ಟಿ20 2ನೇ ವೇಗದ ಶತಕ: ಹೊಟ್ಟೆ ನೋವಿನ ಸಿಟ್ಟನ್ನು ಶತಕ ಸಿಡಿಸಿ ತೀರಿಸಿಕೊಂಡೆ; ಹರ್ಮನ್ ಪ್ರೀತ್
ಐಸಿಸಿ ಮಹಿಳಾ ಟಿ20 ವಿಶ್ವಕಪ್ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ 34 ರನ್ ಗಳಿಂದ ಟೀಂ ಇಂಡಿಯಾ ಭರ್ಜರಿ ಜಯ ಗಳಿಸಿತ್ತು. ಈ ಪಂದ್ಯ ಗೆಲುವಿನಲ್ಲಿ ಪ್ರಮುಖ...

Published On :
ಐಸಿಸಿ ಮಹಿಳಾ ಟಿ20 ವಿಶ್ವಕಪ್ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ 34 ರನ್ ಗಳಿಂದ ಟೀಂ ಇಂಡಿಯಾ ಭರ್ಜರಿ ಜಯ ಗಳಿಸಿತ್ತು. ಈ ಪಂದ್ಯ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದ ಹರ್ಮನ್ ಪ್ರೀತ್ ಕೌರ್ ಅವರು ತಮ್ಮ ವೇಗದ ಶತಕ ಸಿಡಿಸಿದ ಕುರಿತು ಹೇಳಿಕೊಂಡಿದ್ದಾರೆ.
ಟೀಂ ಇಂಡಿಯಾ ಮಹಿಳಾ ತಂಡದ ನಾಯಕಿಯಾಗಿರುವ ಹರ್ಮನ್ ಪ್ರೀತ್ ಕೌರ್ ಅವರು ನನಗೆ ಹುಷಾರಿರಲಿಲ್ಲ. ಪಂದ್ಯಕ್ಕೂ ಮುನ್ನ ದಿನವೇ ಸ್ವಲ್ಪ ಬೆನ್ನು ಹಾಗೂ ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ಇನ್ನು ಮೈದಾನಕ್ಕೆ ಇಳಿಯುವಾಗಲೂ ಅಷ್ಟೊಂದು ಆರೋಗ್ಯವಾಗಿರಲಿಲ್ಲ. ಅದರಲ್ಲೂ ಪಂದ್ಯ ನಡೆಯುತ್ತಿರುವಾಗ ಹೊಟ್ಟೆ ನೋವು ಜೋರಾಯಿತು. ಹೊಟ್ಟೆ ನೋವಿನ ವಿರುದ್ಧ ಹೋರಾಡಲು ಮನಬಂದಂತೆ ಆಡಿದೆ. ಮೈದಾನದಲ್ಲಿ ಬೌಂಡರಿ, ಸಿಕ್ಸ್ ಗಳನ್ನು ಚಚ್ಚಿದೆ ಎಂದು ಹೇಳಿದ್ದಾರೆ.
ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಟೀಂ ಇಂಡಿಯಾ 194 ರನ್ ಕಲೆಹಾಕಿತ್ತು. ಈ ಪಂದ್ಯದಲ್ಲಿ ಹರ್ಮನ್ ಪ್ರೀತ್ ಕೌರ್ ಕೇವಲ 51 ಎಸೆತಗಳಲ್ಲಿ 7 ಬೌಂಡರಿ ಹಾಗೂ 8 ಸಿಕ್ಸ್ ಸಿಡಿಸಿ 103 ರನ್ ಬಾರಿಸಿದ್ದರು.
ಇನ್ನು ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ ನಲ್ಲಿ ವೇಗದ ಶತಕ ಸಿಡಿಸಿದ ಸಾಧನೆ ಮಾಡಿದ ಮೊದಲ ಭಾರತೀಯ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಕೌರ್ ಪಾತ್ರರಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್ಟೀಂ ಇಂಡಿಯಾTeam IndiaNew Zealandನ್ಯೂಜಿಲೆಂಡ್Harmanpreet Kaurಹರ್ಮನ್ ಪ್ರೀತ್ ಕೌರ್ICC Women WT20ಐಸಿಸಿ ಮಹಿಳಾ ವಿಶ್ವಕಪ್ ಟಿ20
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


