ಕ್ರಿಕೆಟ್

ರಸ್ತೆ ಅಪಘಾತದಲ್ಲಿ ಕ್ರಿಕೆಟಿಗ ಶಾರ್ದೂಲ್ ಠಾಕೂರ್ ಪೋಷಕರಿಗೆ ಗಾಯ!

ರಸ್ತೆ ಅಪಘಾತವೊಂದರಲ್ಲಿ ಟೀಂ ಇಂಡಿಯಾದ ಬೌಲರ್ ಶಾರ್ದೂಲ್ ಠಾಕೂರ್ ಪೋಷಕರು ಗಾಯಗೊಂಡಿದ್ದಾರೆ...

ರಸ್ತೆ ಅಪಘಾತದಲ್ಲಿ ಕ್ರಿಕೆಟಿಗ ಶಾರ್ದೂಲ್ ಠಾಕೂರ್ ಪೋಷಕರಿಗೆ ಗಾಯ!
ಶಾರ್ದೂಲ್ ಠಾಕೂರ್
Published On :
ಪಾಲ್ಗರ್(ಮುಂಬೈ): ರಸ್ತೆ ಅಪಘಾತವೊಂದರಲ್ಲಿ ಟೀಂ ಇಂಡಿಯಾದ ಬೌಲರ್ ಶಾರ್ದೂಲ್ ಠಾಕೂರ್ ಪೋಷಕರು ಗಾಯಗೊಂಡಿದ್ದಾರೆ. 
ಬೈಕ್ ನಲ್ಲಿ ಹೋಗುತ್ತಿದ್ದಾಗ ಶಾರ್ದೂಲ್ ತಂದೆ ನರೇಂದ್ರ ಠಾಕೂರ್, ತಾಯಿ ಹಂಸ ಠಾಕೂರ್ ಅವರು ಆಯತಪ್ಪಿ ಕೆಳಗೆ ಬಿದ್ದಿದ್ದಾರೆ. 
ಮುಂಬೈ ಸಮೀಪದ ಪಾಲ್ಗರ್ ಜಿಲ್ಲೆಯಲ್ಲಿ ನಿನ್ನೆ ರಾತ್ರಿ ದ್ವಿಚಕ್ರ ವಾಹನದಲ್ಲಿ ಹೋಗುವಾಗ ಅಪಘಾತದಲ್ಲಿ ಗಾಯಗೊಂಡಿದ್ದು, ಅವರನ್ನು ಪಾಲ್ಗರ್ ದ್ವಾಲೆ ಆಸ್ಪತ್ರೆಗೆ ಸೇರಿಸಲಾಗಿದೆ. ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 
ಶಾರ್ದೂಲ್ ಠಾಕೂರ್ ಪ್ರಸ್ತುತ ಇಂಡಿಯನ್ ಪ್ರಿಮಿಯರ್ ಲೀಗ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ ಆಡುತ್ತಿದ್ದಾರೆ. ಇದೀಗ ಅವರು ಐರ್ಲೆಂಡ್ ಹಾಗೂ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗಾಗಿ ಆಯ್ಕೆಯಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.