ಕ್ರಿಕೆಟ್

ಐರ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಕೊಹ್ಲಿ ಆಡುವುದಿಲ್ಲ: ಬಗೆಹರಿದ ಗೊಂದಲ

ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಐರ್ಲೆಂಡ್ ವಿರುದ್ಧ ಟಿ20 ಪಂದ್ಯದಲ್ಲಿ ಆಡುತ್ತಾರೋ ಇಲ್ಲವೋ ಎನ್ನುವ ಗೊಂದಲ ಬಗೆಹರಿದಿದೆ...

ಐರ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಕೊಹ್ಲಿ ಆಡುವುದಿಲ್ಲ: ಬಗೆಹರಿದ ಗೊಂದಲ
ವಿರಾಟ್ ಕೊಹ್ಲಿ
Published On :
ನವದೆಹಲಿ: ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಐರ್ಲೆಂಡ್ ವಿರುದ್ಧ ಟಿ20 ಪಂದ್ಯದಲ್ಲಿ ಆಡುತ್ತಾರೋ ಇಲ್ಲವೋ ಎನ್ನುವ ಗೊಂದಲ ಬಗೆಹರಿದಿದೆ. 
ಹೌದು ವಿರಾಟ್ ಕೊಹ್ಲಿ ಅವರು ಜೂನ್ ತಿಂಗಳು ಪೂರ್ತಿ ಇಂಗ್ಲೆಂಡ್ ಕೌಂಟಿಯಲ್ಲಿ ಆಡಬೇಕಿತ್ತು. ಇದೇ ವೇಳೆ ಟೀಂ ಇಂಡಿಯಾ ವಿರುದ್ಧ ಐರ್ಲೆಂಡ್ ಟಿ20 ಸರಣಿಯನ್ನು ಆಡಲಿದೆ. ಹೀಗಾಗಿ ಕೊಹ್ಲಿ ಐರ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಆಡುತ್ತಾರೋ ಅಥವಾ ಇಂಗ್ಲೆಂಡ್ ಕೌಂಟಿಯಲ್ಲಿ ಆಡುತ್ತಾರೋ ಎಂಬ ಗೊಂದಲ ಉದ್ಬವವಾಗಿತ್ತು. 
ಈ ಮಧ್ಯೆ ಬಿಸಿಸಿಐ ಐರ್ಲೆಂಡ್ ವಿರುದ್ಧದ ಟಿ20 ಸರಣಿಗೆ ಕೊಹ್ಲಿಯನ್ನು ಆಯ್ಕೆ ಮಾಡಿ ಕೊಹ್ಲಿ ಪೇಚಿಗೆ ಸಿಲುಕುವಂತೆ ಮಾಡಿತ್ತು. ಇದೀಗ ಕೊಹ್ಲಿ ಮೊದಲ ಟಿ20 ಪಂದ್ಯಕ್ಕೆ ಗೈರಾಗಲಿದ್ದು ಎರಡನೇ ಟಿ20 ಪಂದ್ಯದಲ್ಲಿ ಆಡಲಿದ್ದಾರೆ ಎಂದು ಹೇಳಲಾಗಿದೆ. 
ಜೂನ್ 28ಕ್ಕೆ ಇಂಗ್ಲೆಂಡ್ ಕೌಂಟಿ ಪಂದ್ಯ ಮುಗಿಯಲಿದೆ. ಇನ್ನು ಜೂನ್ 29ಕ್ಕೆ ಐರ್ಲೆಂಡ್ ವಿರುದ್ಧ ಎರಡನೇ ಟಿ20 ಪಂದ್ಯ ನಡೆಯಲಿದ್ದು ಆ ಪಂದ್ಯದಲ್ಲಿ ಕೊಹ್ಲಿ ಆಡಲಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.