ವಿಂಡೀಸ್ ವಿರುದ್ಧ ಅಂತಿಮ ಟಿ20 ಪಂದ್ಯ: ಉಮೇಶ್, ಕುಲ್ದೀಪ್ ಯಾದವ್, ಬುಮ್ರಾಗೆ ವಿಶ್ರಾಂತಿ
ಆಸಿಸ್ ಪ್ರವಾಸಕ್ಕೆ ದಿನಗಣನೆ ಆರಂಭವಾಗಿರುವಂತೆಯೇ ವಿಂಡೀಸ್ ವಿರುದ್ಧದ ಅಂತಿಮ ಟಿ20 ಪಂದ್ಯಕ್ಕೆ ತಂಡ ಪ್ರಕಟಿಸಲಾಗಿದೆ.

Published On :
ಚೆನ್ನೈ: ಆಸಿಸ್ ಪ್ರವಾಸಕ್ಕೆ ದಿನಗಣನೆ ಆರಂಭವಾಗಿರುವಂತೆಯೇ ವಿಂಡೀಸ್ ವಿರುದ್ಧದ ಅಂತಿಮ ಟಿ20 ಪಂದ್ಯಕ್ಕೆ ತಂಡ ಪ್ರಕಟಿಸಲಾಗಿದೆ.
ವೇಗಿ ಉಮೇಶ್ ಯಾದವ್, ಜಸ್ ಪ್ರೀತ್ ಬುಮ್ರಾ ಮತ್ತು ಕುಲದೀಪ್ ಯಾದವ್ ಅವರಿಗೆ ವಿಶ್ರಾಂತಿ ನೀಡಲಾಗಿದ್ದು, ಸಿದ್ಧಾರ್ಥ್ ಕೌಲ್ ಗೆ ಸ್ಥಾನ ನೀಡಲಾಗಿದೆ. ಬಿಸಿಸಿಐ ಹಂಗಾಮಿ ಕಾರ್ಯದರ್ಶಿ ಅಮಿತಾಬ್ ಚೌದರಿ ಅವರು ಪ್ರಕಟಣೆ ಬಿಡುಗಡೆ ಮಾಡಿದ್ದು, ತಂಡದ ಆಡಳಿತ ಮಂಡಳಿ ಮತ್ತು ಆಯ್ಕೆ ಸಮಿತಿ ಮೂರನೇ ಟಿ20 ಪಂದ್ಯಕ್ಕೆ ತಂಡ ಪ್ರಕಟಿಸಲಾಗಿದೆ.
3ನೇ ಟಿ20 ಪಂದ್ಯದಿಂದ ಜಸ್ ಪ್ರೀತ್ ಬುಮ್ರಾ, ಉಮೇಶ್ ಯಾದವ್ ಮತ್ತು ಕುಲದೀಪ್ ಯಾದವ್ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಈ ಬಗ್ಗೆ ಆಲ್ ಇಂಡಿಯಾ ಹಿರಿಯ ಆಯ್ಕೆ ಸಮಿತಿ ನಿರ್ಧಾರ ಕೈಗೊಂಡಿದ್ದು, ಅಂತಿಮ ಪಂದ್ಯಕ್ಕೆ ಸಿದ್ಧಾರ್ಥ್ ಕೌಲ್ ರನ್ನು ಆಯ್ಕೆ ಮಾಡಲಾಗಿದೆ.
ಈಗಾಗಲೇ ಟೀಂ ಇಂಡಿಯಾ 3 ಪಂದ್ಯಗಳ ಟಿ20 ಸರಣಿಯನ್ನು 2-0 ಅಂತರದಲ್ಲಿ ವಶಪಡಿಸಿಕೊಂಡಿದೆ. ಇನ್ನು ನವೆಂಬರ್ 21ರಿಂದ ಭಾರತ ತಂಡದ ಆಸ್ಟ್ರೇಲಿಯಾ ಪ್ರವಾಸ ಆರಂಭವಾಗಲಿದೆ.
ಮೂರನೇ ಟಿ20 ಪಂದ್ಯಕ್ಕಾಗಿ ಭಾರತ ತಂಡ ಇಂತಿದೆ
ರೋಹಿತ್ ಶರ್ಮಾ (ನಾಯಕ), ಶಿಖರ್ ಧವನ್, ಕೆಎಲ್ ರಾಹುಲ್, ದಿನೇಶ್ ಕಾರ್ತಿಕ್, ಮನೀಶ್ ಪಾಂಡೆ, ಶ್ರೇಯಸ್ ಅಯ್ಯರ್, ರಿಷಬ್ ಪಂತ್ (ವಿಕೆಟ್ ಕೀಪರ್), ಕೃಣಾಲ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಯುಜುವೇಂದ್ರ ಚಾಹಲ್, ಭುವನೇಶ್ವರ ಕುಮಾರ್, ಖಲೀಲ್ ಅಹ್ಮದ್, ಶಾಹಬಾಜ್ ನದೀಮ್, ಸಿದ್ಧಾರ್ಥ್ ಕೌಲ್ .
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


