ಮಾನವೀಯತೆ ಮೆರೆದ ಟೀಂ ಇಂಡಿಯಾ ನಾಯಕಿಗೆ ಅಭಿನಂದನೆಗಳ ಮಹಾಪೂರ
ಐಸಿಸಿ ಮಹಿಳಾ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತದ ಜೈತ್ರ ಯಾತ್ರೆ ಮುಂದುವರೆದಿರುವಂತೆಯೇ ಇತ್ತ ತಂಡದ ನಾಯಕಿ ಹರ್ಮನ್ ಪ್ರೀತ್ ಕೌರ್ ತಮ್ಮ ಮಾನವೀಯತೆಯ ಮೂಲಕ ಇದೀಗ ಅಭಿಮಾನಿಗಳ ಹೃದಯ ಗೆದ್ದಿದ್ದಾರೆ.

Published On :
ಗಯಾನಾ: ಐಸಿಸಿ ಮಹಿಳಾ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತದ ಜೈತ್ರ ಯಾತ್ರೆ ಮುಂದುವರೆದಿರುವಂತೆಯೇ ಇತ್ತ ತಂಡದ ನಾಯಕಿ ಹರ್ಮನ್ ಪ್ರೀತ್ ಕೌರ್ ತಮ್ಮ ಮಾನವೀಯತೆಯ ಮೂಲಕ ಇದೀಗ ಅಭಿಮಾನಿಗಳ ಹೃದಯ ಗೆದ್ದಿದ್ದಾರೆ.
ಭಾರತದ ಟ್ವೆಂಟಿ-20 ತಂಡದ ನಾಯಕಿ ಹರ್ಮನ್ಪ್ರೀತ್ ಕೌರ್ ಪಾಕಿಸ್ತಾನ ವಿರುದ್ಧ ವಿಶ್ವಕಪ್ ಪಂದ್ಯದಲ್ಲಿ ಮಾನವೀಯತೆ ಮೆರೆಯುವ ಮೂಲಕ ಎಲ್ಲರ ಹೃದಯ ಗೆದ್ದಿದ್ದಾರೆ. ಭಾರತ-ಪಾಕ್ ನಡುವೆ ಭಾನುವಾರ ಪಂದ್ಯದ ವೇಳೆ ಮೈದಾನದಲ್ಲೇ ಅಸ್ವಸ್ಥಗೊಂಡಿದ್ದ ಬಾಲಕಿಯನ್ನು ಹರ್ಮನ್ ಪ್ರೀತ್ ಕೌರ್ ಎತ್ತಿಕೊಂಡು ಸಿಬ್ಬಂದಿಗೆ ಒಪ್ಪಿಸಿದ್ದಾರೆ. ಈ ಘಟನೆ ಅಲ್ಲಿ ನೆರೆದಿದ್ದ ಭಾರತೀಯ ಅಭಿಮಾನಿಗಳನ್ನು ಮಾತ್ರವಲ್ಲ ಬದಲಿಗೆ ಪಾಕಿಸ್ತಾನದ ಅಭಿಮಾನಿಗಳ ಹೃಗದಯವನ್ನೂ ಗೆದ್ದಿದೆ.
ಆಗಿದ್ದೇನು?
ಪಂದ್ಯ ಆರಂಭಕ್ಕೆ ಮೊದಲು ಉಭಯ ದೇಶಗಳ ರಾಷ್ಟ್ರಗೀತೆ ಮೊಳಗಿಸಲಾಯಿತು. ರಾಷ್ಟ್ರಗೀತೆ ಮೊಳಗಿದ ಬಳಿಕ ಭಾರತದ ಆಟಗಾರ್ತಿ ಕೌರ್ ಬಳಿ ಬಂದ ಪುಟಾಣಿ ಬಾಲಕಿಯೊಬ್ಬಳು ತನಗೆ ನಡೆಯಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದಳು. ಆಗ ಕೌರ್ ತನ್ನ ತೋಳಿನಿಂದ ಬಾಲಕಿಯನ್ನು ಎತ್ತಿಕೊಂಡು ಹೋಗಿ ಅಧಿಕಾರಿಗಳ ಕೈಗೆ ಒಪ್ಪಿಸಿದರು. ಮೈದಾನದಲ್ಲಿ ಬಾಲಕಿಯನ್ನು ಕೌರ್ ಎತ್ತಿಕೊಂಡು ಹೋಗುವ ವಿಡಿಯೋ ಇದೀಗ ವೈರಲ್ ಆಗಿದೆ. ಕೌರ್ ಮಾನವೀಯತೆಗೆ ಶ್ಲಾಘನೆ ವ್ಯಕ್ತವಾಗಿದೆ. ಹರ್ಮನ್ ಪ್ರೀತ್ ಕಾರ್ಯಕ್ಕೆ ಅಭಿಮಾನಿಗಳು ಮೈದಾನದಲ್ಲೇ ಚಪ್ಪಾಳೆ ತಟ್ಟುವ ಮೂಲಕ ಬೆಂಬಲ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್indiaಭಾರತಗಯಾನಾHarmanpreet Kaurಹರ್ಮನ್ ಪ್ರೀತ್ ಕೌರ್GuyanaICC Womens T20 World Cup 2018ಐಸಿಸಿ ಮಹಿಳಾ ಟಿ20 ವಿಶ್ವಕಪ್ 2018
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


