ಕೀಪರ್‌ಗೆ ಕ್ಯಾಚ್ ನೀಡಿ ಹೋಗುತ್ತಿದ್ದ ರೋಹಿತ್ ಶರ್ಮಾರನ್ನು ಕೊಹ್ಲಿ ಕೂಗಿ ಕರೆದಿದ್ದೇಕೆ? ವಿಡಿಯೋ ವೈರಲ್!
ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧದ ಐದನೇ ಏಕದಿನ ಪಂದ್ಯದಲ್ಲಿ ವಿಚಿತ್ರ ಘಟನೆಯೊಂದು ನಡೆದಿದೆ. ಕೀಪರ್‌ಗೆ ಕ್ಯಾಚ್ ನೀಡಿ ಹೋಗುತ್ತಿದ್ದ ರೋಹಿತ್ ಶರ್ಮಾರನ್ನು ತಂಡದ ನಾಯಕ ವಿರಾಟ್ ಕೊಹ್ಲಿ...

Published On :
ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧದ ಐದನೇ ಏಕದಿನ ಪಂದ್ಯದಲ್ಲಿ ವಿಚಿತ್ರ ಘಟನೆಯೊಂದು ನಡೆದಿದೆ. ಕೀಪರ್‌ಗೆ ಕ್ಯಾಚ್ ನೀಡಿ ಹೋಗುತ್ತಿದ್ದ ರೋಹಿತ್ ಶರ್ಮಾರನ್ನು ತಂಡದ ನಾಯಕ ವಿರಾಟ್ ಕೊಹ್ಲಿ ಮರಳಿ ಬರುವಂತೆ ಕೂಗಿ ಕರೆದಿರುವ ವಿಡಿಯೋ ಇದೀಗ ವೈರಲ್ ಆಗಿದೆ.
ಕೇರಳದ ಗ್ರೀನ್ ಫೀಲ್ಡ್ ಕ್ರೀಡಾಂಗಣದಲ್ಲಿ ನಡೆದ ಸರಣಿ ನಿರ್ಣಾಯಕ ಪಂದ್ಯದಲ್ಲಿ ಟೀಂ ಇಂಡಿಯಾ 9 ವಿಕೆಟ್ ಗಳಿಂದ ಭರ್ಜರಿ ಜಯ ಗಳಿಸಿದೆ. ಈ ಪಂದ್ಯದಲ್ಲಿ ರೋಹಿತ್ ಶರ್ಮಾ ಅಜೇಯ 63 ರನ್ ಸಿಡಿಸಿ ತಂಡ ಗೆಲ್ಲಲು ಕಾರಣರಾಗಿದ್ದರು.
ಈ ಪಂದ್ಯದಲ್ಲಿ ರೋಹಿತ್ ಶರ್ಮಾ 18 ರನ್ ಗಳಿಸಿದ್ದಾಗ ವಿಂಡೀಸ್ ಆಟಗಾರ ಥಾಮಸ್ ಎಸೆತವನ್ನು ಶಾಟ್ ಹೊಡೆಯಲು ಮುಂದಾದರೂ ಆದರೆ ಚೆಂಡು ಬ್ಯಾಟ್ ಗೆ ಸ್ನಿಕ್ ಆಗಿ ಕೀಪರ್ ಕೈ ಸೇರಿತು. ಈ ವೇಳೆ ತಾನು ಔಟ್ ಆದೆ ಎಂದು ಭಾವಿಸಿ ರೋಹಿತ್ ಶರ್ಮಾ ಪೆವಿಲಿಯನ್ ಕಡೆ ಹೆಜ್ಜೆ ಹಾಕುತ್ತಿದ್ದರು. ಅಷ್ಟರಲ್ಲಿ ನಾನ್-ಸ್ಟ್ರೈಕ್ ನಲ್ಲಿದ್ದ ವಿರಾಟ್ ಕೊಹ್ಲಿ ಜೋರಾಗಿ ಕೂಗಿ ಕರೆದರು.
ಕೊಹ್ಲಿ ಕರೆದಾಗ ಹಿಂದಕ್ಕೆ ತಿರುಗಿ ನೋಡಿದಾಗ ಅಂಪೈರ್ ನೋ ಬಾಲ್ ಕೊಟ್ಟಿರುವುದು ಗೊತ್ತಾಗಿದೆ. ನಂತರ ಬಂದ ಆರ್ಭಟಿಸಿದ ರೋಹಿತ್ ಶರ್ಮಾ ಭರ್ಜರಿ ಅರ್ಧ ಶತಕ ಸಿಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್ಟೀಂ ಇಂಡಿಯಾTeam IndiaVirat Kohliವಿರಾಟ್ ಕೊಹ್ಲಿRohit Sharmaರೋಹಿತ್ ಶರ್ಮಾWest indiesವೆಸ್ಟ್ ಇಂಡೀಸ್5th ODIಐದನೇ ಏಕದಿನ ಪಂದ್ಯ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


