ಐಪಿಎಲ್ ಫೈನಲ್: ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ಫೀಲ್ಡಿಂಗ್ ಆಯ್ಕೆ
ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ 2018ರ ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) ಫೈನಲ್ ಹಣಾಹಣಿ ಆರಂಭವಾಗಿದ್ದು,.....

Published On :
ಮುಂಬೈ: ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ 2018ರ ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) ಫೈನಲ್ ಹಣಾಹಣಿ ಆರಂಭವಾಗಿದ್ದು, ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡ, ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.
ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕೇನ್ ವಿಲಿಯಮ್ಸನ್ ನೇತೃತ್ವದ ಸನ್ ರೈಸರ್ಸ್ ಹೈದರಾಬಾದ್ ಎರಡೂ ತಂಡಗಳು ಬಲಿಷ್ಠವಾಗಿದ್ದು, ಇಂದು ನಡೆಯುತ್ತಿರುವ ಹೈವೋಲ್ಟೇಜ್ ಫೈನಲ್ ಪಂದ್ಯದಲ್ಲಿ ಯಾರು ಗೆದ್ದು ಚಾಂಪಿಯನ್ ಆಗ್ತಾರೆ ಎಂಬ ಕುತೂಹಲ ಕೆರಳಿಸಿದೆ.
ಚೆನ್ನೈ ಸೂಪರ್ ಕಿಂಗ್ಸ್ ದಾಖಲೆಯ 7ನೇ ಬಾರಿ ಫೈನಲ್ ಅಖಾಡದಲ್ಲಿ ಕಾಣಿಸಿಕೊಂಡಿದ್ದು, 2010 ಹಾಗೂ 2011ರಲ್ಲಿ ಸತತ ಎರಡು ಬಾರಿ ಚಾಂಪಿಯನ್ ಆಗಿತ್ತು. ಆ ನಂತರ ಸಿಎಸ್‌ಕೆಗೆ ಪ್ರಶಸ್ತಿ ಮರೀಚಿಕೆಯಾಗಿ ಉಳಿದಿದೆ.
ಅಂಕಪಟ್ಟಿಯಲ್ಲಿ ಮೊದಲೆರೆಡು ಸ್ಥಾನಗಳಲ್ಲಿದ್ದ ಹೈದರಾಬಾದ್ ಮತ್ತು ಚೆನ್ನೈ ನಡುವೆ ನಡೆದ ಮೊದಲನೇ ಕ್ವಾಲಿಫೈಯರ್ ಪಂದ್ಯದಲ್ಲಿ ಚೆನ್ನೈ ತಂಡ 2 ವಿಕೆಟ್ ಗಳಿಂದ ಭರ್ಜರಿ ಜಯಗಳಿಸಿತ್ತು. ಇದರಿಂದಾಗಿ ಚೆನ್ನೈ ತಂಡಕ್ಕೆ ಗೆಲುವಿನ ಆಶಾಭಾವ ಹೆಚ್ಚಿದೆ.
ಇನ್ನು ಹೈದರಾಬಾದ್ ತಂಡದಲ್ಲಿ ರಶೀದ್ ಖಾನ್ ಸ್ಪಿನ್ ದಾಳಿ ತಂಡಕ್ಕೆ ಆನೆ ಬಲ ನೀಡಿದೆ. ಹೀಗೆ ಉಭಯ ತಂಡಗಳು ಬಲಿಷ್ಠ ಆಟಗಾರರನ್ನು ಹೊಂದಿದ್ದು ಇಬ್ಬರ ನಡುವೆ ರೋಚಕ ಹಣಾಹಣಿ ನಡೆಯುವ ಸಾಧ್ಯತೆ ಇದೆ.
ಹೈದರಾಬಾದ್ ತಂಡ ಆಡಿರುವ 16 ಪಂದ್ಯಗಳ ಪೈಕಿ 10 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಇನ್ನು ಚೆನ್ನೈ ಸೂಪರ್ ಕಿಂಗ್ಸ್ ತಂಡ 15 ಪಂದ್ಯಗಳ ಪೈಕಿ 10 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Chennai Super KingsSunrisers Hyderabadಚೆನ್ನೈ ಸೂಪರ್ ಕಿಂಗ್ಸ್IPL Final 2018ಐಪಿಎಲ್ ಫೈನಲ್ 2018ಸನ್ ರೈಸರ್ಸ್ ಹೈದರಾಬಾದ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


