ವಿಶ್ವಕಪ್‌ವರೆಗೂ ಬದಲಾವಣೆ ಇಲ್ಲ ಎಂದ ಶಾಸ್ತ್ರಿ; ನಾನು ಕೇಳಿದ್ದಕ್ಕೆಲ್ಲಾ 'ಯಸ್' ಅಂತಾರೆ: ರವಿಶಾಸ್ತ್ರಿ ಕಾಲೆಳೆದ ಕೊಹ್ಲಿ!
ವಾಸಿ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್, ಏಕದಿನ ಹಾಗೂ ಟಿ20 ಸರಣಿ ಗೆಲುವಿನ ಖುಷಿಯಲ್ಲಿರುವ ತಂಡದ ಕೋಚ್ ರವಿಶಾಸ್ತ್ರಿ ಮುಂದಿನ ವಿಶ್ವಕಪ್‌ವರೆಗೂ ತಂಡದಲ್ಲಿ ಯಾವುದೇ ಬದಲಾವಣೆ...

Published On :
ಮುಂಬೈ: ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್, ಏಕದಿನ ಹಾಗೂ ಟಿ20 ಸರಣಿ ಗೆಲುವಿನ ಖುಷಿಯಲ್ಲಿರುವ ತಂಡದ ಕೋಚ್ ರವಿಶಾಸ್ತ್ರಿ ಮುಂದಿನ ವಿಶ್ವಕಪ್‌ವರೆಗೂ ತಂಡದಲ್ಲಿ ಯಾವುದೇ ಬದಲಾವಣೆ ಮಾಡುವುದಿಲ್ಲ ಎಂದು ಹೇಳಿದ್ದಾರೆ.
ಕೋಚ್ ರವಿಶಾಸ್ತ್ರಿ ಹಾಗೂ ತಂಡದ ನಾಯಕ ವಿರಾಟ್ ಕೊಹ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಇಂಗ್ಲೆಂಡ್ ಪ್ರವಾಸದಲ್ಲಿ ಸಾಕಷ್ಟು ಬದಲಾವಣೆ ಮಾಡಿ ಸರಣಿ ಸೋಲಿನ ಕಹಿ ಅನುಭವದ ನಂತರ ಎಚ್ಚೇತ್ತಿರುವ ರವಿಶಾಸ್ತ್ರಿ 2019ರ ವಿಶ್ವಕಪ್‌ವರೆಗೂ ತಂಡದಲ್ಲಿ ಯಾವುದೇ ರೀತಿಯ ಬದಲಾವಣೆ ಮಾಡುವುದಿಲ್ಲ ಎಂದು ಹೇಳಿದ್ದಾರೆ.
ಇದೇ ವೇಳೆ ಮಾತನಾಡಿದ ವಿರಾಟ್ ಕೊಹ್ಲಿ ಅವರು, ತಂಡದ ಪ್ರಧಾನ ಕೋಚ್ ಆಗಿರುವ ರವಿಶಾಸ್ತ್ರಿ ಅವರು ನಾನು ಕೇಳಿದ್ದಕ್ಕೆ ಯಾವುದಕ್ಕೆ ಇಲ್ಲ ಎಂದು ಹೇಳುವುದಿಲ್ಲ. ಪ್ರತಿಯೊಂದಕ್ಕೂ ಯಸ್ ಮಾಡು ಎಂದು ಹೇಳುತ್ತಾರೆ. ಇದು ತಂಡದ ನಾಯಕನಾಗಿ ನನಗೆ ಕೆಲವೊಮ್ಮೆ ವಿಲಕ್ಷಣ ಎಂದೆನಿಸುತ್ತದೆ ಎಂದು ಹೇಳಿದ್ದಾರೆ.
ಭಾರತೀಯ ಕ್ರಿಕೆಟ್ ನಲ್ಲಿ ನಾನು ಕೇಳಿದ ಅತ್ಯಂತ ವಿಲಕ್ಷಣ ಸಂಗತಿ ಇದು. ಪ್ರಾಮಾಣಿಕವಾಗಿ ಹೇಳಬೇಕೆಂದರೆ ಯಸ್ ಅನ್ನುವ ಪದಕ್ಕಿಂತ ನೋ ಅನ್ನುವ ಪದವನ್ನೇ ನಾನು ಕೇಳಿಲ್ಲ. ನನ್ನ ಅಭಿಪ್ರಾಯಗಳಿಗೆ ಸೂಕ್ತ ಉತ್ತರವನ್ನು ನೀಡುತ್ತಾರೆ. ಹೀಗಾಗಿಯೇ ನಾನು ಈ ಹಿಂದೆ ತಂಡದಲ್ಲಿ ಹಲವು ಬದಲಾವಣೆಗಳನ್ನು ಮಾಡಿದ್ದೆ ಎಂದು ಕೊಹ್ಲಿ ಹೇಳಿದ್ದಾರೆ.
ನವೆಂಬರ್ 21ರಿಂದ ಆಸ್ಟ್ರೇಲಿಯಾದಲ್ಲಿ ಟೀಂ ಇಂಡಿಯಾ ಟಿ20, ಟೆಸ್ಟ್ ಹಾಗೂ ಏಕದಿನ ಸರಣಿಗಳನ್ನು ಆಡಲಿದ್ದು ಈ ಸಂಬಂಧ ಆಸ್ಟ್ರೇಲಿಯಾ ಪ್ರವಾಸಕ್ಕೂ ಮುನ್ನ ಸುದ್ದಿಗೋಷ್ಠಿ ನಡೆಸಿ ರವಿಶಾಸ್ತ್ರಿ ಮತ್ತು ಕೊಹ್ಲಿ ಮಾತನಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್ಆಸ್ಟ್ರೇಲಿಯಾಟೀಂ ಇಂಡಿಯಾAustraliaTeam IndiaVirat Kohliವಿರಾಟ್ ಕೊಹ್ಲಿRavi shastriರವಿಶಾಸ್ತ್ರಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


