ಕ್ರಿಕೆಟ್

ಕ್ರಿಕೆಟ್: 'ರನ್ ಮೆಷಿನ್'ಗೆ 7ನೇ ಬಾರಿಗೆ ಸರಣಿ ಶ್ರೇಷ್ಠ ಪ್ರಶಸ್ತಿ, ಗಂಗೂಲಿ, ಯುವಿ ದಾಖಲೆ ಸರಿಗಟ್ಟಿದ ಕೊಹ್ಲಿ!

ಸರಣಿಯುದ್ದಕ್ಕೂ ಪ್ರವಾಸಿ ವೆಸ್ಟ್ ಇಂಡೀಸ್ ತಂಡವನ್ನು ಬ್ಯಾಟಿಂಗ್ ನಲ್ಲಿ ಕಾಡಿದ್ದ ಭಾರತದ ರನ್ ಮೆಷಿನ್ ವಿರಾಟ್ ಕೊಹ್ಲಿ ಮತ್ತೆ ಸರಣಿ ಶ್ರೇಷ್ಠ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಅಲ್ಲದೆ ಅಪರೂಪದ ದಾಖಲೆಯೊಂದನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ.

ಕ್ರಿಕೆಟ್: 'ರನ್ ಮೆಷಿನ್'ಗೆ 7ನೇ ಬಾರಿಗೆ ಸರಣಿ ಶ್ರೇಷ್ಠ ಪ್ರಶಸ್ತಿ, ಗಂಗೂಲಿ, ಯುವಿ ದಾಖಲೆ ಸರಿಗಟ್ಟಿದ ಕೊಹ್ಲಿ!
ಸಂಗ್ರಹ ಚಿತ್ರ
Published On :
ತಿರುವನಂತಪುರಂ: ಸರಣಿಯುದ್ದಕ್ಕೂ ಪ್ರವಾಸಿ ವೆಸ್ಟ್ ಇಂಡೀಸ್ ತಂಡವನ್ನು ಬ್ಯಾಟಿಂಗ್ ನಲ್ಲಿ ಕಾಡಿದ್ದ ಭಾರತದ ರನ್ ಮೆಷಿನ್ ವಿರಾಟ್ ಕೊಹ್ಲಿ ಮತ್ತೆ ಸರಣಿ ಶ್ರೇಷ್ಠ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಅಲ್ಲದೆ ಅಪರೂಪದ ದಾಖಲೆಯೊಂದನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ.
ವಿಂಡೀಸ್ ವಿರುದ್ಧ ಐದು ಏಕದಿನ ಪಂದ್ಯಗಳ ಪೈಕಿ ವಿರಾಟ್ ಕೊಹ್ಲಿ ಒಟ್ಟು 453 ರನ್ ಗಳನ್ನು ಪೇರಿಸಿದ್ದು, ಆ ಮೂಲಕ ಸರಣಿಯಲ್ಲಿ ವೈಯುಕ್ತಿಕ ಅತ್ಯಧಿಕ ರನ್ ಗಳಿಸಿದ ಆಟಗಾರ ಎಂಬ ಕೀರ್ತಿಗೆ ಕೊಹ್ಲಿ ಭಾಜನರಾದರು. ಅಲ್ಲದೆ ಸರಣಿ ಶ್ರೇಷ್ಠ ಪ್ರದರ್ಶನ ತೋರಿದ್ದರಿಂದ ಅವರಿಗೆ ಸರಣಿ ಶ್ರೇಷ್ಠ ಪ್ರಶಸ್ತಿ ಕೂಡ ಲಭಿಸಿತು. ಕೊಹ್ಲಿಗೆ ಇದು ವೃತ್ತಿ ಜೀವನದ 7ನೇ ಸರಣಿ ಶ್ರೇಷ್ಠ ಪ್ರಶಸ್ತಿಯಾಗಿದ್ದು, ಆ ಮೂಲಕ ಕೊಹ್ಲಿ ಆತೀ ಹೆಚ್ಚು ಬಾರಿ ಸರಣಿ ಶ್ರೇಷ್ಠ ಪ್ರಶಸ್ತಿ ಗೆದ್ದ ಆಟಗಾರರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.
ಈ ಅಪರೂಪದ ದಾಖಲೆಯ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಜಂಟಿ ನಾಲ್ಕನೇ ಸ್ಥಾನದಲ್ಲಿದ್ದು, ಇಷ್ಟೇ ಸರಣಿ ಶ್ರೇಷ್ಠ (7) ಪ್ರಶಸ್ತಿಗಳನ್ನು ಗೆದ್ದ ಆಟಗಾರರೊಂದಿಗೆ ನಾಲ್ಕನೇ ಸ್ಥಾನ ಹಂಚಿಕೊಂಡಿದ್ದಾರೆ. ಅಲ್ಲದೆ ಕೊಹ್ಲಿ ಭಾರತದ ಕ್ರಿಕೆಟ್ ದಂತಕಥೆ ಸೌರವ್ ಗಂಗೂಲಿ ಮತ್ತು ಯುವರಾಜ್ ಸಿಂಗ್ ಅವರ ದಾಖಲೆಯನ್ನೂ ಸರಿಗಟ್ಟಿದ್ದಾರೆ. ಯುವಿ ಮತ್ತು ಗಂಗೂಲಿ ಕೂಡ ತಮ್ಮ ವೃತ್ತಿ ಜೀವನದಲ್ಲಿ  ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದಿದ್ದಾರೆ. ಉಳಿದಂತೆ ನಾಲ್ಕನೇ ಸ್ಥಾನದಲ್ಲಿ ತಲಾ 7 ಬಾರಿ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದ ಆಟಗಾರರ ಪಟ್ಟಿಯಲ್ಲಿ ವಿಂಡೀಸ್ ದಂತಕಥೆ ವಿವಿಯನ್ ರಿಚರ್ಡ್ಸ್, ಆಫ್ರಿಕಾದ ಹಶೀಮ್ ಆಮ್ಲಾ, ವಿಂಡೀಸ್ ದೈತ್ಯ ಕ್ರಿಸ್ ಗೇಯ್ಲ್, ಆಸಿಸ್ ಮಾಜಿ ನಾಯಕ ರಿಕ್ಕಿ ಪಾಂಟಿಂಗ್ ಇದ್ದಾರೆ.
Story image
ಇನ್ನು ಪಟ್ಟಿಯಲ್ಲಿ ಅತೀ ಹೆಚ್ಚು ಬಾರಿ ಅಂದರೆ 15 ಬಾರಿ ಸರಣಿ ಶ್ರೇಷ್ಠ ಪ್ರಶಸ್ತಿ ಗೆದ್ದ ಭಾರತದ ಕ್ರಿಕೆಟ್ ದಂತಕಥೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅಗ್ರ ಸ್ಥಾನದಲ್ಲಿದ್ದು, ಶ್ರೀಲಂಕಾದ ಮಾಜಿ ಆಟಗಾರ ಸನತ್ ಜಯಸೂರ್ಯ 11 ಬಾರಿ ಸರಣಿ ಶ್ರೇಷ್ಠ ಪ್ರಶಸ್ತಿ ಗೆದ್ದು 2 ಸ್ಥಾನದಲ್ಲಿದ್ದಾರೆ. 9 ಬಾರಿ ಈ ಪ್ರಶಸ್ತಿ ಗೆದ್ದ ಆಫ್ರಿಕಾದ ಶಾನ್ ಪೊಲಾಕ್ 3ನೇ ಸ್ಥಾನದಲ್ಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.