ಕ್ರಿಕೆಟ್

ಲೈಂಗಿಕ ಕಿರುಕುಳ ಪ್ರಕರಣ: ಬಿಸಿಸಿಐ ಸಿಇಒ ರಾಹುಲ್‌ ಜೊಹ್ರಿಗೆ ಕ್ಲೀನ್ ಚಿಟ್

ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿದ್ದ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಸಿಇಒ ರಾಹುಲ್‌ ಜೊಹ್ರಿ ಅವರಿಗೆ....

ಲೈಂಗಿಕ ಕಿರುಕುಳ ಪ್ರಕರಣ: ಬಿಸಿಸಿಐ ಸಿಇಒ ರಾಹುಲ್‌ ಜೊಹ್ರಿಗೆ ಕ್ಲೀನ್ ಚಿಟ್
ರಾಹುಲ್ ಜೊಹ್ರಿ
Published On :
ನವದೆಹಲಿ: ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿದ್ದ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಸಿಇಒ ರಾಹುಲ್‌ ಜೊಹ್ರಿ ಅವರಿಗೆ ಕ್ಲೀನ್ ಚಿಟ್ ನೀಡಲಾಗಿದ್ದು, ತಕ್ಷಣದಿಂದಲೇ ಕರ್ತವ್ಯಕ್ಕೆ ಹಾಜರಾಗಬಹುದಾಗಿದೆ.
ಜೊಹ್ರಿ ವಿರುದ್ಧದ ಆರೋಪಗಳ ಬಗ್ಗೆ ತನಿಖೆ ನಡೆಸಿದ ಮೂವರು ಸದಸ್ಯರ ಆಡಳಿತಗಾರರ ಸಮಿತಿಯು, ಬಿಸಿಸಿಐ ಸಿಇಒಗೆ ಕ್ಲೀನ್‌ ಚಿಟ್‌ ನೀಡಿ, ತಕ್ಷಣದಿಂದಲೇ ಕರ್ತವ್ಯಕ್ಕೆ ಹಾಜರಾಗಬಹುದಾಗಿದೆ ಎಂದು ಹೇಳಿದೆ.
ಜೊಹ್ರಿ ವಿರುದ್ಧ ಇಬ್ಬರು ಮಹಿಳೆಯರು ಮಾಡಿದ್ದ ಲೈಂಗಿಕ ಕಿರುಕುಳ ಆರೋಪಗಳು ಕೇವಲ ಸೃಷ್ಟಿಸಲ್ಪಟ್ಟದೆಂದು ತನಿಖಾ ಮಂಡಳಿ ಸ್ಪಷ್ಟಪಡಿಸಿದೆ. ಅಲ್ಲದೆ ತನಿಖಾ ಮಂಡಳಿಯ ಓರ್ವ ಸದಸ್ಯರು ಜೊಹ್ರಿಗೆ ಗೆ ಲಿಂಗ ಸೂಕ್ಷ್ಮತೆಯ ಆಪ್ತ ಸಮಾಲೋಚನೆಯನ್ನು ಶಿಫಾರಸು ಮಾಡಿದ್ದಾರೆ.
ಜೊಹ್ರಿ ವಿರುದ್ಧ ಲೈಂಗಿಕ ಕಿರುಕುಳ ಮತ್ತು ದುರ್ನಡತೆಯ ಆರೋಪ ಕೇಳಿ ಬಂದ ತಕ್ಷಣ ಅವರಿಗೆ ಬಲವಂತದ ಮೂರು ವಾರಗಳ ರಜೆಯ ಮೇಲೆ ಕಳುಹಿಸಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.