ಬೌಲರ್ ಹಫೀಜ್ ಬೌಲಿಂಗ್ ಶೈಲಿಯನ್ನು ದೂಷಿಸಿದ ಟೇಲರ್-ರೊಚ್ಚಿಗೆದ್ದ ಪಾಕ್ ನಾಯಕ, ವಿಡಿಯೋ ವೈರಲ್!
ನ್ಯೂಜಿಲೆಂಡ್ ಹಾಗೂ ಪಾಕಿಸ್ತಾನ ನಡುವಿನ ಮೊದಲ ಏಕದಿನ ಪಂದ್ಯ ವಿವಾದಕ್ಕೆ ಕಾರಣವಾಗಿದೆ. ಪಾಕಿಸ್ತಾನದ ಆಲ್ ರೌಂಡರ್ ಮೊಹಮ್ಮದ್ ಹಫೀಜ್ ಬೌಲಿಂಗ್ ಶೈಲಿಯನ್ನು ರಾಸ್ ಟೇಲರ್...

Published On :
ಅಬುದಾಬಿ: ನ್ಯೂಜಿಲೆಂಡ್ ಹಾಗೂ ಪಾಕಿಸ್ತಾನ ನಡುವಿನ ಮೊದಲ ಏಕದಿನ ಪಂದ್ಯ ವಿವಾದಕ್ಕೆ ಕಾರಣವಾಗಿದೆ. ಪಾಕಿಸ್ತಾನದ ಆಲ್ ರೌಂಡರ್ ಮೊಹಮ್ಮದ್ ಹಫೀಜ್ ಬೌಲಿಂಗ್ ಶೈಲಿಯನ್ನು ರಾಸ್ ಟೇಲರ್ ಬಹಿರಂಗವಾಗಿ ಪ್ರಶ್ನಿಸಿದ್ದಾರೆ.
ಮೊಹಮ್ಮದ್ ಹಫೀಜ್ ಮೊದಲ ಓವರ್ ಮಾಡುತ್ತಿದ್ದಂತೆ ಕ್ರೀಸ್ ನಲ್ಲಿದ್ದ ರಾಸ್ ಟೇಲರ್ ಪ್ರಶ್ನಿಸಿದ್ದಾರೆ. ಹಫೀಜ್ ಬೌಲಿಂಗ್ ಶೈಲಿ ಕಾನೂನು ಬಾಹಿರ ಎಂದು ಅಂಪೈರ್ ಗೆ ಸೂಚಿಸಿದ್ದಾರೆ. ಟೇಲರ್ ದೂಷಿಸುತ್ತಿದ್ದಂತೆ ರೊಚ್ಚಿಗೆದ್ದ ಪಾಕ್ ನಾಯಕ ಸರ್ಫಾರಾಜ್ ಅಹಮ್ಮದ್ ಅಂಪೈರ್ ಜತೆ ವಾಗ್ವಾದ ನಡೆಸಿದ್ದಾರೆ.
ಹಫೀಜ್ ಅದಾಗಲೇ ಆಕ್ಷೇಪಣ ಬೌಲಿಂಗ್ ಶೈಲಿಯಿಂದ ಹಲವು ಭಾರಿ ನಿಷೇಧಕ್ಕೊಳಗಾಗಿದ್ದಾರೆ. ನಿಷೇಧದ ಬಳಿಕ ತಂಡಕ್ಕೆ ಕಮ್ ಬ್ಯಾಕ್ ಮಾಡಿದ ಹಫೀಜ್ ಮೇಲೆ ರಾಸ್ ಟೇಲರ್ ತಿರುಗಿ ಬಿದ್ದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್Pakistanಪಾಕಿಸ್ತಾನMohammad HafeezRoss Taylorರಾಸ್ ಟೇಲರ್Sarfraz Ahmedಮೊಹಮ್ಮದ್ ಹಫೀಜ್ಸರ್ಫರಾಜ್ ಅಹ್ಮದ್Bowling Actionಬೌಲಿಂಗ್ ಶೈಲಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


