ಕ್ರಿಕೆಟ್

ಟೀಂ ಇಂಡಿಯಾ ಆಟಗಾರರ ಜೊತೆ ಹೋಗಲು ಪತ್ನಿಯರಿಗೂ ಅವಕಾಶ: ಕೊಹ್ಲಿ ಮನವಿಗೆ ಗಂಭೀರ್ ಹೇಳಿದ್ದೇನು?

ಟೀಂ ಇಂಡಿಯಾ ವಿದೇಶಿ ಪ್ರವಾಸ ಕೈಗೊಂಡಾಗ ಆಟಗಾರರು ತಮ್ಮ ಜತೆ ಪತ್ನಿಯರನ್ನು ಕರೆದುಕೊಂಡು ಹೋಗಲು ಅವಕಾಶ ನೀಡಬೇಕು ಎಂದು ಟೀಂ ಇಂಡಿಯಾ...

ಟೀಂ ಇಂಡಿಯಾ ಆಟಗಾರರ ಜೊತೆ ಹೋಗಲು ಪತ್ನಿಯರಿಗೂ ಅವಕಾಶ: ಕೊಹ್ಲಿ ಮನವಿಗೆ ಗಂಭೀರ್ ಹೇಳಿದ್ದೇನು?
ಗೌತಮ್ ಗಂಭೀರ್, ವಿರಾಟ್ ಕೊಹ್ಲಿ
Published On :
ನವದೆಹಲಿ: ಟೀಂ ಇಂಡಿಯಾ ವಿದೇಶಿ ಪ್ರವಾಸ ಕೈಗೊಂಡಾಗ ಆಟಗಾರರು ತಮ್ಮ ಜತೆ ಪತ್ನಿಯರನ್ನು ಕರೆದುಕೊಂಡು ಹೋಗಲು ಅವಕಾಶ ನೀಡಬೇಕು ಎಂದು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅನುಮತಿ ನೀಡುವಂತೆ ಬಿಸಿಸಿಐಗೆ ಅರ್ಜಿ ಸಲ್ಲಿಸಿದ್ದು ಇದಕ್ಕೆ ಹಿರಿಯ ಕ್ರಿಕೆಟಿಗ ಗೌತಮ್ ಗಂಭೀರ್ ಸಲಹೆಯೊಂದನ್ನು ನೀಡಿದ್ದಾರೆ. 
ವಿರಾಟ್ ಕೊಹ್ಲಿ ಸುಪ್ರೀಂಕೋರ್ಟ್ ನಿರ್ದೇಶಿತ ಕ್ರಿಕೆಟ್ ಆಡಳಿತ ಮಂಡಳಿಗೆ ಮನವಿ ಮಾಡಿದ್ದು ಸದ್ಯ ಮಂಡಳಿ ಯಾವುದೇ ನಿರ್ಧಾರವನ್ನು ಕೈಗೊಳ್ಳಲು ಇಚ್ಛಿಸಿಲ್ಲ. ಹೊಸ ಮಂಡಳಿ ಅಧಿಕಾರಕ್ಕೆ ಬಂದ ಮೇಲೆ ಈ ಬಗ್ಗೆ ಕ್ರಮ ಕೈಗೊಳ್ಳುತ್ತದೆ ಎಂದು ಹೇಳಿ ಕೈ ತೊಳೆದುಕೊಂಡಿದೆ. 
ಈ ಬಗ್ಗೆ ಪ್ರತಿಕ್ರಿಯಿಸಿರುವ ಗೌತಮ್ ಗಂಭೀರ್ ಆಟಗಾರರ ವೈಯಕ್ತಿಕ ಅಭಿಪ್ರಾಯ ಬೇರೆ, ಕೆಲವರು ಸರಣಿ ಮುಗಿಯುವವರೆಗೂ ಪತ್ನಿಯರು ಜತೆಗೆ ಇರಬೇಕು ಅಂತಾರೆ. ಕೆಲವರು ಕುಟುಂಬಕ್ಕೆ ಕಡಿಮೆ ಮಹತ್ವ ನೀಡಿ ಆಟದ ಮೇಲೆ ಗಮನ ಕೇಂದ್ರಿಕರಿಸುತ್ತಾರೆ. ಇದೆನೇ ಇರಲಿ, ಬಿಸಿಸಿಐ ಯಾವುದೇ ನಿರ್ಧಾರ ಕೈಗೊಳ್ಳಲಿ ಭಾರತೀಯ ಕ್ರಿಕೆಟ್ ಗೆ ಒಳಿತಾಗುವ ಹಾಗೂ ಅತ್ಯುತ್ತಮ ನಿರ್ಧಾರವನ್ನು ಕೈಗೊಳ್ಳಬೇಕು ಎಂದು ಗಂಭೀರ್ ತಮ್ಮ ಅಭಿಪ್ರಾಯ ಹೇಳಿದ್ದಾರೆ. 
ಸದ್ಯದ ನಿಯಮದ ಪ್ರಕಾರ, ತಂಡ ವಿದೇಶಿ ಪ್ರವಾಸ ಕೈಗೊಂಡಾಗ 2 ವಾರಗಳ ಕಾಲ ಆಟಗಾರರು ಪತ್ನಿಯರೊಂದಿಗೆ ಕಾಲ ಕಳೆಯಬಹುದು. ಅದಕ್ಕಿಂತ ಹೆಚ್ಚಿನ ಕಾಲ ಅವರೊಂದಿಗೆ ಇರಲು ಅವಕಾಶವಿಲ್ಲ. ಈ ಹಿನ್ನೆಲೆಯಲ್ಲಿ ವಿರಾಟ್ ಕೊಹ್ಲಿ ಈ ಬೇಡಿಕೆಯನ್ನು ಮುಂದಿಟ್ಟಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.