ಕ್ರಿಕೆಟ್

ಐಪಿಎಲ್ 2018: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಭ್ಯಾಸದಲ್ಲಿ ತೊಡಗಿರುವ ವಿರಾಟ್ ಕೊಹ್ಲಿ

ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 11ನೇ ಆವೃತ್ತಿಗಾಗಿ ಬೆಂಗಳೂರಿಗೆ ಬಂದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ ಚಿನ್ನಸ್ವಾಮಿ...

ಐಪಿಎಲ್ 2018: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಭ್ಯಾಸದಲ್ಲಿ ತೊಡಗಿರುವ ವಿರಾಟ್ ಕೊಹ್ಲಿ
ವಿರಾಟ್ ಕೊಹ್ಲಿ
Published On :
ಬೆಂಗಳೂರು: ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 11ನೇ ಆವೃತ್ತಿಗಾಗಿ ಬೆಂಗಳೂರಿಗೆ ಬಂದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಭ್ಯಾಸ ನಡೆಸಿದ್ದಾರೆ. 
ನಿನ್ನೆ ಮಧ್ಯಾಹ್ನ ಸಹ ಆಟಗಾರರ ಜತೆ ಕೊಹ್ಲಿ ಅಭ್ಯಾಸ ನಡೆಸಿದರು. ಈ ಸಂದರ್ಭದಲ್ಲಿ ಬೌಲಿಂಗ್ ಕೋಚ್ ಆಶಿಶ್ ನೆಹ್ರಾ ಜತೆಗಿದ್ದರು. ಬೌಲರ್ ಗಳಿಗೆ ಸಲಹೆ ನೀಡಿದರು. ಸ್ವಲ್ಪ ಸಮಯ ರನಿಂಗ್ ಮಾಡಿದ ಕೊಹ್ಲಿ ನಂತರ ನೆಟ್ ನಲ್ಲಿ ಬ್ಯಾಟಿಂಗ್ ಅಭ್ಯಾಸ ನಡೆಸಿದರು. 
ಸದ್ಯ ಕೆಲ ಆಟಗಾರರಷ್ಟೇ ತಂಡವನ್ನು ಕೂಡಿಕೊಂಡಿದ್ದು ಇನ್ನು ಒಂದೆರಡು ದಿನಗಳಲ್ಲಿ ಎಲ್ಲಾ ಆಟಗಾರರು ತಂಡವನ್ನು ಕೂಡಿಕೊಳ್ಳಲಿದ್ದಾರೆ. ಏಪ್ರಿಲ್ 7ರಿಂದ ಐಪಿಎಲ್ ಹಬ್ಬ ಆರಂಭವಾಗಲಿದೆ. ಆರ್ಸಿಬಿ ತಂಡ ಮೊದಲ ಪಂದ್ಯವನ್ನು ಏಪ್ರಿಲ್ 8ರಂದು ಕೊಲ್ಕತ್ತಾದಲ್ಲಿ ಕೆಕೆಆರ್ ತಂಡವನ್ನು ಎದುರಿಸುವ ಮೂಲಕ ಅಭಿಯಾನ ಆರಂಭಿಸಲಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.