ಶಿಖರ್ ಧವನ್ - ವಿಲಿಯಮ್ಸನ್ ಸ್ಫೋಟಕ ಜೊತೆಯಾಟ: ಡೆಲ್ಲಿ ಡೇರ್ ಡೆವಿಲ್ಸ್ ವಿರುದ್ಧ ಹೈದರಾಬಾದ್ ಗೆ 9 ವಿಕೆಟ್ ಗೆಲುವು
ಫಿರೋಜ್ ಶಾ ಕೋಟ್ಲಾ ಮೈದಾನದಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಶಿಖರ್ ಧವನ್ ಹಾಗೂ ಕೇನ್ ವಿಲಿಯಮ್ಸನ್ ಸ್ಫೋಟಕ ಜೊತೆಯಾಟದ ಪರಿಣಾಮದಿಂದ ಸನ್ ರೈಸರ್ಸ್ ಹೈದರಾಬಾದ್ ತಂಡ ಡೆಲ್ಲಿ ಡೇರ್

Published On :
ದೆಹಲಿ: ಫಿರೋಜ್ ಶಾ ಕೋಟ್ಲಾ ಮೈದಾನದಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಶಿಖರ್ ಧವನ್ ಹಾಗೂ ಕೇನ್ ವಿಲಿಯಮ್ಸನ್ ಸ್ಫೋಟಕ ಜೊತೆಯಾಟದ ಪರಿಣಾಮದಿಂದ ಸನ್ ರೈಸರ್ಸ್ ಹೈದರಾಬಾದ್ ತಂಡ ಡೆಲ್ಲಿ ಡೇರ್ ಡೆವಿಲ್ಸ್ ವಿರುದ್ಧ 9 ವಿಕೆಟ್ ಗಳ ಗೆಲುವು ದಾಖಲಿಸಿದೆ.
ಹೈದರಾಬಾದ್ ತಂಡ ಆರಂಭಿಕ ಆಟಗಾರ ಅಲೆಕ್ಸ್ ಹೇಲ್ಸ್ ವಿಕೆಟ್ ಕಳೆದುಕೊಂಡು ಆಘಾತ ಎದುರಿಸಿತಾದರೂ, ಶಿಖರ್ ಧವನ್ ಹಾಗೂ ನಾಯಕ ವಿಲಿಯಮ್ಸನ್ ಜೊತೆಯಾಟ ಹೈದರಾಬಾದ್ ತಂಡ ರನ್ ವೇಗವನ್ನು ಹೆಚ್ಚಿಸಿ ತಂಡದ ಗೆಲುವಿಗೆ ಕಾರಣವಾಯಿತು.
ಆಕರ್ಷಕ ಇನ್ನಿಂಗ್ಸ್ ಕಟ್ಟಿದ ಶಿಖರ್ ಧವನ್ 50 ಎಸೆತಗಳಲ್ಲಿ 92 ರನ್ ಗಳಿಸಿದರೆ ಹಾಗೂ ವಿಲಿಯಮ್ಸನ್ 53 ಎಸೆತಗಳಲ್ಲಿ 83 ರನ್ ಗಳಿಸಿದರು, ಲಯಕಂಡುಕೊಳ್ಳುವಲ್ಲಿ ಯಡವುತ್ತಿದ್ದ ಶಿಖರ್ ಧವನ್ ಕೇವಲ 30 ಎಸೆತಗಳಲ್ಲಿಯೇ ಅರ್ಧಶತಕ ಗಳಿಸುವ ಮೂಲಕ ಈ ಪಂದ್ಯದಲ್ಲಿ ಲಯ ಕಂಡುಕೊಂಡರು.
ಇದಕ್ಕೂ ಮುನ್ನ ಬ್ಯಾಟಿಂಗ್ ಮಾಡಿದ ಡೆಲ್ಲಿ ಡೇರ್‌ಡೆವಿಲ್ಸ್ ತಂಡ ರಿಷಭ್ ಪಂತ್ ಅವರ ಆಕರ್ಷಕ ಶತಕ ( 63 ಎಸೆತಗಳಲ್ಲಿ 128 ರನ್, ನಾಟ್ ಔಟ್) ದ ನೆವಿನೊಂದಿಗೆ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 187 ರನ್‌ಗಳ ಬೃಹತ್ ಮೊತ್ತ ಗಳಿಸಿತು. ಆದರೆ ಡೆಲ್ಲಿ ಡೇರ್ ಡೆವಿಲ್ಸ್ ತಂಡದ ಬೌಲಿಂಗ್ ವೈಫಲ್ಯದಿಂದಾಗಿ ಹೈದರಾಬಾದ್ ತಂಡದ ಎದುರು ಡೆಲ್ಲಿ ಡೇರ್ ಡೆವಿಲ್ಸ್ ತಂಡ ಸೋಲು ಕಂಡಿತು. ಸ್ಕೋರ್ ವಿವರಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


