ಪ್ರಧಾನಿ ಮೋದಿ, ಅನುಷ್ಕಾಗೆ ಫಿಟ್ ನೆಸ್ ಚಾಲೆಂಜ್ ಹಾಕಿದ ವಿರಾಟ್ ಕೊಹ್ಲಿ!
ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಪ್ರಧಾನಿ ಮೋದಿ, ಕ್ರಿಕೆಟಿಗ ಮಹೇಂದ್ರಸಿಂಗ್ ಧೋನಿ ಹಾಗೂ ತನ್ನ ಪತ್ನಿ, ನಟಿ ಅನುಷ್ಕಾ ಶರ್ಮಾಗೆ ಫಿಟ್ ನೆಸ್ ಚಾಲೆಂಜ್ ನೀಡಿದ್ದಾರೆ.

Published On :
ನವದೆಹಲಿ: ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಪ್ರಧಾನಿ ಮೋದಿ, ಕ್ರಿಕೆಟಿಗ ಮಹೇಂದ್ರಸಿಂಗ್ ಧೋನಿ ಹಾಗೂ ತನ್ನ ಪತ್ನಿ, ನಟಿ ಅನುಷ್ಕಾ ಶರ್ಮಾಗೆ ಫಿಟ್ ನೆಸ್ ಚಾಲೆಂಜ್ ನೀಡಿದ್ದಾರೆ.
"’ನಾನು ಫಿಟ್ ಆದ್ರೆ ದೇಶ ಫಿಟ್ (HumFitTohIndiaFi) ಕ್ಯಾಂಪೇನ್ ನ ಮೂಲಕ ಅವರು ಈ ಚಾಲೆಂಜ್ ನೀಡಿದ್ದಾರೆ ಎಂದು ಭಾರತ ಸರ್ಕಾರದ ಯುವಜನ ಹಾಗೂ ಕ್ರೀಡಾ ಸಚಿವ ರಾಜವರ್ಧನ್ ಸಿಂಗ್ ರಾಥೋಡ್ ಹೇಳಿದ್ದಾರೆ.
ತಮ್ಮ ಟ್ವಿಟ್ಟರ್ ನಲ್ಲಿ ರಾಥೋಡ್ ಪೋಸ್ಟ್ ಮಾಡಿದ ವಿಡಿಯೋದಲ್ಲಿ ತಮ್ಮ "ಫಿಟ್ನೆಸ್ ಮಂತ್ರ" ದ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಜತೆಗೆ ಮೋದಿ ಅವರು ತಮ್ಮ ದೇಹವನ್ನು ಫಿಟ್ ಆಗಿಟ್ಟುಕೊಂಡಿದ್ದು ಇದರ ಕಾರಣಕ್ಕೆ ನಮಗೆಲ್ಲಾ ಸ್ಪೂರ್ತಿಯಾಗಿದ್ದಾರೆ ಎಂದಿದ್ದಾರೆ.
ಇದೇ ವೇಳೆ ರಾಥೋಡ್ ವಿರಾಟ್ ಕೊಹ್ಲಿ, ಸೈನಾ ನೆಹ್ವಾಲ್, ಹೃತಿಕ್ ರೋಷನ್ ಗೆ ಫಿಟ್ ನೆಸ್ ಚಾಲೆಂಜ್ ನಿಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
PM Modiಪ್ರಧಾನಿ ಮೋದಿAnushka Sharmaಅನುಷ್ಕಾ ಶರ್ಮಾVirat Kohliವಿರಾಟ್ ಕೊಹ್ಲಿFitness challengeಫಿಟ್ ನೆಸ್ ಚಾಲೆಂಜ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


