ಐಪಿಎಲ್ 2018: ಪಂಜಾಬ್ ವಿರುದ್ಧ ರಾಜಸ್ಥಾನ ರಾಯಲ್ಸ್ ಗೆ 15 ರನ್ ಗಳ ಜಯ
ಮೇ.08 ರಂದು ನಡೆದ ಪಂಜಾಬ್-ರಾಜಸ್ಥಾನ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ 15 ರನ್ ಗಳ ಜಯ ಗಳಿಸಿದೆ.

Published On :
ಮೇ.08 ರಂದು ನಡೆದ ಪಂಜಾಬ್-ರಾಜಸ್ಥಾನ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ 15 ರನ್ ಗಳ ಜಯ ಗಳಿಸಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆರಂಭಿಸಿದ ರಾಜಸ್ಥಾನ್ ರಾಯಲ್ಸ್ ತಂಡ ನಿಗದಿತ 20 ಓವರ್ ಗಳಲ್ಲಿ 8 ವಿಕೆಟ್ ಗಳ ನಷ್ಟಕ್ಕೆ 158 ರನ್ ಗಳಿಸಿತು. ಪಂಜಾಬ್ ಬೌಲರ್ ಗಳನ್ನು ಎಡಬಿಡದೆ ಕಾಡಿದ ಜೋಸ್ ಬಟ್ಲರ್ 58 ಎಸೆತಗಳಲ್ಲಿ 82 ರನ್ ಗಳಿಸಿ ತಂಡ 158 ರನ್ ಗಳಿಸಲು ನೆರವಾದರು.
ನಂತರ ಬ್ಯಾಟಿಂಗ್ ಆರಂಭಿಸಿದ ಪಂಜಾಬ್ ತಂಡದ ಪರ ಕೆಎಲ್ ರಾಹುಲ್ (70 ಎಸೆತಗಳಲ್ಲಿ 95 ರನ್, ಔಟಾಗದೇ) ಏಕಾಂಗಿ ಹೋರಾಟ ನಡೆಸಿದರು. ಆದರೆ ಉಳಿದ ಬ್ಯಾಟ್ಸ್ ಮನ್ ಗಳು ಪೆವಿಲಿಯನ್ ಪರೇಡ್ ನಡೆಸಿದ ಪರಿಣಾಮ ರಾಹುಲ್ ಅವರ ಏಕಾಂಗಿ ಹೋರಾಟ ಫಲಿಸದೇ ಪಂಜಾಬ್ ತಂಡ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 143 ರನ್ ಗಳಿಸಲಷ್ಟೆ ಸಾಧ್ಯವಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


