ಐಪಿಎಲ್ 2018: ಹೈದರಾಬಾದ್ ವಿರುದ್ಧ ಗೆದ್ದ ಚೆನ್ನೈ ಫೈನಲ್‌ಗೆ ಲಗ್ಗೆ
ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 11ನೇ ಆವೃತ್ತಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಗೆಲುವು ಸಾಧಿಸುವ ಮೂಲಕ ಫೈನಲ್‌ಗೆ ಲಗ್ಗೆ ಇಟ್ಟಿದೆ...

Published On :
ಮುಂಬೈ: ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 11ನೇ ಆವೃತ್ತಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಗೆಲುವು ಸಾಧಿಸುವ ಮೂಲಕ ಫೈನಲ್‌ಗೆ ಲಗ್ಗೆ ಇಟ್ಟಿದೆ.
ಮುಂಬೈನಲ್ಲಿ ನಡೆದ ಮೊದಲನೇ ಕ್ವಾಲಿಫೈಯರ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಹೈದರಾಬಾದ್ ತಂಡ ನಿಗದಿತ ಓವರ್ ನಲ್ಲಿ 7 ವಿಕೆಟ್ ನಷ್ಟಕ್ಕೆ 139 ರನ್ ಗಳಿಸಿತು. 140 ರನ್ ಗಳ ಅಲ್ಪಮೊತ್ತವನ್ನು ಬೆನ್ನಟ್ಟಿದ ಚೆನ್ನೈ ತಂಡಕ್ಕೆ ಹೈದರಾಬಾದ್ ಬೌಲರ್ ಗಳು ಮಾರಕವಾಗಿ ಪರಿಣಮಿಸಿದರು. ಇನ್ನೇನು ಸೋಲಿನ ಹಂತಕ್ಕೆ ತಲುಪಿದ್ದ ತಂಡವನ್ನು ಡುಪ್ಲೇಸಿಸ್ ಸ್ಫೋಟಕ ಬ್ಯಾಟಿಂಗ್ ಮಾಡಿ ಗೆಲುವಿಗೆ ಕಾರಣರಾದರು.
ಹೈದರಾಬಾದ್ ಪರ ಶಿಖರ್ ಧವನ್ 0, ಕೇನ್ ವಿಲಿಯಮ್ಸನ್ 24, ಯೂಸೆಫ್ ಪಠಾನ್24, ಬ್ರಾಥ್ ವೈಟ್ 43 ರನ್ ಸಿಡಿಸಿದ್ದಾರೆ.
ಚೆನ್ನೈ ಪರ ಡುಪ್ಲೇಸಿಸ್ 67, ಸುರೇಶ್ ರೈನಾ 22, ಶಾರ್ದೂಲ್ ಠಾಕೂರ್ ಅಜೇಯ 15 ರನ್ ಸಿಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
MumbaiಮುಂಬೈChennai Super KingsSunrisers Hyderabadಸನ್ ರೈಸರ್ಸ್ ಹೈದರಾಬಾದ್ಚೆನ್ನೈ ಸೂಪರ್ ಕಿಂಗ್ಸ್IPL 2018ಐಪಿಎಲ್ 2018
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


