾಗಿ ಅವರನ್ನು ಗೌರವಿಸಬೇಕು ಎಂದು ಹೇಳಿದ್ದಾರೆ.
ಸ್ಟೀವ್ ಸ್ಮಿತ್ ತಂಡದಿಂದ ಹೊರಹೋಗಿದ್ದು ತಂಡದ ನಾಯಕನಾಗಿರುವ ನನ್ನ ಹೆಗಲ ಮೇಲೆ ದೊಡ್ಡ ಜವಾಬ್ದಾರಿ ಇದೆ. ಹೌದು ನಾವು ಅವರನ್ನು ಕಳೆದುಕೊಂಡಿದ್ದೇವೆ. ಆದರೆ ಅವರ ಬದಲಿಗೆ ನಮ್ಮ ತಂಡವನ್ನು ಹೇನ್ರಿಚ್ ಕಾಲ್ಸೆನ್ ಸೇರಿಕೊಂಡಿದ್ದಾರೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Ajinkya RahaneSteve SmithRajasthan Royalsರಾಜಸ್ತಾನ್ ರಾಯಲ್ಸ್ಅಜಿಂಕ್ಯ ರಹಾನೆಸ್ಟೀವ್ ಸ್ಮಿತ್IPL 2018ಐಪಿಎಲ್ 2018
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


