ಕಮರಿತು ವನಿತೆಯರ ಟಿ20 ವಿಶ್ವಕಪ್ ಕನಸು: ಸೆಮಿಫೈನಲ್ ನಲ್ಲಿ ಇಂಗ್ಲೆಂಡ್ ವಿರುದ್ಧ 8 ವಿಕೆಟ್ ಗಳ ಸೋಲು
ಐಸಿಸಿ ಮಹಿಳಾ ಟಿ20 ವಿಶ್ವಕಪ್ ಗೆಲ್ಲುವ ಕನಸು ಕಾಣುತ್ತಿದ್ದ ಭಾರತೀಯ ಕ್ರಿಕೆಟ್ ಅಭಿಮಾನಿಗಳ ಕನಸು ಕಮರಿ ಹೋಗಿದ್ದು, ಸೆಮಿ ಫೈನಲ್ ನಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ತಂಡ 8 ವಿಕೆಟ್ ಗಳ ಹೀನಾಯ ಸೋಲು ಕಂಡಿದೆ.

Published On :
ಆ್ಯಂಟಿಗುವಾ: ಐಸಿಸಿ ಮಹಿಳಾ ಟಿ20 ವಿಶ್ವಕಪ್ ಗೆಲ್ಲುವ ಕನಸು ಕಾಣುತ್ತಿದ್ದ ಭಾರತೀಯ ಕ್ರಿಕೆಟ್ ಅಭಿಮಾನಿಗಳ ಕನಸು ಕಮರಿ ಹೋಗಿದ್ದು, ಸೆಮಿ ಫೈನಲ್ ನಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ತಂಡ 8 ವಿಕೆಟ್ ಗಳ ಹೀನಾಯ ಸೋಲು ಕಂಡಿದೆ.
ಇಂದು ನಡೆದ ಟೂರ್ನಿಯ ದ್ವಿತೀಯ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಎಂಟು ವಿಕೆಟ್ ಗಳ ಅಂತರದ ಸೋಲನುಭವಿಸಿರುವ ಭಾರತ ತಂಡದ ವಿಶ್ವಕಪ್ ಕನಸು ಭಗ್ನಗೊಂಡಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ ಭಾರತ 19.3 ಓವರ್‌ಗಳಲ್ಲಿ 112 ರನ್‌ಗಳಿಗೆ ತನ್ನೆಲ್ಲ ವಿಕೆಟುಗಳನ್ನು ಕಳೆದುಕೊಂಡಿತು. ಒಂದು ಹಂತದಲ್ಲಿ 13.4 ಓವರ್‌ಗಳಲ್ಲಿ ಮೂರು ವಿಕೆಟ್ ನಷ್ಟಕ್ಕೆ 89 ರನ್ ಗಳಿಸಿ ಸುಸ್ಥಿತಿಯಲ್ಲಿದ್ದ ಭಾರತ 112 ರನ್ ಗಳಿಸುವುದೆರೆಡೆಗೆ ಸರ್ವಪತನವನ್ನು ಕಂಡಿತ್ತು.
ಪ್ರಮುಖವಾಗಿ ಇಂಗ್ಲೆಂಡ್ ತಂಡದ ನಾಯಕಿ ಹೀದರ್ ವೈಯ್ಟ್ ಅವರ ದಾಳಿಗೆ ತತ್ತರಿಸಿದ ಭಾರತ 19.3 ಓವರ್ ನಲ್ಲಿ ಕೇವಲ 112 ರನ್ ಗಳಿಸಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡಿತು. ಆ ಮೂಲಕ ಇಂಗ್ಲೆಂಡ್ ಗೆ ಗೆಲ್ಲಲು 113 ರನ್ ಗಳ ಸಾಧಾರಣ ಗುರಿ ನೀಡಿತು. ಈ ಮೊತ್ತವನ್ನು ಬೆನ್ನು ಹತ್ತಿದ ಇಂಗ್ಲೆಂಡ್ ತಂಡ ಆರಂಭಿಕ ಆಘಾತದ ಹೊರತಾಗಿಯೂ 17.1 ಓವರ್ ನಲ್ಲಿ ಕೇವಲ 2 ವಿಕೆಟ್ ಕಳೆದುಕೊಂಡು ಗುರಿ ಮುಟ್ಟಿತು. ಕೇವಲ 24 ರನ್ ಗಳಿಗೆ 2 ವಿಕೆಟ್ ಕಳೆದುಕೊಂಡಿದ್ದ ಇಂಗ್ಲೆಂಡ್ ತಂಡಕ್ಕೆ ಆಮಿ ಎಲ್ಲೆನ್ ಜೋನ್ಸ್ (ಅಜೇಯ 53 ರನ್) ಮತ್ತು ನಟಾಲಿಯಾ ಸಿವರ್ (ಅಜೇಯ 52 ರನ್) ಜೋಡಿ ಗೆಲುವು ತಂದಿಟ್ಟಿತು.
ಆ ಮೂಲಕ ಇಂಗ್ಲೆಂಡ್ ತಂಡ ಫೈನಲ್ ಗೇರಿದ್ದು, ಫೈನಲ್ ನಲ್ಲಿ ತನ್ನ ಸಾಂಪ್ರದಾಯಿಕ ಎದುರಾಳಿ ಆಸ್ಟ್ರೇಲಿಯಾ ತಂಡವನ್ನು ಎದುರಿಸಲಿದೆ.
ಕಳೆದ ವರ್ಷ ನಡೆದ ಏಕದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲೂ ಇಂಗ್ಲೆಂಡ್ ವಿರುದ್ಧ ಭಾರತ ಮುಗ್ಗರಿಸಿತ್ತು. ಇದರೊಂದಿಗೆ ಸತತ ಎರಡನೇ ಸಾಲಿನಲ್ಲೂ ವಿಶ್ವಕಪ್ ನಷ್ಟವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್indiaಭಾರತಇಂಗ್ಲೆಂಡ್EnglandICC Women\'s World T20Antiguaಆ್ಯಂಟಿಗುವಾ2nd Semi Final2ನೇ ಸೆಮಿ ಫೈನಲ್ಐಸಿಸಿ ಮಹಿಳಾ ವಿಶ್ವ ಟಿ-20
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


