ಕ್ರಿಕೆಟ್

ಸರ್ಫಿಂಗ್ ಅಪಘಾತದಲ್ಲಿ ಆಸ್ಟ್ರೇಲಿಯಾ ದಿಗ್ಗಜ ಕ್ರಿಕೆಟಿಗ ಮ್ಯಾಥ್ಯೂ ಹೇಡನ್ ಬೆನ್ನು ಮೂಳೆಗೆ ತೀವ್ರ ಗಾಯ

ಆಸ್ಟ್ರೇಲಿಯಾದ ದಿಗ್ಗಜ ಕ್ರಿಕೆಟಿಗ ಮ್ಯಾಥ್ಯೂ ಹೇಡನ್ ಅಪಘಾತವೊಂದರಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ...

ಸರ್ಫಿಂಗ್ ಅಪಘಾತದಲ್ಲಿ ಆಸ್ಟ್ರೇಲಿಯಾ ದಿಗ್ಗಜ ಕ್ರಿಕೆಟಿಗ ಮ್ಯಾಥ್ಯೂ ಹೇಡನ್ ಬೆನ್ನು ಮೂಳೆಗೆ ತೀವ್ರ ಗಾಯ
ಆಸ್ಟ್ರೇಲಿಯಾ ದಿಗ್ಗಜ ಕ್ರಿಕೆಟಿಗ ಮ್ಯಾಥ್ಯೂ ಹೇಡನ್ ತಲೆಗೆ ಗಾಯ
Published On :
ಸಿಡ್ನಿ: ಆಸ್ಟ್ರೇಲಿಯಾದ ದಿಗ್ಗಜ ಕ್ರಿಕೆಟಿಗ ಮ್ಯಾಥ್ಯೂ ಹೇಡನ್ ಅಪಘಾತವೊಂದರಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ. 
ಹೇಡನ್ ತಮ್ಮ ತಲೆಗೆ ಆಗಿರುವ ಗಾಯದ ಫೋಟೋಗಳನ್ನು ತಮ್ಮ ಇನ್'ಸ್ಟಾಗ್ರಾಂ ಖಾತೆಯಲ್ಲಿ ಹಾಕಿದ್ದು, ಈ ಪೋಟೋಗಳು ಇದೀಗ ವೈರಲ್ ಆಗಿವೆ. 
ಅಪಘಾತದ ಬಳಿಕ ಹೇಡನ್ ಅವರನ್ನು ಕೂಡಲೇ ಸ್ಕ್ಯಾನಿಂಗ್'ಗೆ ಒಳಪಡಿಸಲಾಗಿದ್ದು, ತಲೆಗೆ ಭಾರೀ ಪ್ರಮಾಣದಲ್ಲಿ ಪೆಟ್ಟು ಬಿದ್ದಿದೆ ಎಂದು ಹೇಳಲಾಗುತ್ತಿದೆ. 
ಅಪಘಾತದ ವೇಳೆಯಲ್ಲಿ ನನ್ನನ್ನು ಶೀಘ್ರ ಆಸ್ಪತ್ರೆಗೆ ತಲುಪಿಸಿ ಸ್ಕ್ಯಾನಿಂಗ್'ಗೆ ಸಹಕರಿಸಿದ ಬೆನ್ ಸ್ಯೂ ಕೆಲ್ಲಿಗೆ ಹೇಡನ್ ಅವರು ಧನ್ಯವಾದ ಹೇಳಿದ್ದಾರೆ. 
ರಜಾ ದಿನವಾದ್ದರಿಂದ ಕುಟುಂಬದ ಜೊತೆಗೆ ಹೇಡನ್ ಅವರು ಕ್ವೀನ್ಸ್ ಲೆಂಡ್'ಗೆ ತೆರಳಿದ್ದರು. ಸಮುದ್ರದಲ್ಲಿ ಮಗನೊಂದಿಗೆ ಸರ್ಫಿಂಗ್ ಆಟವಾಡುತ್ತಿದ್ದ ವೇಳೆ ಹೇಡನ್ ಅವರ ತಲೆಗೆ ಬಲವಾದ ಪೆಟ್ಟು ಬಿದ್ದಿದೆ ಎಂದು ತಿಳಿದುಬಂದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.