ಐಪಿಎಲ್ 2018: ರಾಜಸ್ಥಾನ್ ರಾಯಲ್ಸ್ ವಿರುದ್ಧ ಪಂಜಾಬ್ ಗೆ ಜಯ; ಕೋಲ್ಕತ್ತಾ ತಂಡವನ್ನು ಮಣಿಸಿದ ಮುಂಬೈ
ಇಂದೋರ್ ನ ಹೋಳ್ಕರ್ ಕ್ರಿಕೆಟ್ ಮೈದಾನದಲ್ಲಿ ನಡ್ಕೆದ ರಾಜಸ್ಥಾನ್ ರಾಯಲ್ಸ್- ಪಂಜಾಬ್ ಕಿಂಗ್ಸ್ ಇಲೆವೆನ್ ಪಂದ್ಯದಲ್ಲಿ ಪಂಜಾಬ್ ತಂಡ 6 ವಿಕೆಟ್ ಗಳ ಜಯ ಗಳಿಸಿದೆ.

Published On :
ಇಂದೋರ್ ನ ಹೋಳ್ಕರ್ ಕ್ರಿಕೆಟ್ ಮೈದಾನದಲ್ಲಿ ನಡ್ಕೆದ ರಾಜಸ್ಥಾನ್ ರಾಯಲ್ಸ್- ಪಂಜಾಬ್ ಕಿಂಗ್ಸ್ ಇಲೆವೆನ್ ಪಂದ್ಯದಲ್ಲಿ ಪಂಜಾಬ್ ತಂಡ 6 ವಿಕೆಟ್ ಗಳ ಜಯ ಗಳಿಸಿದೆ.
54 ಎಸೆತಗಳಲ್ಲಿ 84 ರನ್ ಗಳನ್ನು ಗಳಿಸಿದ ಕೆಎಲ್ ರಾಹುಲ್ ಸ್ಫೋಟಕ ಬ್ಯಾಟಿಂಗ್ ನೆರವಿನಿಂದಾಗಿ ಪಂಜಾಬ್ ತಂಡ ರಾಜಸ್ಥಾನ್ ರಾಯಲ್ಸ್ ವಿರುದ್ಧ 6 ವಿಕೆಟ್ ಗಳ ಗೆಲುವು ದಾಖಲಿಸಿದೆ.
ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ ರಾಯಲ್ಸ್ ತಂಡ ನಿಗದಿತ 20 ಓವರ್ ಗಳಲ್ಲಿ 9 ವಿಕೆಟ್ ಗಳ ನಷ್ಟಕ್ಕೆ 152 ರನ್ ಗಳಿಸಿತ್ತು. ರಾಜಸ್ಥಾನ ರಾಯಲ್ಸ್ ತಂಡ ನೀಡಿದ್ದ ಗುರಿಯನ್ನು ಬೆನ್ನಟ್ಟಿದ ಪಂಜಾಬ್ ತಂಡ 18.4 ಓವರ್ ಗಳಲ್ಲಿ 4ವಿಕೆಟ್ ಗಳ ನಷ್ಟಕ್ಕೆ 155 ರನ್ ಗಳನ್ನು ಗಳಿಸಿ 6 ವಿಕೆಟ್ ಗಳ ಜಯ ಗಳಿಸಿದೆ. ಪಂಜಾಬ್-ಆರ್ ಆರ್ ಸ್ಕೋರ್ ಬೋರ್ಡ್
ಕೋಲ್ಕತ್ತಾ ವಿರುದ್ಧ ಮುಂಬೈ ಇಂಡಿಯನ್ಸ್ ಗೆ ಜಯ
ಇನ್ನು ಮುಂಬೈ ನ ವಾಂಖಡೆ ಕ್ರೀಡಾಂಗಣದಲ್ಲಿ ನಡೆದ ಮುಂಬೈ ಇಂಡಿಯನ್ಸ್-ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಕೋಲ್ಕತ್ತಾ ತಂಡವನ್ನು 13 ರನ್ ಗಳಿಂದ ಮಣಿಸಿದೆ.
ಈ ಪಂದ್ಯ ಗೆಲ್ಲುವ ಮೂಲಕ ಮುಂಬೈ ಇಂಡಿಯನ್ಸ್ ತಂಡಕ್ಕೆ ಪ್ಲೇ-ಆಫ್ ಭರವಸೆ ಇನ್ನೂ ಜೀವಂತವಾಗಿದೆ.
10 ಪಂದ್ಯಗಳ ಪೈಕಿ ಮುಂಬೈ ಇಂಡಿಯನ್ಸ್ ತಂಡ 4 ಪಂಡ್ಯಗಳನ್ನು ಗೆದ್ದಿದೆ. 4 ವಿಕೆಟ್ ಗಳ ನಷ್ಟಕ್ಕೆ 181 ರನ್ ಗಳಿಸಿದ್ದ ಮುಂಬೈ ಇಂಡಿಯನ್ಸ್ ತಂಡ ಕೋಲ್ಕತ್ತಾ ತಂಡವನ್ನು 20 ಓವರ್ ಗಳಲ್ಲಿ 168 ರನ್ ಗಳಿಗೆ ಕಟ್ಟಿ ಹಾಕುವಲ್ಲಿ ಯಶಸ್ವಿಯಾಯಿತು. ಕೋಲ್ಕತ್ತಾ ನೈಟ್ ರೈಡರ್ಸ್ -ಮುಂಬೈ ಇಂಡಿಯನ್ಸ್ ಸ್ಕೋರ್ ಬೋರ್ಡ್
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಮುಂಬೈಕೋಲ್ಕತ್ತಾಪಂಜಾಬ್Kolkata Knight RidersRajasthan Royalsರಾಜಸ್ಥಾನ್ ರಾಯಲ್ಸ್Kings XI PunjabMumbai IndiansIPL 2018ಐಪಿಎಲ್ 2018
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


