ಟಿ20 ಕ್ರಿಕೆಟ್‌ನಲ್ಲಿ ಅತೀ ಹೆಚ್ಚು ಶತಕ ಸಿಡಿಸಿ ವಿಶ್ವ ದಾಖಲೆ ಬರೆದ ರೋ'ಹಿಟ್', ಧೂಳಿಪಟವಾದ ದಾಖಲೆಗಷ್ಟು?
ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ರೋಹಿತ್ ಶರ್ಮಾ ಏಕದಿನ ಕ್ರಿಕೆಟ್ ಬಳಿಕ ಇದೀಗ ಟಿ20 ಕ್ರಿಕೆಟ್ ನಲ್ಲೂ ಅತೀ ಹೆಚ್ಚು ಶತಕ ಸಿಡಿಸುವ ಮೂಲಕ ವಿಶ್ವ ದಾಖಲೆಯೊಂದನ್ನು ಬರೆದಿದ್ದಾರೆ...

Published On :
ಲಖನೌ: ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ರೋಹಿತ್ ಶರ್ಮಾ ಏಕದಿನ ಕ್ರಿಕೆಟ್ ಬಳಿಕ ಇದೀಗ ಟಿ20 ಕ್ರಿಕೆಟ್ ನಲ್ಲೂ ಅತೀ ಹೆಚ್ಚು ಶತಕ ಸಿಡಿಸುವ ಮೂಲಕ ವಿಶ್ವ ದಾಖಲೆಯೊಂದನ್ನು ಬರೆದಿದ್ದಾರೆ.
ಪ್ರವಾಸಿ ವೆಸ್ಟ್ ಇಂಡೀಸ್ ತಂಡದ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಅಜೇಯ 111 ರನ್ ಗಳಿಸುವ ಮೂಲಕ ರೋಹಿತ್ ಶರ್ಮಾ ನಾಲ್ಕನೇ ಶತಕ ಸಿಡಿಸಿದರು. ಆ ಮೂಲಕ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ ನಲ್ಲಿ ಅತೀ ಹೆಚ್ಚು ಶತಕ ಸಿಡಿಸಿದ ಏಕೈಕ ಬ್ಯಾಟ್ಸ್ ಮನ್ ಎಂಬ ಖ್ಯಾತಿಗೆ ಭಾಜನರಾಗಿದ್ದಾರೆ.
ರೋಹಿತ್ ಶರ್ಮಾ ಟಿ20 ಕ್ರಿಕೆಟ್ ನಲ್ಲಿ ಮೊದಲ ಶತಕ 2015ರಲ್ಲಿ ದಕ್ಷಿಣ ಆಫ್ರಿಕಾದ ವಿರುದ್ಧ ಸಿಡಿಸಿದ್ದರು. ಈ ಪಂದ್ಯದಲ್ಲಿ ರೋಹಿತ್ 106 ರನ್ ಗಳಿಸಿ ಔಟಾಗಿದ್ದರು. ನಂತರ 2017ರಲ್ಲಿ ಇಂದೋರ್ ನಲ್ಲಿ ಶ್ರೀಲಂಕಾ ವಿರುದ್ಧ ನಡೆದ ಟಿ20 ಪಂದ್ಯದಲ್ಲಿ 118 ರನ್ ಗಳಿಸಿ ಎರಡನೇ ಶತಕ ಸಿಡಿಸಿದ್ದರು. ಇನ್ನು ಮೂರನೇ ಶತಕ ಇಂಗ್ಲೆಂಡ್ ವಿರುದ್ಧ 2018ರಲ್ಲಿ ಬ್ರಿಸ್ಟೋಲ್ ವಿರುದ್ಧ ಸಿಡಿಸಿದ್ದರು. ಈ ಪಂದ್ಯದಲ್ಲಿ ರೋಹಿತ್ ಅಜೇಯ 100 ರನ್ ಗಳಿಸಿದ್ದರು.
ಟಿ20 ಕ್ರಿಕೆಟ್ ನಲ್ಲಿ ನ್ಯೂಜಿಲೆಂಡ್ ತಂಡದ ಕೊಲಿನ್ ಮನ್ರೋ 3 ಶತಕ ಸಿಡಿಸಿ ಅಗ್ರಸ್ಥಾನದಲ್ಲಿದ್ದರು. ಇದೀಗ ರೋಹಿತ್ ಶರ್ಮಾ ನಾಲ್ಕನೇ ಶತಕ ಸಿಡಿಸುವ ಮೂಲಕ ಅಗ್ರಸ್ಥಾನಕ್ಕೇರಿದ್ದಾರೆ.
ಏಕದಿನ ಕ್ರಿಕೆಟ್ ನಲ್ಲಿ ರೋಹಿತ್ ಶರ್ಮಾ 19 ಬಾರಿಗೆ 50ಕ್ಕೂ ಹೆಚ್ಚು ರನ್ ಪೇರಿಸಿದ ಅಗ್ರ ಆಟಗಾರನಾಗಿದ್ದು ಆ ಮೂಲಕ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ದಾಖಲೆಯನ್ನು ಮುರಿದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಟೀಂ ಇಂಡಿಯಾTeam IndiaRohit Sharmaರೋಹಿತ್ ಶರ್ಮಾWest indiesವೆಸ್ಟ್ ಇಂಡೀಸ್Cricket Offbeatಕ್ರಿಕೆಟ್ ಸ್ವಾರಸ್ಯ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


