ಕೊನೆಗೂ ಕನ್ನಡಿಗ ಮಾಯಾಂಕ್‌ಗೆ ಸಿಗದ ಛಾನ್ಸ್, ಕೆಎಲ್ ರಾಹುಲ್ ಜೊತೆ ಪೃಥ್ವಿ ಶಾ ಕಣಕ್ಕೆ!
ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿ ನಾಳೆಯಿಂದ ಆರಂಭವಾಗುತ್ತಿದ್ದು ಯುವ ಕ್ರಿಕೆಟಿಗ ಪೃಥ್ವಿ ಶಾ ಟೆಸ್ಟ್ ಪಾದಾರ್ಪಣೆ ಪಂದ್ಯದಲ್ಲಿ ಕೆಎಲ್ ರಾಹುಲ್ ಜೊತೆ ಆರಂಭಿಕರಾಗಿ ಕಣಕ್ಕಿಳಿಯುತ್ತಿದ್ದಾರೆ...

Published On :
ಮುಂಬೈ: ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿ ನಾಳೆಯಿಂದ ಆರಂಭವಾಗುತ್ತಿದ್ದು ಯುವ ಕ್ರಿಕೆಟಿಗ ಪೃಥ್ವಿ ಶಾ ಟೆಸ್ಟ್ ಪಾದಾರ್ಪಣೆ ಪಂದ್ಯದಲ್ಲಿ ಕೆಎಲ್ ರಾಹುಲ್ ಜೊತೆ ಆರಂಭಿಕರಾಗಿ ಕಣಕ್ಕಿಳಿಯುತ್ತಿದ್ದಾರೆ.
ಇನ್ನೊಂದು ವಿಶೇಷದ ಸಂಗತಿಯೆಂದರೆ ಇದೇ ಮೊದಲ ಬಾರಿಗೆ ಪಂದ್ಯಕ್ಕೂ ಒಂದು ದಿನ ಮೊದಲೇ 12 ಸದಸ್ಯರನ್ನೊಳಗೊಂಡ ತಂಡವನ್ನು ಟೀಂ ಇಂಡಿಯಾ ಪ್ರಕಟಿಸಿದೆ.
ಇನ್ನು ಅಭ್ಯಾಸ ಪಂದ್ಯದಲ್ಲಿ ಭರ್ಜರಿಯಾಗಿ ಬ್ಯಾಟಿಂಗ್ ಮಾಡಿದ್ದ ಮಾಯಾಂಕ್ ಅಗರ್ವಾಲ್ ಗೆ ಆಡುವ ಬಳಗದಲ್ಲಿ ಸ್ಥಾನ ಸಿಕ್ಕಿಲ್ಲ. ಇನ್ನು ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಹೈದರಾಬಾದ್ ಆಟಗಾರ ಹನುಮ ವಿಹಾರಿಗೂ ಸಹ ಸ್ಥಾನ ಸಿಕ್ಕಿಲ್ಲ. ಬದಲಿಗೆ ಇಂಗ್ಲೆಂಡ್ ವಿರುದ್ಧದ ಕೊನೆಯ ಎರಡು ಟೆಸ್ಟ್ ಪಂದ್ಯಗಳಿಗೆ ಆಯ್ಕೆಯಾಗಿದ್ದರು ಸ್ಥಾನ ಪಡೆದುಕೊಳ್ಳುವಲ್ಲಿ ವಿಫಲಗೊಂಡಿದ್ದ ಪೃಥ್ವಿ ಶಾ ಆರಂಭಿಕರಾಗಿ ಕಣಕ್ಕಿಳಿಯುತ್ತಿದ್ದಾರೆ.
ಟೀಂ ಇಂಡಿಯಾ ತಂಡ
ಕೆಎಲ್ ರಾಹುಲ್, ಪೃಥ್ವಿ ಶಾ, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ(ನಾಯಕ), ಅಜಿಂಕ್ಯ ರಹಾನೆ, ರಿಷಬ್ ಪಂತ್(ವಿಕೆಟ್ ಕೀಪರ್), ಆರ್ ಅಶ್ವಿನ್, ರವೀಂದ್ರ ಜಡೇಜಾ, ಉಮೇಶ್ ಯಾದವ್, ಮೊಹಮ್ಮದ್ ಶಮಿ, ಶಾರ್ದುಲ್ ಠಾಕೂರ್
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್ಟೀಂ ಇಂಡಿಯಾTeam IndiaKL RahulWest indiesಕೆಎಲ್ ರಾಹುಲ್ವೆಸ್ಟ್ ಇಂಡೀಸ್Rajkotರಾಜ್ ಕೋಟ್ಪೃಥ್ವಿ ಶಾPrithvi Shaw
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


