ಕ್ರಿಕೆಟ್

ಹರ್ಮನ್‌ಪ್ರೀತ್ 2ನೇ ವೇಗದ ಶತಕ: ನ್ಯೂಜಿಲ್ಯಾಂಡ್ ವಿರುದ್ಧ ಟೀಂ ಇಂಡಿಯಾಗೆ ಭರ್ಜರಿ ಜಯ

ಐಸಿಸಿ ಮಹಿಳಾ ವಿಶ್ವಕಪ್ ಟಿ20 ಉದ್ಘಾಟನಾ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ಟೀಂ ಇಂಡಿಯಾ ಮಹಿಳಾ ತಂಡ ಭರ್ಜರಿ ಗೆಲುವು ಸಾಧಿಸುವ ಮೂಲಕ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ...

ಹರ್ಮನ್‌ಪ್ರೀತ್ 2ನೇ ವೇಗದ ಶತಕ: ನ್ಯೂಜಿಲ್ಯಾಂಡ್ ವಿರುದ್ಧ ಟೀಂ ಇಂಡಿಯಾಗೆ ಭರ್ಜರಿ ಜಯ
ಟೀಂ ಇಂಡಿಯಾ ಮಹಿಳಾ ತಂಡ
Published On :
ಐಸಿಸಿ ಮಹಿಳಾ ವಿಶ್ವಕಪ್ ಟಿ20 ಉದ್ಘಾಟನಾ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ಟೀಂ ಇಂಡಿಯಾ ಮಹಿಳಾ ತಂಡ ಭರ್ಜರಿ ಗೆಲುವು ಸಾಧಿಸುವ ಮೂಲಕ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ. 
ಗಯಾನಾದ ಪ್ರಾವಿಡೆನ್ಸ್ ಕ್ರಿಕೆಟ್ ಮೈದಾನದಲ್ಲಿ ನಡೆದ ಉದ್ಘಾಟನಾ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಮಹಿಳಾ ತಂಡದ ಪರ ಹರ್ಮನ್‌ಪ್ರೀತ್ ಕೌರ್(103) ವೇಗದ ಎರಡನೇ ಶತಕವನ್ನು ಸಿಡಿಸಿದರು. ಪರಿಣಾಮ ಟೀಂ ಇಂಡಿಯಾ ನಿಗದಿತ ಓವರ್ ನಲ್ಲಿ 5 ವಿಕೆಟ್ ನಷ್ಟಕ್ಕೆ 194 ರನ್ ಪೇರಿಸಿತು.
ಭಾರತ ನೀಡಿದ 195 ರನ್ ಗಳ ಗುರಿ ಬೆನ್ನಟ್ಟಿದ ನ್ಯೂಜಿಲೆಂಡ್ ತಂಡ ನಿಗದಿತ ಓವರ್ ನಲ್ಲಿ 9 ವಿಕೆಟ್ ನಷ್ಟಕ್ಕೆ 160 ರನ್ ಪೇರಿಸಿ 34 ರನ್ ಗಳಿಂದ ಸೋಲು ಕಂಡಿತು. 
ಟೀಂ ಇಂಡಿಯಾ ಪರ ಬೌಲಿಂಗ್ ನಲ್ಲಿ ಹೇಮಲತಾ ಹಾಗೂ ಪೂನಂ ಯಾದವ್ ತಲಾ 3 ವಿಕೆಟ್ ಪಡೆದಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.