ಧವನ್ ಭರ್ಜರಿ ಬ್ಯಾಟಿಂಗ್, ಟಿ-20 ಸರಣಿ ಕ್ಲೀನ್ ಸ್ವೀಪ್ ಮಾಡಿದ ಭಾರತ
ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಹಾಗೂ ಅಂತಿಮ ಟಿ-20 ಪಂದ್ಯದಲ್ಲಿ ಭಾರತ ಆರು ವಿಕೆಟ್ಗಳ ಭರ್ಜರಿ ಜಯ...

Published On :
ಚೆನ್ನೈ: ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಹಾಗೂ ಅಂತಿಮ ಟಿ-20 ಪಂದ್ಯದಲ್ಲಿ ಭಾರತ ಆರು ವಿಕೆಟ್ಗಳ ಭರ್ಜರಿ ಜಯ ಗಳಿಸುವ ಮೂಲಕ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದೆ.
ಇಂದು ಎಂ.ಎ.ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಮೂರನೇ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ವಿಂಡೀಸ್, 20 ಓವರುಗಳಲ್ಲಿ ಮೂರು ವಿಕೆಟ್ ನಷ್ಟಕ್ಕೆ 181 ರನ್ ಗಳಿಸಿತು.
ವೆಸ್ಟ್ ಇಂಡೀಸ್ ನೀಡಿದ್ದ 182 ರನ್ ಗಳ ಗುರಿ ಬೆನ್ನತ್ತಿದ ಟೀಂ ಇಂಡಿಯಾ, ಶಿಖರ್ ಧವನ್ (92) ಮತ್ತು ರಿಷಭ್ ಪಂತ್ (58) ಅವರ ಭರ್ಜರಿ ಅರ್ಧಶತಕಗಳ ನೆರವಿನಿಂದ 20 ಓವರ್ಗಳಲ್ಲಿ ಕೇವಲ 4 ವಿಕೆಟ್ ಕಳೆದುಕೊಂಡು 182 ರನ್ ಗಳಿಸಿ ಗೆಲುವಿನ ದಡ ಸೇರಿತು. ಈ ಮೂಲಕ ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯಲ್ಲಿ 3-0 ಅಂತರದಿಂದ ಗೆಲುವು ಸಾಧಿಸಿತು.
ಆರಂಭಿಕ ಆಟಗಾರ ರೋಹಿತ್ ಶರ್ಮಾ ಕೇವಲ 4 ರನ್ ಗಳಿಸಿ ಔಟಾದರು. ಕೆ.ಎಲ್. ರಾಹುಲ್ (17) ರನ್ ಗಳಿಸಿದರು. ನಂತರ ಜತೆಯಾದ ಧವನ್ ಮತ್ತು ಪಂತ್ ಜೋಡಿ ಮೂರನೇ ವಿಕೆಟ್ಗೆ 130 ರನ್ ಕಲೆ ಹಾಕಿ ತಂಡವನ್ನು ಗೆಲುವಿನ ಸನಿಹಕ್ಕೆ ಕೊಂಡೊಯ್ದಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


