ಕ್ರಿಕೆಟ್

ಈ ದಾಖಲೆ ನಿರ್ಮಿಸಿದ ವಿಶ್ವದ ಮೊದಲ ನಾಯಕ ಎಂಎಸ್ ಧೋನಿ, ಇಷ್ಟಕ್ಕೂ 'ಕೂಲ್ ಕ್ಯಾಪ್ಟನ್' ಮಾಡಿದ್ದೇನು ಗೊತ್ತಾ?

ಚೆನ್ನೈ ತಂಡಕ್ಕೆ 2018ರ ಐಪಿಎಲ್ ಟ್ರೋಫಿ ಗೆದ್ದುಕೊಟ್ಟ ಕೂಲ್ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಖಾತೆಗೆ ಮತ್ತೊಂದು ಅಪೂರ್ವ ದಾಖಲೆಯೊಂದು ಸೇರ್ಪಡೆಯಾಗಿದೆ.

ಈ ದಾಖಲೆ ನಿರ್ಮಿಸಿದ ವಿಶ್ವದ ಮೊದಲ ನಾಯಕ ಎಂಎಸ್ ಧೋನಿ, ಇಷ್ಟಕ್ಕೂ 'ಕೂಲ್ ಕ್ಯಾಪ್ಟನ್' ಮಾಡಿದ್ದೇನು ಗೊತ್ತಾ?
ಪ್ರಶಸ್ತಿ ಜಯಿಸಿದ ಬಳಿಕ ಚೆನ್ನೈಗೆ ಆಗಮಿಸಿದ ಧೋನಿಗೆ ಅದ್ಧೂರಿ ಸ್ವಾಗತ
Published On :
ಮುಂಬೈ: ಚೆನ್ನೈ ತಂಡಕ್ಕೆ 2018ರ ಐಪಿಎಲ್ ಟ್ರೋಫಿ ಗೆದ್ದುಕೊಟ್ಟ ಕೂಲ್ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಖಾತೆಗೆ ಮತ್ತೊಂದು ಅಪೂರ್ವ ದಾಖಲೆಯೊಂದು ಸೇರ್ಪಡೆಯಾಗಿದೆ.
ನಿನ್ನೆ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2018ರ ಫೈನಲ್ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ 8 ವಿಕೆಟ್ ಭರ್ಜರಿ ಜಯ ಸಾಧಿಸಿದ ಚೆನ್ನೈ ತಂಡ ಮೂರನೇ ಬಾರಿಗೆ ಐಪಿಎಲ್ ಪ್ರಶಸ್ತಿ ಪಡೆದ ದಾಖಲೆ ನಿರ್ಮಿಸಿತು. ಇದರ ಬೆನ್ನಲ್ಲೇ ಚೆನ್ನೈ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಖಾತೆಗೂ ಅಪೂರ್ವ ದಾಖಲೆಯೊಂದು ಸೇರ್ಪಡೆಯಾಗಿದ್ದು, ಅತೀ ಹೆಚ್ಚು ಟಿ20 ಪಂದ್ಯಗಳಲ್ಲಿ ಗೆಲುವು ಸಾಧಿಸಿದ ವಿಶ್ವದ ಮೊದಲ ನಾಯಕ ಎಂಬ ಕೀರ್ತಿಗೆ ಧೋನಿ ಭಾಜನರಾಗಿದ್ದಾರೆ.
ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ ಬಳಿಕ ಐಪಿಎಲ್ ಸೇರಿದಂತೆ ಈ ವರೆಗೂ ಧೋನಿ 255 ಟಿ20 ಪಂದ್ಯಗಳನ್ನಾಡಿದ್ದು, ಈ ಪೈಕಿ 150 ಟಿ20 ಪಂದ್ಯಗಳನ್ನು ಜಯಿಸಿದ್ದಾರೆ. ಟಿ20 ಮಾದರಿಯಲ್ಲಿ 150 ಪಂದ್ಯಗಳನ್ನು ಗೆಲ್ಲಿಸಿಕೊಟ್ಟ ವಿಶ್ವದ ಮೊದಲ ನಾಯಕ ಎಂಬ ಕೀರ್ತಿಗೆ ಧೋನಿ ಪಾತ್ರರಾಗಿದ್ದಾರೆ. ಅಂತೆಯೇ ವಿಕೆಟ್ ಕೀಪರ್ ಆಗಿ ಟಿ20 ಮಾದರಿ ಕ್ರಿಕೆಟ್ ನಲ್ಲಿ ಅತೀ ಹೆಚ್ಚು ಕ್ಯಾಚ್ ಗಳನ್ನು ಪಡೆದ ಆಟಗಾರ ಎಂಬ ದಾಖಲೆಯೂ ಧೋನಿ ಪಾಲಾಗಿದೆ.
ಇನ್ನು ಅತೀ ಹೆಚ್ಚು ಟಿ20 ಪಂದ್ಯಗಳನ್ನು ಗೆದ್ದ ನಾಯಕರ ಪಟ್ಟಿಯಲ್ಲಿ ಧೋನಿ ಮೊದಲಿಗರಾಗಿದ್ದು, ಎರಡನೇ ಸ್ಥಾನದಲ್ಲಿ ಭಾರತದ ಮತ್ತೋರ್ವ ಕ್ರಿಕೆಟಿಗ ಗೌತಮ್ ಗಂಭೀರ್ ಇದ್ದಾರೆ. ಗೌತಿ ಒಟ್ಟು 170 ಟಿ20 ಪಂದ್ಯಗಳಲ್ಲಿ ತಂಡವನ್ನು ಮುನ್ನಡೆಸಿದ್ದು, ಈ ಪೈಕಿ 98 ಪಂದ್ಯಗಳನ್ನು ಜಯಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.