ಕ್ರಿಕೆಟ್

ಮತ್ತೆ ಚೆನ್ನೈ ಮುಂದೆ ಮುಗ್ಗರಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು

ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 11ನೇ ಆವೃತ್ತಿಯ ಮಾಡು ಇಲ್ಲವೆ ಮಡಿ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 6 ವಿಕೆಟ್ ಗಳಿಂದ ಸೋಲು ಕಂಡಿದೆ...

ಮತ್ತೆ ಚೆನ್ನೈ ಮುಂದೆ ಮುಗ್ಗರಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು
ಎಂ ಎಸ್ ಧೋನಿ-ವಿರಾಟ್ ಕೊಹ್ಲಿ
Published On :
ಪುಣೆ: ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 11ನೇ ಆವೃತ್ತಿಯ ಮಾಡು ಇಲ್ಲವೆ ಮಡಿ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 6 ವಿಕೆಟ್ ಗಳಿಂದ ಸೋಲು ಕಂಡಿದೆ. 
ಪುಣೆಯಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ ತಂಡದ ಸ್ಟಾರ್ ಆಟಗಾರರು ವೈಫಲ್ಯ ಅನುಭವಿಸಿದ್ದು ಅಲ್ಪಮೊತ್ತಕ್ಕೆ ಔಟಾಗಿದ್ದರಿಂದ ನಿಗದಿತ ಓವರ್ ನಲ್ಲಿ 9 ವಿಕೆಟ್ ನಷ್ಟಕ್ಕೆ 127 ರನ್ ಪೇರಿಸಿತ್ತು. 
ಆರ್‌ಸಿಬಿ ನೀಡಿದ 128 ರನ್ ಗಳ ಗುರಿ ಬೆನ್ನಟ್ಟಿದ ಚೆನ್ನೈ ತಂಡ 4 ವಿಕೆಟ್ ಗೆ 128 ರನ್ ಬಾರಿಸುವ ಮೂಲಕ ಗೆಲುವು ಸಾಧಿಸಿತು. 
ಆರ್‌ಸಿಬಿ ಪರ ಪಾರ್ಥಿವ್ ಪಟೇಲ್ 53 ಮತ್ತು ಟೀಮ್ ಸೌಥಿ 36 ರನ್ ಗಳಿಸಿದ್ದಾರೆ. ಚೆನ್ನೈ ಪರ ಬೌಲಿಂಗ್ ನಲ್ಲಿ ರವೀಂದ್ರ ಜಡೇಜಾ 3, ಹರ್ಭಜನ್ ಸಿಂಗ್ 2 ವಿಕೆಟ್ ಪಡೆದಿದ್ದಾರೆ. 
ಚೆನ್ನೈ ಪರ ಅಂಬಟ್ಟಿ ರಾಯುಡು 32, ಸುರೇಶ್ ರೈನಾ 25, ಎಂಎಸ್ ಧೋನಿ ಅಜೇಯ 31 ರನ್ ಬಾರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.