ಅನುಷ್ಕಾ ಶರ್ಮಾ, ಶಿಖರ್ ಧವನ್ ಪತ್ನಿ ಆಯೇಷಾ ನಡುವಿನ ಜಗಳಕ್ಕೆ ಬಲಿಯಾದ್ರಾ ಧವನ್?
2018ರ ಏಷ್ಯಾ ಕಪ್ ಟೂರ್ನಿಯಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದ್ದರೂ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯಿಂದ ಶಿಖರ್ ಧವನ್ ರನ್ನು ಕೈಬಿಡಲಾಗಿದ್ದು ಇದು ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು...

Published On :
ಮುಂಬೈ: 2018ರ ಏಷ್ಯಾ ಕಪ್ ಟೂರ್ನಿಯಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದ್ದರೂ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯಿಂದ ಶಿಖರ್ ಧವನ್ ರನ್ನು ಕೈಬಿಡಲಾಗಿದ್ದು ಇದು ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು.
ಇನ್ನು ಟೆಸ್ಟ್ ಸರಣಿಯಿಂದ ಶಿಖರ್ ಧವನ್ ರನ್ನು ಕೈಬಿಡುವುದಕ್ಕೆ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಹಾಗೂ ಶಿಖರ್ ಧವನ್ ಪತ್ನಿ ಆಯೇಷಾ ನಡುವಿನ ಜಗಳವೇ ಇದಕ್ಕೆ ಕಾರಣವಿರಬಹುದಾ ಎಂಬ ಅನುಮಾನಗಳು ಶುರವಾಗಿದೆ.
ಇಂಗ್ಲೆಂಡ್ ಸರಣಿಯ ಸಂದರ್ಭದಲ್ಲಿ ಶಿಖರ್ ಧವನ್ ಪತ್ನಿ ಆಯೇಷಾ ಮತ್ತು ಅನುಷ್ಕಾ ಶರ್ಮಾ ನಡುವೆ ಜಗಳ ನಡೆದಿತ್ತು ಎನ್ನಲಾಗಿದೆ. ತಂಡದ ಆಯ್ಕೆಯ ವಿಚಾರದಲ್ಲಿ ಅನುಷ್ಕಾ ಶರ್ಮಾ ಮೂಗು ತೂರಿಸುತ್ತಿದ್ದುದ್ದಕ್ಕೆ ಇವರಿಬ್ಬರ ನಡುವೆ ಜಗಳ ನಡೆದಿತ್ತು ಎನ್ನಲಾಗಿದೆ.
ಇದೇ ವಿಚಾರದಲ್ಲಿ ಇಬ್ಬರು ಆಟಗಾರರ ನಡುವೆ ವೈಮನಸ್ಯ ಶುರುವಾಗಿದ್ದು ಧವನ್ ಗೆ ಕೊಕ್ ನೀಡಿದ್ದಕ್ಕೆ ಕಾರಣ ಎಂಬ ಮಾತು ಕೇಳಿಬರುತ್ತಿದೆ. ತಂಡದ ಸಭೆಗಳಲ್ಲಿ ಕೊಹ್ಲಿ ಜೊತೆ ಅನುಷ್ಕಾ ಕೂಡ ಬಂದು ಸಲಹೆ ನೀಡುತ್ತಿದ್ದರು ಎನ್ನಲಾಗಿದೆ. ಇದೀಗ ಟೀಂ ಇಂಡಿಯಾದಲ್ಲಿ ಬಿರುಕಿಗೆ ಕಾರಣವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್ಟೀಂ ಇಂಡಿಯಾTeam IndiaAnushka Sharmaಅನುಷ್ಕಾ ಶರ್ಮಾVirat Kohliವಿರಾಟ್ ಕೊಹ್ಲಿShikhar Dhawanಶಿಖರ್ ಧವನ್Ayeshaಅಯೇಷಾ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


